ಚಿತ್ರದುರ್ಗ ಪ್ರವಾಸೋದ್ಯಮ ಇಲಾಖೆಯಲ್ಲಿ ಭಾರಿ ಗೋಲ್ ​ಮಾಲ್​; ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ ಪ್ರವಾಸಿ ಟ್ಯಾಕ್ಸಿ

ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರ ನಾನಾ ಯೋಜನೆಗಳನ್ನ ರೂಪಿಸಿದೆ. ಆದರೆ ಭ್ರಷ್ಟಾಚಾರದಿಂದಾಗಿ ಅನೇಕ  ಯೋಜನೆಗಳು ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅದರಂತೆ ಚಿತ್ರದುರ್ಗ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಯೋಜನೆಯಲ್ಲಿ ಭಾರಿ ಗೋಲ್​ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಚಿತ್ರದುರ್ಗ ಪ್ರವಾಸೋದ್ಯಮ ಇಲಾಖೆಯಲ್ಲಿ ಭಾರಿ ಗೋಲ್ ​ಮಾಲ್​; ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ ಪ್ರವಾಸಿ ಟ್ಯಾಕ್ಸಿ
ಚಿತ್ರದುರ್ಗ ಪ್ರವಾಸೋದ್ಯಮ ಇಲಾಖೆಯಲ್ಲಿ ಗೋಲ್​ಮಾಲ್​ ಆರೋಪ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 24, 2023 | 3:15 PM

ಚಿತ್ರದುರ್ಗ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಯೋಜನೆಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ಕಾರು ಚಾಲಕರು ಆರೋಪಿಸಿದ್ದಾರೆ. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲೆಂದು ಸರ್ಕಾರದಿಂದ ಪ್ರವಾಸಿ ಟ್ಯಾಕ್ಸಿ ಯೋಜನೆ ರೂಪಿಸಲಾಗಿದೆ. ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ನೀಡುವ ಈ ಯೋಜನೆ ಅರ್ಹ ಫಲಾನುಭವಿಗಳಿಗೆ ಮಾತ್ರ ದಕ್ಕುತ್ತಿಲ್ಲ. ಬದಲಾಗಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಬ್ರೋಕರ್​ಗಳ ಮೂಲಕ ಹಣ ವಸೂಲಿ ಮಾಡಿ ತಮಗೆ ಬೇಕಾದವರಿಗೆ ಟ್ಯಾಕ್ಸಿ ನೀಡುತ್ತಿದ್ದಾರೆ. ಕಳೆದ ಒಂದು ದಶಕದಿಂದ ಈ ದಂಧೆ ನಡೆಯುತ್ತಿದೆ ಎಂದು ಚಾಲಕರು ಆರೋಪಿಸಿದ್ದಾರೆ.

ಇನ್ನು ಈ ಚಾಲಕರು ತಮ್ಮ ಆರೋಪಕ್ಕೆ ತಕ್ಕಂತೆ ಒಂದು ವಿಡಿಯೋ ಸಹ ರಿಲೀಸ್ ಮಾಡಿದ್ದಾರೆ. ಅಬ್ದುಲ್ ರಹೆಮಾನ್ ಎಂಬ ಬ್ರೋಕರ್ ಒಂದು ಪ್ರವಾಸಿ ಟ್ಯಾಕ್ಸಿಗೆ 20ಸಾವಿರ ರೂಪಾಯಿ ಕೊಡಬೇಕು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಂದ ಪ್ರವಾಸಿ ಟ್ಯಾಕ್ಸಿ ಕೊಡಿಸುತ್ತೇನೆಂದು ಹೇಳಿರುವ ವಿಡಿಯೋ ಸಹ ಈಗ ವೈರಲ್ ಆಗಿದೆ. ಆ ಮೂಲಕ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಪ್ರವಾಸಿ ಟ್ಯಾಕ್ಸಿ ನೀಡಲು ಬ್ರೋಕರ್​ಗಳ ಮೂಲಕ ಹಣ ಪೀಕುತ್ತಾರೆಂಬ ಆರೋಪಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಆದರೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಮಾತ್ರ ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ:Karnataka Cyber Crime: 2022ರಲ್ಲಿ ಸೈಬರ್ ಅಪರಾಧಗಳಿಂದ ಕರ್ನಾಟಕವು ನಿತ್ಯ 1 ಕೋಟಿ ರೂ.ಗಳನ್ನು ಕಳೆದುಕೊಂಡಿದೆ: ಗೃಹ ಇಲಾಖೆ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರವಾಸೋದ್ಯಮ ಇಲಾಖೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಬಯಲಾಗಿದೆ. ಪ್ರವಾಸಿ ಟ್ಯಾಕ್ಸಿ ವಿತರಣೆಯಲ್ಲಿ ಗೋಲ್ ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವರ್ಷಕ್ಕೆ ಸುಮಾರು 30 ಪ್ರವಾಸಿ ಟ್ಯಾಕ್ಸಿ ವಿತರಣೆ ಆಗುತ್ತಿದ್ದು, ಕಳೆದೊಂದು ದಶಕದಿಂದ ಪ್ರತಿ ವರ್ಷವೂ ಗೋಲ್ ಮಾಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಬಗ್ಗೆ ಸರ್ಕಾರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ವರದಿ: ಬಸವರಾಜ ಮುದನೂರ್ ಟಿವಿ9 ಚಿತ್ರದುರ್ಗ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ