ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶವನ್ನು ಸರ್ಕಾರ ಹಿಂಪಡೆಯಬೇಕು: ಬಸವಪ್ರಭು ಸ್ವಾಮೀಜಿ

ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶವನ್ನು ವಾಪಸ್‌ ಪಡೆಯಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹೇಳಿದ್ದಾರೆ.

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶವನ್ನು ಸರ್ಕಾರ ಹಿಂಪಡೆಯಬೇಕು: ಬಸವಪ್ರಭು ಸ್ವಾಮೀಜಿ
ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 13, 2022 | 8:03 PM

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠಕ್ಕೆ (Murugha Mutt) ಆಡಳಿತಾಧಿಕಾರಿ ನೇಮಕ ಆದೇಶವನ್ನು ವಾಪಸ್‌ ಪಡೆಯಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ (Basavprabhu Swamiji) ಹೇಳಿದ್ದಾರೆ.

ಚಿತ್ರದುರ್ಗ ಮುರುಘಾಮಠದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ಆದೇಶದಿಂದ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವಾಗಿದೆ. ಭಕ್ತರು, ತಜ್ಞರ ಸಲಹೆ ಪಡೆದು ಕಾನೂನು ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಗೆ ಆಡಳಿತಾಧಿಕಾರಿ ನೇಮಿಸದಂತೆ ಈ ಹಿಂದೆ ಮನವಿ ಮಾಡಿದ್ದೆವು. ಆದರೂ ರಾಜ್ಯ ಸರ್ಕಾರ ಯಾಕೆ ಆಡಳಿತಾಧಿಕಾರಿ ನೇಮಿಸಿದೆಯೆಂದು ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ನ್ಯಾಯ ಕೊಡಿಸಿ ಇಲ್ಲಾ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಮತ್ತೊಂದು ಪತ್ರ ಬರೆದ ಬಾಲಕಿಯರ ತಾಯಿ

ಪೂಜಾ ಕೈಂಕರ್ಯ, SJM ಸಂಸ್ಥೆ ಆಡಳಿತ ಸುಸೂತ್ರವಾಗಿ‌ ನಡೆಯುತ್ತಿದೆ. ಮುರುಘಾಶ್ರೀ ವಿರುದ್ಧ ಪಿತೂರಿ ನಡೆದಿದೆ ಎಂಬುದು ಗೊತ್ತಿದೆ. ಹೆಚ್.ಏಕಾಂತಯ್ಯ ಇರಬಹುದು, ಬೇರೆ ಯಾರೇ ಇರಬಹುದು, ದುರುದ್ದೇಶದಿಂದ ಮುರುಘಾ ಸ್ವಾಮೀಜಿ ವಿರುದ್ಧ ಪಿತೂರಿ ನಡೆದಿದೆ. ಇದನ್ನು ರಾಜ್ಯಸರ್ಕಾರ ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ಹೇಳಿದರು.

ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ವಸ್ತ್ರದ್ ನೇಮಕ

ಕರ್ನಾಟಕ ಸರ್ಕಾರ ಕೊನೆಗೂ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ. ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಇಂದು(ಡಿಸೆಂಬರ್ 13) ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ಹಿನ್ನೆಲೆ ಶಿವಮೂರ್ತಿ ಮುರುಘಾ ಶರಣರು ಕಳೆದ 3 ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರಿಂದ ಹಲವು ದಿನಗಳೀಂದ ಮುರುಘಾಮಠದಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಆಗ್ರಹಗಳು ಬರುತ್ತಿವೆ. ಅಂತಿಮವಾಗಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ. ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿರುವ ವರದಿ ಆಧರಿಸಿ ಆಡಳಿತಾಧಿಕಾರಿ ನೇಮಕ ಮಾಡಲಾಗುವುದು ಎಂದು ಊ ಹಿಂದೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳ ಮುಂದೆ ಹೇಳಿದ್ದರು.

ಇದನ್ನೂ ಓದಿ: ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ವಜಾಕ್ಕೆ ಆಗ್ರಹ: ಸಭೆಯಲ್ಲಿ ಎರಡು ಗುಂಪುಗಳ ನಡುವೆ ವಾಗ್ವಾದ, ತಳ್ಳಾಟ-ನೂಕಾಟ

ಮುರುಘಾಮಠದ SJM ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿ

ಮೊನ್ನೆ ಅಷ್ಟೇ ಚಿತ್ರದುರ್ಗದ ಮುರುಘಾಮಠದ ಅಧೀನದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯಕ್ಕೆ (SJM) ಸರ್ಕಾರದ ಬೋರ್ಡ್ ಆಫ್ ಗವರ್ನರ್ಸ್ ಆಗಿ ಬಿಜೆಪಿ ವಿಧಾನಪರಿಷತ್ ಕೆ.ಎಸ್.ನವೀನ್ ಅವರನ್ನು​ ನಾಮ ನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ