AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರಿನಿಂದ ಸುದ್ದಿಯಾಗಿದ್ದ ಕವಾಡಿಗರಹಟ್ಟಿಯ ಸರ್ಕಾರಿ ಶಾಲೆ ಈಗ ವಿದ್ಯಾರ್ಥಿಗಳ ಗಮನ ಸೆಳೆಯುತ್ತಿದೆ! ಏನೀ ಬದಲಾವಣೆ?

ಚಿತ್ರದುರ್ಗದಲ್ಲಿ ಕಲುಷಿತ ನೀರಿಗೆ 6 ಜನ ಬಲಿಯಾಗಿ ಸುದ್ದಿಯಾಗಿದ್ದ ಕವಾಡಿಗರಹಟ್ಟಿ ಈಗ ಸುಂದರ ಸರ್ಕಾರಿ ಶಾಲೆ ಮೂಲಕ ನಾಡಿನ ಗಮನಸೆಳೆಯುವಂತಾಗಿದೆ. ಯಾವ ಕಾನ್ವೆಂಟ್ ಗೂ ಸರ್ಕಾರಿ ಶಾಲೆ ಕಮ್ಮಿ ಇಲ್ಲ ಎಂದು ಮಕ್ಕಳು ಖುಷಿಯಿಂದ ಶಾಲೆಗೆ ಬರುವಂತಾಗಿದೆ.

ಕಲುಷಿತ ನೀರಿನಿಂದ ಸುದ್ದಿಯಾಗಿದ್ದ ಕವಾಡಿಗರಹಟ್ಟಿಯ ಸರ್ಕಾರಿ ಶಾಲೆ ಈಗ ವಿದ್ಯಾರ್ಥಿಗಳ ಗಮನ ಸೆಳೆಯುತ್ತಿದೆ! ಏನೀ ಬದಲಾವಣೆ?
ಕವಾಡಿಗರಹಟ್ಟಿಯ ಸರ್ಕಾರಿ ಶಾಲೆ ಈಗ ವಿದ್ಯಾರ್ಥಿಗಳ ಗಮನ ಸೆಳೆಯುತ್ತಿದೆ!
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಸಾಧು ಶ್ರೀನಾಥ್​|

Updated on: Dec 02, 2023 | 2:38 PM

Share

ಸರ್ಕಾರಿ ಶಾಲೆ ಅಂದಾಕ್ಷಣ ಮೂಗು ಮುರಿಯುವವರೇ ಹೆಚ್ಚು. ಅಂತೆಯೇ ಸರ್ಕಾರಿ ಶಾಲೆಯ ದುರವಸ್ಥೆಗೆ ಕನ್ನಡಿ ಹಿಡಿಯುವ ಅನೇಕ ಉದಾಹರಣೆಗಳಿವೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ಹಿರಿಯ ವಿದ್ಯಾರ್ಥಿಗಳು, ನಾಗರಿಕರು ಶಾಲಾ ಅಭಿವೃದ್ಧಿಗೆ ಟೊಂಕಕಟ್ಟಿ ನಿಲ್ಲುವ ಮೂಲಕ ಮಾದರಿ ಶಾಲೆಯನ್ನಾಗಿಸಿದ್ದಾರೆ. ಈ ಕುರಿತು ವರದಿ ಇಲ್ಲಿದೆ. ಅಪರೂಪದ ಉಪಯುಕ್ತ ಗೋಡೆ ಚಿತ್ರಗಳ ಮೂಲಕ ವಿದ್ಯಾರ್ಥಿಗಳ (students) ಸೆಳೆಯುತ್ತಿರುವ ಶಾಲೆ. ಕಾನ್ವೆಂಟ್ ಮಾದರಿ ಶಾಲೆ ಕಂಡು ವಿದ್ಯಾರ್ಥಿಗಳು ದಿಲ್ ಖುಷ್. ಖಾಸಗಿ ಶಾಲೆಗೆ ಸೆಡ್ಡು ಹೊಡೆಯುವಂತೆ ನವೀಕರಣಗೊಂಡಿರುವ ಸರ್ಕಾರಿ ಶಾಲೆ. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ (Chitradurga) ನಗರದ ಕವಾಡಿಗರಹಟ್ಟಿಯ (Kavadigarhatti) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (Government School).

ಹೌದು, ಕೆಲ ತಿಂಗಳ ಹಿಂದಷ್ಟೇ ಕಲುಷಿತ ನೀರಿನ ಅವಘಡದಿಂದ ( Contaminated water) ಕವಾಡಿಗರಹಟ್ಟಿ ಭಾರೀ ಸುದ್ದಿಯಾಗಿತ್ತು. ಅದೇ ಕವಾಡಿಗರಹಟ್ಟಿಯ ಸರ್ಕಾರಿ ಶಾಲೆ ಈಗ ನಾಡಿನ ಗಮನಸೆಳೆಯುತ್ತಿದೆ. ಹಿರಿಯ ನಾಗರಿಕರು, ಹಳೇ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಕಾರ್ಯಕರ್ತರು ಸರ್ಕಾರಿ ಶಾಲೆಗೆ ಸುಣ್ಣ ಬಣ್ಣ ಬಳಿದು ನವೀಕರಣಗೊಳಿಸಿದ್ದಾರೆ. ಅಷ್ಟೇ ಅಲ್ಲದೆ, ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯ ಗೋಡೆ ಚಿತ್ರಗಳನ್ನು ಬರೆಯುವ ಮೂಲಕ ವಿದ್ಯಾರ್ಥಿಗಳನ್ನು ಬರಸೆಳೆಯಲಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ.

Also read: ಇನ್ಮುಂದೆ ಕಲುಷಿತ ನೀರು ಸೇವಿಸಿ ಮರಣ ಹೊಂದಿದರೇ ಜಿ.ಪಂ ಸಿಇಒಗಳೇ ನೇರ ಹೊಣೆ: ಸಿಎಂ ಸಿದ್ದರಾಮಯ್ಯ

ಇನ್ನು ಶಾಲೆಯಲ್ಲಿ ಪಠ್ಯಕ್ಕೆ ಅನುಗುಣವಾಗಿ ವಿಜ್ಞಾನ, ಗಣಿತಕ್ಕೆ ಸಂಬಂಧಿಸಿದ ಚಿತ್ರಗಳು, ನಲಿ ಕಲಿ ಮಕ್ಕಳಿಗೆ ಅಕ್ಷರ ಅಭ್ಯಾಸ, ಹಣ್ಣು ತರಕಾರಿ, ವಾರಗಳು, ವಿರುದ್ಧಾರ್ಥಕ ಪದಗಳು, ಸೌರ ಮಂಡಲ, ಚಂದ್ರಯಾನ ಸೇರಿದಂತೆ ಇತರೆ ಚಿತ್ರಗಳು ವಿದ್ಯಾರ್ಥಿಗಳ ಗಮನ ಸೆಳೆಯುತ್ತಿವೆ.

ಚಿತ್ರ ಕಲಾವಿದರಾದ ಅನುಶ್ರೀ, ತೇಜಸ್ ಸೇರಿದಂತ ಸುಮಾರು 10 ಜನರ ತಂಡ ಶಾಲೆ ನವೀಕರಣಕ್ಕೆ ಟೀಮ್ ವರ್ಕ್ ಮಾಡಿದೆ. ಹೀಗಾಗಿ, ಹಿರಿಯ ನಾಗರಿಕರು, ಹಳೇ ವಿದ್ಯಾರ್ಥಿಗಳು ಮತ್ತು ಎಬಿವಿಪಿ ಕಾರ್ಯಕರ್ತರ ಸತ್ಕಾರ್ಯದಿಂದ ಕವಾಡಿಗರಹಟ್ಟಿ ಶಾಲೆ ಮಾದರಿ ಸರ್ಕಾರಿ ಶಾಲೆಯಾಗಿ ರೂಪುಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?