ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಅಂಗವಿಕಲರ ಜನಗಣತಿಗೆ ನಿರ್ಧಾರ: ದಾಸ್ ಸೂರ್ಯವಂಶಿ
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗವಿಕಲರ ಜನಗಣತಿಯನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಜನಗಣತಿಯು ಅಂಗವಿಕಲರ ಸಬಲೀಕರಣಕ್ಕೆ ಅಗತ್ಯವಾದ ಮಾಹಿತಿಯನ್ನು ಒದಗಿಸಲಿದೆ ಎಂದು ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಅಂಗವಿಕಲರ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಅವರು ಹೇಳಿದ್ದಾರೆ.

ಚಿತ್ರದುರ್ಗ, ಮೇ 09: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗವಿಕಲರ ಜನಗಣತಿ (Census of Persons with Disabilities) ನಡೆಸಲು ನಿರ್ಧರಿಸಲಾಗಿದ್ದು, ಪ್ರಸಕ್ತ ವರ್ಷದಿಂದಲೇ ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅಂಗವಿಕಲರ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದ್ದಾರೆ. ಬುಧವಾರ ಜಿಲ್ಲೆಯ ವಿಆರ್ಡಬ್ಲ್ಯೂ, ಎಂಆರ್ಡಬ್ಲ್ಯೂಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಒಂಬತ್ತು ತಿಂಗಳ ಹಿಂದೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು ಎಂದು ತಿಳಿಸಿದ್ದಾರೆ.
ಈ ಅಂಗವಿಕಲರ ಜನಗಣತಿಯ ದತ್ತಾಂಶವು ಅಂಗವಿಕಲರ ಸಬಲೀಕರಣಕ್ಕಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸಹಕಾರಿಯಾಗಲಿದೆ. ಸಿಎಂ ಸಿದ್ದರಾಮಯ್ಯ ಕೂಡ ಈ ವರ್ಷದ ಬಜೆಟ್‌ನಲ್ಲಿ ಅಂಗವಿಕಲರ ಸಮೀಕ್ಷೆ ನಡೆಸುವ ಬಗ್ಗೆ ಘೋಷಿಸಿದ್ದಾರೆ. ಈ ಜನಗಣತಿ ಕಾರ್ಯಕ್ಕೆ ವಿಆರ್ಡಬ್ಲ್ಯೂ, ಎಂಆರ್ಡಬ್ಲ್ಯೂಗಳಿಗೆ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮುಸ್ಲಿಮರಲ್ಲಿಯೂ 93 ಉಪಜಾತಿಗಳಿವೆ: ಜಾತಿ ಗಣತಿ ವರದಿ ಬಗ್ಗೆ ಜಯಪ್ರಕಾಶ್ ಹೆಗ್ಡೆ ಹೇಳಿದ್ದಿಷ್ಟು
ಇನ್ನು ಈಗಾಗಲೇ ಎಷ್ಟು ಜನ ಅಂಗವಿಕಲರು ಯುಡಿಐಡಿ ಕಾರ್ಡ್ ಪಡೆದುಕೊಂಡಿದ್ದಾರೆ, ಬಾಕಿ ಎಷ್ಟು ಕಾರ್ಡ್ ಇದೆ, ಎಷ್ಟು ಜನರಿಗೆ ಅಂಗವಿಕಲರ ಮಾಸಾಶನ ತಲುಪುತ್ತಿದೆ ಎಂಬ ಎಲ್ಲಾ ಮಾಹಿತಿ ಸೇರಿದಂತೆ ಇತರೆ ಮಾಹಿತಿಯನ್ನು ಮನೆ ಮನೆಗೆ ಭೇಟಿ ನೀಡಿ ಸಂಗ್ರಹಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ಜಾತಿ ಗಣತಿ ವಿರುದ್ಧ ಸಿಡಿದೆದ್ದ ಒಕ್ಕಲಿಗರು, ಲಿಂಗಾಯತರು: ವರದಿ ಜಾರಿಯಾದರೆ ಸರ್ಕಾರ ಬೀಳಿಸುವ ಎಚ್ಚರಿಕೆ
ಇನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕನಿಷ್ಟ ಎರಡು ಅಂಗವಿಕಲರ ಸ್ವ-ಸಹಾಯ ಗುಂಪುಗಳನ್ನು ಶೀಘ್ರವೇ ರಚನೆ ಮಾಡಲಾಗುವುದು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಬೇಕಿದೆ. ಮುಂದಿನ ದಿನಗಳಲ್ಲಿ ಸುಗಮ್ಯ ಯಾತ್ರೆಯನ್ನು ಕೈಗೊಳ್ಳಲಾಗುವುದು, ಜೊತೆಗೆ ಅಂಗವಿಕಲರ ಸಬಲೀಕರಣಕ್ಕಾಗಿ ಉತ್ತಮ ಸಮೀಕ್ಷೆ ನಡೆಸಬೇಕು ಎಂದು ದಾಸ್ ಸೂರ್ಯವಂಶಿ ಹೇಳಿದ್ದಾರೆ.
ಒಳಮೀಸಲಾತಿ ಜಾರಿಗಾಗಿ ಸರ್ಕಾರದ ಮೊದಲ ಹೆಜ್ಜೆ
ಇತ್ತೀಚೆಗೆ ಒಳಮೀಸಲಾತಿ ಬಗ್ಗೆ ನಿಖರವಾದ ವರದಿ ಕೊಡಲು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿಯನ್ನು ಕರ್ನಾಟಕ ಸರ್ಕಾರ ಆರಂಭಿಸಿತ್ತು. ಒಳಮೀಸಲಾತಿಯ ಮೊದಲ ಹೆಜ್ಜೆ ಎನ್ನುವಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಆರಂಭವಾಗಿದೆ. ಆ ಮೂಲಕ ಸಾಮಾಜಿಕ ತಾರತಮ್ಯಕ್ಕೆ ಗುರಿಯಾಗಿರುವ ಕೆಲವು ಸಮುದಾಯಗಳಿಗೆ ಬಲ ನೀಡಲು ಮುಂದಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.