AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ

ಚಿತ್ರದುರ್ಗ ಜಿಲ್ಲಾ ಖಾದಿ ಸಹಕಾರ ಸಂಘದ ಕೋಟ್ಯಂತರ ರೂ ಮೌಲ್ಯದ ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಭೂಗಳ್ಳರು ಕಬಳಿಸಿದ್ದಾರೆ. 4 ಕೋಟಿ ರೂ ಮೌಲ್ಯದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕಬಳಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ.

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ
ಖಾದಿ ಪರಸ್ಪರ ಸಹಕಾರ ಸಂಘImage Credit source: tv9 kannada
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jun 04, 2026 | 6:37 PM

Share

ಚಿತ್ರದುರ್ಗ, ಜೂನ್​ 04: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ (Property) ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ.

ಮುಖ್ಯಾಂಶಗಳು

  • ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ ಪರಸ್ಪರ ಸಹಕಾರ ಸಂಘದಲ್ಲಿ ಗೋಲ್​ ಮಾಲ್​​
  • ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿ ಕಬಳಿಕೆ
  • ಮಾಜಿ ಜಿಲ್ಲಾ ಪಂಚಾಯತಿ ಸದಸ್ಯನಿಂದಲೇ ಕಬಳಿಕೆ ಆರೋಪ

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ

ಮಹಾತ್ಮ ಗಾಂಧೀಜಿ ಅವರ ಗ್ರಾಮ ಭಾರತದ ಕನಸಿನೊಂದಿಗೆ ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ ಪರಸ್ಪರ ಸಹಕಾರ ಸಂಘ ನಿರ್ಮಾಣವಾಗಿತ್ತು. ಚಿತ್ರದುರ್ಗ, ಭರಮಸಾಗರ ಸೇರಿದಂತೆ ವಿವಿಧೆಡೆ ಸಂಘದ ಬೆಲೆ ಬಾಳುವ ಆಸ್ತಿಯಿದೆ. ಆದರೆ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಸ್​ಎಂಎಲ್​ ತಿಪ್ಪೇಸ್ವಾಮಿ ಎಂಬುವವರು ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿರುವ ಆಸ್ತಿ ಲಪಟಾಯಿಸಿದ್ದಾರೆ. ಸಂಘದ ಮಾಜಿ ಉದ್ಯೋಗಿ ಜಯಪ್ಪ ಎಂಬುವರನ್ನು ಬಳಸಿಕೊಂಡು 4 ಕೋಟಿ ರೂ ಮೌಲ್ಯದ ಆಸ್ತಿಯನ್ನು ಖಾಲಿ ಜಾಗ ಎಂದು ನಕಲಿ ದಾಖಲೆ ಸೃಷ್ಟಿಸಿ 40 ಲಕ್ಷ ರೂಪಾಯಿಗೆ ಖರೀದಿಸಿದ್ದಾಗಿ ದಾಖಲೆ ಸೃಷ್ಟಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ.

ಸೂಕ್ತ ಕ್ರಮಕ್ಕೆ ಸಂಘದ ಸದಸ್ಯರು ಆಗ್ರಹ

ಇನ್ನು ಚಿತ್ರದುರ್ಗ ನಗರ, ಮಾಳಪ್ಪನಹಟ್ಟಿ, ಮಾನಂಗಿ, ಭರಮಸಾಗರ ಸೇರಿ ವಿವಿಧೆಡೆ ಸಂಘದ ಆಸ್ತಿ ಇದೆ. ಗ್ರಾಮದ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಎಲ್ಲಾ ಕಡೆ ಕಟ್ಟಡಗಳು ನಿರ್ಮಾಣ ಮಾಡಲಾಗಿದೆ. ಆದರೆ ಭರಮಸಾಗರದಲ್ಲಿ ಮಾತ್ರ ಗ್ರಾಮ ಪಂಚಾಯತಿ ಅಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಸೇರಿದಂತೆ ಇತರೆ ಅಧಿಕಾರಿಗಳು ಶಾಮೀಲಾಗಿ ಸಹಕಾರ ಸಂಘದ ಆಸ್ತಿ ಕಬಳಿಸಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಈ ಬಗ್ಗೆ ದೂರು ಸಲ್ಲಿಸಿದ್ದೇವೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಹಕಾರ ಸಂಘದ ಆಸ್ತಿ ಉಳಿಸಬೇಕು ಎಂದು ಸಂಘದ ಸದಸ್ಯ ತಿಮ್ಮಣ್ಣ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋಟ್ಯಂತರ ರೂ ಮೌಲ್ಯದ ಬಿಡಿಎ ಸೈಟ್ ಕಬಳಿಕೆ ಪ್ರಕರಣ ಬೆಳಕಿಗೆ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಒಟ್ಟಾರೆಯಾಗಿ ಕೋಟೆ ನಾಡು ಚಿತ್ರದುರ್ಗದಲ್ಲಿ ಗಾಂಧೀಜಿ ಗ್ರಾಮ ಭಾರತ ಕನಸಿನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘದ ಆಸ್ತಿಯನ್ನ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಅದರಲ್ಲೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಸ್​ಎಂಎಲ್​ ತಿಪ್ಪೇಸ್ವಾಮಿ ಮತ್ತು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA