ಚಿತ್ರದುರ್ಗ ಮುರುಘಾಮಠಕ್ಕೆ ಭೇಟಿ ನೀಡಿದ ಜೆಪಿ ನಡ್ಡಾ; ರಾಜ್ಯ ಮಟ್ಟದ ಜನಪ್ರತಿನಿಧಿ ಸಮಾವೇಶದಲ್ಲಿ ಭಾಗಿ
ಇಂದು ಬೆಳಿಗ್ಗೆ (ಜೂನ್ 18) ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದ ಅವರು ಚಿತ್ರದುರ್ಗದ ಮುರುಘಾಮಠದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜನಪ್ರತಿನಿಧಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಚಿತ್ರದುರ್ಗ: ಇಂದು ಬೆಳಿಗ್ಗೆ (ಜೂನ್ 18) ರಂದು ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಕೆಂಪೇಗೌಡ ಏರ್ಪೋರ್ಟ್ಗೆ (Kempegowda International Airport) ಬಂದಿಳಿದರು. ಈ ವೇಳೆ ನಡ್ಡಾರನ್ನು ಸಿಎಂ ಬಸವರಾಜ ಬೊಮ್ಮಾಯಿ, (Basavaraj Bommai) ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Katil), ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಸ್ವಾಗತಿಸಿದರು. ಅಲ್ಲಿಂದ ಚಿತ್ರದುರ್ಗದ ಮುರುಘಾಮಠಕ್ಕೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ನೀಡಿದ್ದಾರೆ. ಅಲ್ಲಿ ನಡ್ಡಾ ಅವರನ್ನು ಸ್ವಾಗತಿಸಲು ಬುಡಕಟ್ಟು ಕಲಾ ತಂಡಗಳು, ಗುಡ್ಡಗಾಡು ಜನರ ವೇಷದಲ್ಲಿ ಬಂದಿದ್ದರು.
ಇದನ್ನು ಓದಿ: ಬೆಂಗಳೂರಿನಲ್ಲಿ ಖಾಸಗಿ ವಾಹಿನಿ ಕ್ಯಾಮರಮ್ಯಾನ್ ಮೇಲೆ ಹಲ್ಲೆ
ಈ ವೇಳೆ ಚಿತ್ರದುರ್ಗದ ಓಬವ್ವ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ‘ಗೋಬ್ಯಾಕ್ ನಡ್ಡಾ’ ಘೋಷಣೆ ಕೂಗಿ ಪ್ರತಿಭಟನೆ ಮಾಡಿದ್ದಾರೆ. ಗೋಬ್ಯಾಕ್ ನಡ್ಡಾ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದಿಂದ ಇಡಿ, ಐಟಿ, ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆರೋಪಿದರು. ಜೊತೆಗೆ ವಿಚಾರಣೆ ನೆಪದಲ್ಲಿ ರಾಹುಲ್ ಗಾಂಧಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದರು. ಧರಣಿ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ: ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಕಾರವಾರ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಜೆಪಿ ನಡ್ಡಾ ಅವರು ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮತ್ತು ಬಸವಮೂರ್ತಿ ಮಾದಾರ ಚನ್ನಯ್ಯ ಸೇರಿ ಹಲವು ಶ್ರೀಗಳನ್ನು ಭೇಟಿ ಮಾಡಿದರು. ಸದ್ಯ ಮುರಘಾಮಠದ ಅನುಭವ ಮಂಟಪದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜನಪ್ರತಿನಿಧಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ರಾಜ್ಯದ ವಿವಿದೆಡೆಯಿಂದ ಜನಪ್ರತಿನಿಧಿಗಳು ಆಗಮಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗ್ರಾ.ಪಂ ಅದ್ಯಕ್ಷ, ಉಪಾದ್ಯಕ್ಷರು ಭಾಗಿಯಾಗಿದ್ದಾರೆ. ಅನುಭವ ಮಂಟಪ ಸಭಾಂಗಣ ಬಹುತೇಕ ಭರ್ತಿಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.