AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ

ಚಿತ್ರದುರ್ಗ, ದೇವನಹಳ್ಳಿ ಮತ್ತು ಮಂಡ್ಯದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು ಮೂವರು ದಾರುಣವಾಗಿ ಮೃತಪಟ್ಟಿದ್ದು, ಮಾಜಿ ಶಾಸಕ ಸುರೇಶ್​​ ಗೌಡ ಸೇರಿದಂತೆ 5 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲೂಕಿನಲ್ಲಿ ಹಿಟ್ ಆ್ಯಂಡ್​​ ರನ್​​ಗೆ ಇಬ್ಬರು ಬಲಿಯಾಗಿದ್ದರೆ, ದೇವನಹಳ್ಳಿಯಲ್ಲಿ ಬೈಕ್​​ಗಳ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬರು ಅಸುನೀಗಿದ್ದಾರೆ.

ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ
ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿImage Credit source: Tv9 Kannada
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Feb 22, 2026 | 9:07 AM

Share

ಚಿತ್ರದುರ್ಗ/ ಮಂಡ್ಯ, ಫೆಬ್ರವರಿ 22: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಕೆಟ್ಟಿದ್ದರಿಂದ ರಿಪೇರಿಗೆಂದು ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್​​ಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು

ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ 2 ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ದಾಸಗೊಂಡನಹಳ್ಳಿಯ ನರಸಿಂಹಪ್ಪ(67) ಮೃತರಾಗಿದ್ದು, ಗಾಯಗೊಂಡ ಮತ್ತೋರ್ವನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮದುವೆ ಮುಗಿಸಿಕೊಂಡು ಮನೆಗೆ ಹೋಗ್ತಿದ್ದ ನರಸಿಂಹಪ್ಪಗೆ ಎದುರಿನಿಂದ ಬಂದ ಬೈಕ್​​ ಡಿಕ್ಕಿಯಾಗಿದ್ದು, ತೀವ್ರ ರಕ್ತ ಸಾವ್ರದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಫೆ.20ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್​ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

Suresh Gowda Car Accident

ಅಪಘಾತದಲ್ಲಿ ಜಖಂ ಆಗಿರುವ ಕಾರು

ಪಕ್ಷದ ಕಾರ್ಯಕರ್ತರ ಮದುವೆಗೆಂದು ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ  ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರು ಮಂಡ್ಯದ ಬೊಂತೆಕೊಪ್ಪಲು ಸಮೀಪ ನಿನ್ನೆ ರಾತ್ರಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಮಾಜಿ ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ‌ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದ್ದು, ಸುರೇಶ್ ಗೌಡ ಕೈಗೆ ಪೆಟ್ಟಾಗಿದೆ. ಚಾಲಕನಿಗೂ ಸಣ್ಣಪುಟ್ಟ ಗಾಯಗಲಾಗಿದ್ದು, ತಕ್ಷಣ ಗನ್​ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More