JP Nadda: ಕರ್ನಾಟಕದಲ್ಲಿ ಅಭಿವೃದ್ಧಿಯ ಕಾರ್ಡ್ ಹಿಡಿದು ಮತಯಾಚನೆ: ಜೆ.ಪಿ.ನಡ್ಡಾ

ಭಾರತ್ ಆರ್ಥಿಕತೆಯಲ್ಲಿ ವಿಶ್ವದ 10ನೇ ಸ್ಥಾನದದ 5ನೇ ಸ್ಥಾನಕ್ಕೇರಿದೆ. ಸ್ಟೀಲ್ ಉತ್ಪಾದನೆಯಲ್ಲಿ 2ನೇ ಸ್ಥಾನ ಪಡೆದಿದ್ದು, ಕಾರ್ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಭಾರತ ಹಿಂದಿಕ್ಕಿದೆ. ಡಿಜಿಟಲ್ ಪೇಮೆಂಟ್ ಬಗ್ಗೆ ಟೀಕೆ ಕೇಳಿಬಂದಿತ್ತು. ಆದರೆ ವಿಶ್ವದ 40ಪರ್ಸೆಂಟ್ ಡಿಜಿಟಲೀಕರಣ ಭಾರತದಲ್ಲಿದೆ ಎಂದು ಜೆಪಿ ನಡ್ಡಾ ಹೇಳಿದರು.

JP Nadda: ಕರ್ನಾಟಕದಲ್ಲಿ ಅಭಿವೃದ್ಧಿಯ ಕಾರ್ಡ್ ಹಿಡಿದು ಮತಯಾಚನೆ: ಜೆ.ಪಿ.ನಡ್ಡಾ
ಚಿತ್ರದುರ್ಗದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಭಾಷಣ
Follow us
Rakesh Nayak Manchi
|

Updated on: Mar 17, 2023 | 7:33 PM

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಯಾತ್ರೆ ಕೈಗೊಂಡು ಮತಬೇಟೆ ನಡೆಸುತ್ತಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ (JP Nadda) ನೇತೃತ್ವದಲ್ಲಿ ರಾಜ್ಯದ ನಾಲ್ಕು ದಿಕ್ಕಿನಿಂದಲೂ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದೆ. ಅದರಂತೆ ಇಂದು ಚಿತ್ರದುರ್ಗದಲ್ಲಿ ನಡೆದ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಜೆಪಿ ನಡ್ಡಾ, ಅಭಿವೃದ್ಧಿಯ ಕಾರ್ಡ್ ಹಿಡಿದು ನಾವು ಮತ ಕೇಳುತ್ತೇವೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರ ದೇಶದಲ್ಲಿದ್ದ ಪರಿವಾರವಾದ ಭ್ರಷ್ಟಾಚಾರ ರಾಜಕಾರಣಕ್ಕೆ ಕಡಿವಾಣ ಹಾಕಲಾಗಿದೆ. ಭಾರತ ಆರ್ಥಿಕತೆಯಲ್ಲಿ ವಿಶ್ವದ 10ನೇ ಸ್ಥಾನದದ 5ನೇ ಸ್ಥಾನಕ್ಕೇರಿದೆ. ಸ್ಟೀಲ್ ಉತ್ಪಾದನೆಯಲ್ಲಿ 2ನೇ ಸ್ಥಾನ ಹಾಗೂ ಕಾರ್ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿದೆ. ಡಿಜಿಟಲ್ ಪೇಮೆಂಟ್ ಬಗ್ಗೆ ಟೀಕೆ ಕೇಳಿಬಂದಿತ್ತು. ಆದರೆ ವಿಶ್ವದ 40ಪರ್ಸೆಂಟ್ ಡಿಜಿಟಲೀಕರಣ ಭಾರತದಲ್ಲಿದೆ ಎಂದರು.

ಕರ್ನಾಟಕದಲ್ಲೂ ಪ್ರಗತಿಯ ಹಾದಿ ಭರದಿಂದ ಸಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಭಾರೀ ಅಭಿವೃದ್ಧಿಯಾಗಿದ್ದು, ಅಭಿವೃದ್ಧಿಯಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ. ಮಾತ್ರವಲ್ಲದೆ, ಸ್ಟಾರ್ಟ್ ಅಪ್​ ಹಾಗೂ ವಿದೇಶಿ ಬಂಡವಾಳ ಆಕರ್ಷಣೆಯಲ್ಲೂ ಕರ್ನಾಟಕ ನಂಬರ್ ಒನ್ ಆಗಿದೆ. ಬೊಮ್ಮಾಯಿ ಸರ್ಕಾರ ಎಸ್​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ಮಾಡಿದ್ದು, ರೈತ ವಿದ್ಯಾಸಿರಿ, ನೇಕಾರರು, ಮೀನುಗಾರರ ಮಕ್ಕಳಿಗೂ ವಿದ್ಯಾಸಿರಿ ಯೋಜನೆ ಜಾರಿ ಮಾಡಲಾಗಿದೆ. ಶೇ. 97 ರಷ್ಟು ಮೊಬೈಲ್ ಹೊರಗಿನಿಂದ ಆಮದಾಗುತ್ತಿತ್ತು. ಈಗ ವಿಶ್ವಕ್ಕೆ ಮೊಬೈಲ್ ಕೊಡುವಷ್ಟು ಉತ್ಪಾದನೆಯಾಗುತ್ತಿದೆ. ದೇಶದಲ್ಲಿ ಐವತ್ತಕ್ಕೂ ಹೆಚ್ಚು ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದ್ದು, ಬೆಂಗಳೂರು-ಮೈಸೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ, ಹೈವೇ, ಇಂಟರ್ ನೆಟ್, ನೀರಾವರಿ ಸೇರಿ ಇತರೆ ಯೋಜನೆಗಳು ಜಾರಿ ಮಾಡಲಾಗಿದೆ ಎಂದರು.

ಭಾರತದಲ್ಲಿ ಈಗ ಕಡು ಬಡತನ ಶೇ. 1ಕ್ಕೂ ಕಡಿಮೆ ಆಗಿದೆ. ಬಡವರ ಕಲ್ಯಾಣಕ್ಕಾಗಿ ಮೋದಿ ಸರ್ಕಾರದಿಂದ ಅನೇಕ ಯೋಜನೆ ಜಾರಿ ಮಾಡಲಾಗಿದೆ. ಕೊರೊನಾ ಕಾಲದಲ್ಲಿ ಗರೀಬ್ ಕಲ್ಯಾಣ ಯೋಜನೆ, ಉಚಿತ ಅಕ್ಕಿ ಕೊಡುವ ಯೋಜನೆ, ದೇಶದಲ್ಲಿ 11ಕೋಟಿಗೂ ಹೆಚ್ಚು ಶೌಚಾಲಯ ನಿರ್ಮಾಣ, ಆಯುಷ್ಮಾನ್ ಯೋಜನೆ ಮೂಲಕ ಆರೋಗ್ಯ ಭಾಗ್ಯ, ಕೃಷಿ ಸಮ್ಮಾನ್ ಯೋಜನೆ ಮೂಲಕ ರೈತರಿಗೆ ನೆರವು, ರೈತರು, ದಲಿತರು, ಪರಿಶಿಷ್ಟರಿಗೆ ವಿವಿಧ ನೆರವಿನ ಯೋಜನೆ ಕೊಡಲಾಗಿದೆ ಎಂದು ನಡ್ಡಾ ಹೇಳಿದರು.

ಇದನ್ನೂ ಓದಿ: JP Nadda: ಇಂದಿನಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕರ್ನಾಟಕ ಪ್ರವಾಸ

ಸಮಾವೇಶದಲ್ಲಿ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಅಮಿತ್ ಶಾ ನೇತ್ವದಲ್ಲಿ ರಾಜ್ಯದ ನಾಲ್ಕು ದಿಕ್ಕುಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯುತ್ತಿದೆ ಎಂದರು. ಆದರೆ ಬಾಯಿತಪ್ಪಿ ನಡ್ಡಾ ಬದಲು ಅಮಿತ್ ಶಾ ಹೆಸರೇಳಿ ಸಚಿವರು ಎಡವಟ್ಟುಮಾಡಿಕೊಂಡರು. ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಯಾತ್ರೆ ಕೈಗೊಂಡಿದೆ. ನಾನು ಮತ್ತು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಅಣ್ಣ ತಮ್ಮಂದಿರು ಇದ್ದ ಹಾಗೆ. ಈಗ ಇಬ್ಬರು ಅಣ್ಣ ತಮ್ಮಂದಿರು ಮತ್ತೆ ಒಂದಾಗಿದ್ದೇವೆ. 2023ರಲ್ಲಿ ಧಮ್, ತಾಕತ್ತಿದ್ದರೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆದ್ದು ತೋರಿಸಿ ಎಂದು ಸವಾಲೆಸಿದ್ದರು. ಭಾರತ್ ಜೋಡೋ ಯಾತ್ರೆ ಬಂದು ರಾಮುಲು ಸೋಲಿಸಬೇಕೆಂದಿದ್ದರು. ಹೀಗಾಗಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕು ಎಂದರು.

ಭಾರತದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಅಂತಾರೆ. ಲಂಡನ್​ಗೆ ಹೋಗಿ ಪ್ರಜಾಪ್ರಭುತ್ವ, ಸಂವಿಧಾನ ಅಪಾಯದಲ್ಲಿದೆ ಅಂತಾರೆ. ರಾಹುಲ್ ಗಾಂಧಿ‌ ಎಲ್ಲಿ ಕಾಲಿಡುತ್ತಾರೋ ಅಲ್ಲಿ ಕಾಂಗ್ರೆಸ್ ಮಟಾಶ್ ಆಗುತ್ತಿದೆ. ಮೊಳಕಾಲ್ಮೂರಿಗೆ ರಾಹುಲ್ ಬಂದು ಹೋದರು, ಮಾಜಿ ಶಾಸಕ ತಿಪ್ಪೇಸ್ವಾಮಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದಾರೆ ಎಂದರು. ಮೊಳಕಾಲ್ಮೂರು ಕ್ಷೇತ್ರಕ್ಕೆ ಭದ್ರಾ ಯೋಜನೆ ಮೂಲಕ ನೀರು ತರುವ ಯೋಜನೆ ತಂದಿದ್ದೇವೆ. ಕ್ಷೇತ್ರದ ಎಲ್ಲಾ ಕೆರೆ ತುಂಬಿಸುವ ಯೋಜನೆ ತಂದಿದ್ದೇನೆ ಎಂದರು.

ಎಸ್​ಸಿ ಎಸ್​ಟಿಗೆ ಮೀಸಲಾತಿ ಹೆಚ್ಚಳದ ಮಾತು ಕೊಟ್ಟಿದ್ದೆ. ರಕ್ತದಿಂದ‌ ಬರೆದುಕೊಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಮಾತು ಕೊಟ್ಟಂತೆ ನಾನು ನಡೆದುಕೊಂಡಿದ್ದೇನೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಬೇಕು. ಕಾಂಗ್ರೆಸ್ ಮಾತು ಕೇಳಿ ಮೋಸ ಹೋಗಬೇಡಿ, ರಾಜ್ಯದಲ್ಲಿ ಬಿಜೆಪಿ 150ಕ್ಷೇತ್ರದಲ್ಲಿ ಗೆಲ್ಲಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ