ಚಳ್ಳಕೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ, ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಹೊಣೆಯನ್ನು ನಾನೇ ಹೊರುತ್ತೇನೆ: ಸಿಎಂ ಬೊಮ್ಮಾಯಿ

ಚಳ್ಳಕೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತ ಆಗಿದೆ. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಚಳ್ಳಕೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ, ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಹೊಣೆಯನ್ನು ನಾನೇ ಹೊರುತ್ತೇನೆ: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Nov 22, 2022 | 5:54 PM

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದಲ್ಲಿ ಅಭಿವೃದ್ಧಿ (development) ಕುಂಠಿತ ಆಗಿದೆ. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದರು. ಜಿಲ್ಲೆಯ ಚಳ್ಳಕೆರೆಯಲ್ಲಿ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಕಳಿಸಿ. ನಾವು ಅಭಿವೃದ್ಧಿ ಮಾಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಜನರ ಬೆಂಬಲವನ್ನು ಕೇಳಿದ್ದಾರೆ. ಮೊದಲು ಅಧ್ಯಕ್ಷ ಡಿ.ಕೆ ಶಿವಕುಮಾರ ಬೆಂಬಲ ಇದೆಯೋ, ಇಲ್ಲವೋ ನೋಡಿಕೊಳ್ಳಿ. ಇಡೀ ದೇಶದಲ್ಲಿ ಕಾಂಗ್ರೆಸ್​ ಮುಳುಗುತ್ತಿರುವ ಹಡಗಾಗಿದೆ ಎಂದು ಕಿಡಿಕಾರಿದರು. ಚಳ್ಳಕೆರೆಯಲ್ಲೂ ಭಾರತ್​ ಜೋಡೋ ಯಾತ್ರೆ ಮಾಡಿದ್ದಾರೆ. ಅರ್ಧ ಪಾದಯಾತ್ರೆ ಮಾಡಿ ಕಾರಿನಲ್ಲಿ ಪ್ರಯಾಣ ಮಾಡಿದರು. ಕಾಂಗ್ರೆಸ್​ ಆಡಳಿತದ ವೇಳೆ ಭ್ರಷ್ಟಾಚಾರ ತುಂಬಿ ತುಳುಕಿದೆ. ಬಹುತೇಕ ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ. ಕಾಂಗ್ರೆಸ್​ ಪಕ್ಷ ಅಂದರೆ ಭ್ರಷ್ಟಾಚಾರ ಎಂಬಂತಾಗಿದೆ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ರಾಜ್ಯದ ಜನರು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ತಿರಸ್ಕರಿಸಿದ್ದಾರೆ

ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ರೂ. ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಿದೆ. ಭದ್ರಾ ಯೋಜನೆಗೆ 16ಸಾವಿರ ಕೋಟಿ ರೂ. ನೀಡಲಿದೆ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗ ರಾಜ್ಯ ಸಮೃದ್ಧಿಯಾಗಿದೆ. ನಾಡಿನೆಲ್ಲೆಡೆ ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ. ಕಾಂಗ್ರೆಸ್ ನಾಯಕರಿಂದ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುತ್ತಾರೆ. ಕಾಂಗ್ರೆಸ್​ನಿಂದ ಸಾಮಾಜಿಕ ನ್ಯಾಯಕ್ಕೆ ಅನ್ಯಾಯ ಆಗಿದೆ. ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಕೆಲಸ ಮಾಡಿದರು. ರಾಜ್ಯದ ಜನರು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ತಿರಸ್ಕರಿಸಿದರು. ಚಳ್ಳಕೆರೆಯಲ್ಲಿ ಐಯಿಲ್‌ಇಂಡಸ್ಟ್ರಿಗೆ ನಮ್ಮ ಸರ್ಕಾರದಿಂದ ಕ್ರಮ ಕೈಗೊಳ್ಳುತ್ತೇವೆ. 2023ಕ್ಕೆ ಬಿಜೆಪಿ‌ ಮತ್ತೆ ಗೆದ್ದು ಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಅಭಿವೃದ್ಧಿಗಾಗಿ ಚಳ್ಳಕೆರೆ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ

ಜನಪರ ಕೆಲಸ ಮಾಡುವವರನ್ನು ಆಯ್ಕೆ ಮಾಡುವುದು ಮುಖ್ಯ. ಚಳ್ಳಕೆರೆಯಲ್ಲಿ ಬಿಜೆಪಿ ಗೆಲ್ಲಿಸಲು ಜನರು ಸಂಕಲ್ಪ ಮಾಡಿದ್ದಾರೆ. ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡಿದರೆ ಬಿಜೆಪಿ ಗೆಲುವು ಗ್ಯಾರಂಟಿ. ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೆರವಿನಿಂದ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಅಭಿವೃದ್ಧಿಗಾಗಿ ಚಳ್ಳಕೆರೆ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಎಂದರು. ಇನ್ನು ಸಿಎಂ ಭಾಷಣ ವೇಳೆ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಲಾಯಿತು. ಬಿತ್ತಿಪತ್ರ ಪ್ರದರ್ಶನ ಮಾಡಿ ಕೆಲವರಿಂದ ಘೋಷಣೆ ಮಾಡಿದ್ದು, ನಿಮ್ಮ ಬಳಿ ಬಂದು ಆಲಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್ ಯುಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಸಾಥ್ ನೀಡಿದರು. ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭಾಗಿಯಾಗಿದ್ದರು. ವಿಧಾನ ಪರಿಷತ್ ಸದಸ್ಯರಾದ ಕೆ. ಎಸ್ ನವೀನ, ರವಿಕುಮಾರ್, ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada