ಫೋಕ್ಸೋ ಪ್ರಕರಣ: ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದ ಮುರುಘಾಶ್ರೀ

ಮುರುಘಾಶ್ರೀ, ಸಭೆಯಲ್ಲಿ ತಮ್ಮ ಆಪ್ತರೆದುರು ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದಿದ್ದಾರೆ. ಸಭೆ ನಡೆಸಿ ತಮ್ಮ ಆಪ್ತರೆದುರು ಪ್ರಕರಣದ ಬಗ್ಗೆ ಮುರುಘಾಶ್ರೀಗಳು ಮಾತನಾಡಿದ್ದಾರೆ.

ಫೋಕ್ಸೋ ಪ್ರಕರಣ: ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದ ಮುರುಘಾಶ್ರೀ
ಚಿತ್ರದುರ್ಗದ ಡಾ ಶಿವಮೂರ್ತಿ ಮುರುಘಾ ಶರಣರು
Follow us
TV9 Web
| Updated By: ಆಯೇಷಾ ಬಾನು

Updated on:Aug 27, 2022 | 5:40 PM

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಮತ್ತೊಂದೆಡೆ ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧವೂ ಅತ್ಯಾಚಾರ ಯತ್ನ ಕೇಸ್ ದಾಖಲಾಗಿದೆ. ಇದರ ನಡುವೆ ಮುರುಘಾ ಶ್ರೀಗಳ ಮೇಲೆ ಆರೋಪ ಕೇಳಿ ಬಂದಿದ್ದೇ ತಡ, ಚಿತ್ರದುರ್ಗದ ಮುರುಘಾ ಮಠದಲ್ಲಿ ಶ್ರೀಗಳು ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುರುಘಾಶ್ರೀ, ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದು ಆಪ್ತರೆದುರು ಮನದ ಇಂಗಿತ ವ್ಯಕ್ತಪಡಿಸಿದ್ದಾರೆ.

ಸಲಹಾ ಸಮಿತಿ ಸಭೆಯಲ್ಲಿ ಭಕ್ತರು, ವಕೀಲರು, ವಿವಿಧ ಸಮಾಜಗಳ ಮುಖಂಡರು ಸೇರಿ ಹಲವರು ಭಾಗಿಯಾಗಿದ್ರು. ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಮುಖಂಡರು, ನೇರವಾಗಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಷಡ್ಯಂತ್ರದ ಆರೋಪ ಮಾಡಿದ್ದಾರೆ. ಆದ್ರೆ ಮುರುಘಾಶ್ರೀ, ಸಭೆಯಲ್ಲಿ ತಮ್ಮ ಆಪ್ತರೆದುರು ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದಿದ್ದಾರೆ. ಸಭೆ ನಡೆಸಿ ತಮ್ಮ ಆಪ್ತರೆದುರು ಪ್ರಕರಣದ ಬಗ್ಗೆ ಮುರುಘಾಶ್ರೀಗಳು ಮಾತನಾಡಿದ್ದಾರೆ. ತಪ್ಪು ಒಪ್ಪಿಕೊಂಡು ಬಂದರೆ ಕ್ಷಮಿಸಿ ಸಂಧಾನ ಮಾಡೋಣ. ಕಾನೂನು ಸಮರಕ್ಕೆ ಸೈ ಅಂದ್ರೆ ಕಾನೂನು ಮೂಲಕವೇ ಹೋರಾಟ ಮಾಡೋಣಾ ಎಂದು ಆಪ್ತರೆದುರು ಮನದ ಇಂಗಿತ ವ್ಯಕ್ತಪಡಿಸಿದ್ದಾರೆ.

ಕೆಲ ಹಿರಿಯ ಅಧಿಕಾರಿಗಳು ಮತ್ತು ಸರ್ಕಾರದ ಮಟ್ಟದಲ್ಲಿ ಮುರುಘಾಮಠದ ಮುರುಘಾಶ್ರೀ ಮಾತುಕತೆ ನಡೆಸಿದ್ದಾರೆ. ಬಂಧನದ ಭೀತಿ ನಡುವೆ ಎದೆಗುಂದದೆ ಮಾತುಕತೆ ನಡೆಸಿದ್ದಾರೆ. ಇನ್ನು ಆರೋಪ ಕೇಳಿ ಬಂದ ಬಳಿಕ ಬೆಳಗ್ಗೆಯಿಂದ ವಿವಿಧ ಮುಖಂಡರು, ಮಠಾಧೀಶರು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿ ಮುರುಘಾಶ್ರೀಗಳ ಜೊತೆ ಚರ್ಚೆ ನಡೆಸಿದ್ದಾರೆ. ಆದ್ರೆ ಇದೀಗ ಮುರುಘಾ ಶರಣರು ತಮ್ಮ ವೈಯಕ್ತಿಕ ಕೊಠಡಿಗೆ ವಿಶ್ರಾಂತಿಗೆ ತೆರಳಿದ್ದಾರೆ.

ಯಾರೂ ಸಹ ಮಕ್ಕಳನ್ನು ಇಂತಹ ದೃಷ್ಟಿಯಿಂದ ನೋಡಲ್ಲ

ಇನ್ನು ಮುರುಘಾಶ್ರೀಗಳ ವಿರುದ್ಧ ಗಂಭೀರ ಆರೋಪಕ್ಕೆ ಸಂಬಂಧಿಸಿ ಶ್ರೀಗಳ ಭೇಟಿ ಬಳಿಕ ಶಾಸಕ ಎಂ.ಚಂದ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುಮಾರು ವರ್ಷಗಳಿಂದ ಶ್ರೀಗಳನ್ನು ನೋಡುತ್ತಿದ್ದೇನೆ. ಮುರುಘಾಶ್ರೀಗಳು ಆ ರೀತಿಯ ಕೃತ್ಯ ಎಸಗುವವರಲ್ಲ. ಶ್ರೀಗಳ ವಿರುದ್ಧ ದುರುದ್ದೇಶದಿಂದ ಕೇಸ್ ದಾಖಲಿಸಿರಬಹುದು. ಮಠದ ಶಾಲೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳಿದ್ದಾರೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲೂ ವಿದ್ಯಾರ್ಥಿಗಳು ಇದ್ದಾರೆ. ಯಾರೂ ಸಹ ಮಕ್ಕಳನ್ನು ಇಂತಹ ದೃಷ್ಟಿಯಿಂದ ನೋಡಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:40 pm, Sat, 27 August 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ