ಹೊಸದುರ್ಗ: ಕುರಿ ಮೇಯಿಸಲು ತೆರಳಿದ್ದ ವೇಳೆ ಹೆಜ್ಜೇನು ದಾಳಿ: ಓರ್ವ ಕುರಿಗಾಹಿ ಸಾವು

ಕುರಿ ಮೇಯಿಸಲು ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ನಡಿದಿದೆ.

ಹೊಸದುರ್ಗ: ಕುರಿ ಮೇಯಿಸಲು ತೆರಳಿದ್ದ ವೇಳೆ ಹೆಜ್ಜೇನು ದಾಳಿ: ಓರ್ವ ಕುರಿಗಾಹಿ ಸಾವು
ಬಲ್ಲಾಳ ಸಮುದ್ರ ಗ್ರಾಮದ ಮಹೇಶ (55) ಮೃತ ವ್ಯಕ್ತಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 30, 2022 | 4:16 PM

ಚಿತ್ರದುರ್ಗ: ಕುರಿ ಮೇಯಿಸಲು ತೆರಳಿದ್ದ ವೇಳೆ ಹೆಜ್ಜೇನು ದಾಳಿ (bee attack) ಮಾಡಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ನಡೆದಿದೆ. ಬಲ್ಲಾಳ ಸಮುದ್ರ ಗ್ರಾಮದ ಮಹೇಶ (55) ಮೃತ ವ್ಯಕ್ತಿ. ಹೊಸದುರ್ಗ ತಾಲೂಕು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಚಾಕುವಿನಿಂದ ಇರಿದು ಪತಿಯಿಂದಲೆ ಪತ್ನಿಯ ಹತ್ಯೆ

ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕಾವೇರಿ‌ ನಗರದಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ ನಡೆದಿರುವಂಹ ಘಟನೆ ಹೊಸಕೋಟೆ ತಾಲೂಕಿನ ಕಾವೇರಿ‌ ನಗರದಲ್ಲಿ ನಡೆದಿದೆ. ಸ್ವಪ್ನ (22) ಮೃತ ಪತ್ನಿ. ಸುಧಾಕರ್​ ಹತ್ಯೆಗೈದ ಪತಿ. ಕಳೆದ 2 ವರ್ಷಗಳಿಂದ ದಂಪತಿ ದೂರವಾಗಿದ್ದರು. ಮೃತ ಮಹಿಳೆ ತವರು ಮನೆಗೆ ಬಂದು ಬದುಕು ಕಟ್ಟಿಕೊಂಡಿದ್ದರು.  ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಟಾಟ ಏಸ್ ವಾಹನ ಡಿಕ್ಕಿ: ಓರ್ವ ಮಹಿಳೆ ಸಾವು

ಬೆಂಗಳೂರು: ಬೈಕ್​ಗೆ ಟಾಟ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ ಸವಾರಿ ಸಾವನ್ನಪ್ಪಿರವಂತಹ ಘಟನೆ ಕೆ.ಆರ್.ಪುರಂ ಹ್ಯಾಂಗಿಂಗ್ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ಶಾಲಿನಿ (27) ಸಾವನ್ನಪ್ಪಿದ ಮಹಿಳೆ. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದ್ದು, ಮುಂದೆ ಸಾಗುತ್ತಿದ್ದ ಬೈಕ್​ಗೆ​ ಹಿಂಬದಿಯಿಂದ ಟಾಟ ಏಸ್ ವಾಹನ ಬಂದು ಗುದ್ದಿದೆ. ಅಪಘಾತದಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಶಾಲಿನಿ ಮೃತಪಟ್ಟರೆ, ಹಿಂಬದಿ ಸವಾರ ಅಲೆನ್ ಸ್ಮಿತ್​ಗೆ ಗಾಯವಾಗಿದೆ. ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನ ದಾಖಲಿಸಲಾಗಿತ್ತು. ಅಪಘಾತ ಬಳಿಕ ಬೈಕ್ ಬಿಟ್ಟು ಟಾಟ ಏಸ್ ಚಾಲಕ ತೆರಳಿದ್ದಾನೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಮರಳೂರು ಕೆರೆ ಬಳಿ ನಡೆದಿದೆ.  ಹುಲಿಯೂರುದುರ್ಗ ನಿವಾಸಿಗಳಾದ ಅರುಣ್‌, ಚೇತನ್‌ ಮೃತ ದುರ್ದೈವಿಗಳು. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ಚಲಿಸುತ್ತಿದ್ದ ಕಾರಿಗೆ, ಕುಣಿಗಲ್ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ.  ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣವಾಗಿ ಕಾರು ನಜ್ಜುಗುಜ್ಜಾಗಿದೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವು

ಬಳ್ಳಾರಿ: ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವ ಘಟನೆ ಸಿರುಗುಪ್ಪ ತಾಲೂಕಿನ ಕೊತ್ತಲಚಿಂತ ಗ್ರಾಮದಲ್ಲಿ ನಡೆದಿದೆ. ಹನುಮರೆಡ್ಡಿ(62) ಮೃತ ವ್ಯಕ್ತಿ. ಹನುಮರೆಡ್ಡಿ ಪೆಟ್ರೋಲ್ ಹಾಕಿಸಿಕೊಂಡು ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.    ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಗಿದೆ.

ಖಾಸಗಿ ಬಸ್​ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ: ಮಹಿಳೆ ಸಾವು

ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು 15 ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಗಾಯಳುಗಳು ಎನ್.ಆರ್ ಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡಿದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:13 pm, Wed, 30 November 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ