ಕ್ರೈಸ್ತ ಧರ್ಮಕ್ಕೆ ಮತಾಂತರ ವಿವಾದ ಹಿನ್ನೆಲೆ: ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿ ದಿಢೀರ್ ವರ್ಗಾವಣೆ
ಹೊಸದುರ್ಗದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ವಿವಾದ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರದ ಆರೋಪ ಮಾಡಿದ್ದರು. ಮಾರುತಿ ನಗರ, ಶಾಂತಿ ನಗರದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿ ದಿಢೀರ್ ವರ್ಗಾವಣೆ ಮಾಡಲಾಗಿದೆ. ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆರೋಪವನ್ನು ತಳ್ಳಿ ಹಾಕುವಂತಹ ವರದಿಯನ್ನು ತಹಶೀಲ್ದಾರ್ ತಿಪ್ಪೇಸ್ವಾಮಿ ನೀಡಿದರಿಂದ ಅವರ ವರ್ಗಾವಣೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಹೊಸದುರ್ಗದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ವಿವಾದ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರದ ಆರೋಪ ಮಾಡಿದ್ದರು. ಮಾರುತಿ ನಗರ, ಶಾಂತಿ ನಗರದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ನವೆಂಬರ್ 30 ರಂದು ಡಿಸಿ ಮೂಲಕ ಸರ್ಕಾರಕ್ಕೆ ತಹಶೀಲ್ದಾರ್ ತಿಪ್ಪೇಸ್ವಾಮಿ ವರದಿ ಸಲ್ಲಿಸಿದ್ದರು. ‘ಬಲವಂತದ ಮತಾಂತರ ನಡೆದಿಲ್ಲ ಎಂದು ಜನ ಹೇಳಿದ್ದಾರೆ’ ಹೀಗೆಂದು ತಹಶೀಲ್ದಾರ್ ತಿಪ್ಪೇಸ್ವಾಮಿ ವರದಿ ಸಲ್ಲಿಸಿದ್ದರು. ವರದಿಯಿಂದ ಗೂಳಿಹಟ್ಟಿ ಶೇಖರ್ಗೆ ಮುಜುಗರ ಆದ ಹಿನ್ನೆಲೆಯಲ್ಲಿ ಹೊಸದುರ್ಗ ತಹಶೀಲ್ದಾರ್ ತಿಪ್ಪೇಸ್ವಾಮಿ ವರ್ಗಾವಣೆ ಶಂಕೆ ವ್ಯಕ್ತವಾಗಿದೆ. ನೂತನ ತಹಶೀಲ್ದಾರ್ ಆಗಿ ಮಲ್ಲಿಕಾರ್ಜುನ್ ನಿಯೋಜನೆ ಮಾಡಲಾಗಿದೆ. ಸರ್ಕಾರ ತಿಪ್ಪೇಸ್ವಾಮಿಗೆ ಸ್ಥಳ ನೀಡದೆ ವರ್ಗಾವಣೆ ಮಾಡಿದೆ.
ಮತಾಂತರ ನಿಷೇಧ ಕಾಯ್ದೆಗೆ ಕ್ರೈಸ್ತ ಸಮುದಾಯದಿಂದ ಧರಣಿ ಬೆಳಗಾವಿ ಸುವರ್ಣಸೌಧದ ಬಳಿ ಇಂದು ಕ್ರೈಸ್ತ ಸಮುದಾಯದಿಂದ ಉಪವಾಸ ಸತ್ಯಾಗ್ರಹ ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಉಪವಾಸ ಸತ್ಯಾಗ್ರಹಕ್ಕೆ ಕಾಂಗ್ರೆಸ್ ನಾಯಕರಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನಿಸಲಾಗಿದೆ.
ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಶಾಂತ ಜತ್ತನ್ನ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಮತಾಂತರ ನಿಷೇಧ ಕಾಯ್ದೆ ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ಕ್ರೈಸ್ತ ಸಮುದಾಯದ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆಂದು ಆರೋಪಿಸಿ ಸತ್ಯಾಗ್ರಹ ಮಾಡಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಬೆಳಗಾವಿಯ ಮೆಥೋಡಿಸ್ಟ್ ಚರ್ಚ್ ಬಳಿ ಜಮಾವಣೆಗೊಂಡು ಬಳಿಕ ನೇರವಾಗಿ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ಗೆ ಪ್ರತಿಭಟನಾಕಾರರು ತೆರಳಲಿದ್ದಾರೆ.
ಕ್ರೈಸ್ತ ಸಮುದಾಯದ ಧರಣಿಯಲ್ಲಿ ಸಿದ್ದರಾಮಯ್ಯ ಭಾಗಿ ಮತಾಂತರ ನಿಷೇಧ ಕಾಯ್ದೆಗೆ ಕ್ರೈಸ್ತ ಸಮುದಾಯ ವಿರೋಧ ವ್ಯಕ್ತಪಡಿಸಿ ಬೆಳಗಾವಿ ಸುವರ್ಣಸೌಧದ ಬಳಿ ಇಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ. ಧರಣಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಭಾಗವಹಿಸಲಿದ್ದಾರೆ. ಕ್ರೈಸ್ತ ಸಮುದಾಯದ ಜನರ ಸಮಸ್ಯೆ ಆಲಿಸಲಿದ್ದಾರೆ.
ಇದನ್ನೂ ಓದಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಿನ್ನಿಸುವ ವ್ಯವಸ್ಥಿತ ಜಾಲವೊಂದು ಪತ್ತೆ; ವಿಡಿಯೋ ನೋಡಿ
Published On - 9:27 am, Fri, 17 December 21