AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡಿನ ಆರಾಧ್ಯ ದೈವ ತಿಪ್ಪೇರುದ್ರಸ್ವಾಮಿ ಜಾತ್ರೆ ಅದ್ಧೂರಿಯಾಗಿ ನಡೆದಿದ್ದು, ಅದರ ಝಲಕ್​ ಇಲ್ಲಿದೆ ನೋಡಿ

ಕೋಟೆನಾಡಿನ ಆರಾಧ್ಯ ದೈವ ತಿಪ್ಪೇರುದ್ರಸ್ವಾಮಿಯ ಜಾತ್ರೆ ಅದ್ಧೂರಿಯಾಗಿ ನಡೆದಿದ್ದು, ಲಕ್ಷಾಂತರ ಜನ ಭಕ್ತ ಸಮೂಹ ರಥೋತ್ಸವದಲ್ಲಿ ಭಾಗಿಯಾಗಿ ಸ್ವಾಮಿಯ ದರ್ಶನ ಪಡೆದು ಕೃತಾರ್ಥರಾದರು.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 11, 2023 | 1:01 PM

Share
ವಿಶೇಷ ಸಂದರ್ಭದಲ್ಲಿ ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರು. ಭಕ್ತಗಣ ಸಾಗರದ ನಡುವೆ ಆರಾಧ್ಯ ದೇವರ ಅದ್ಧೂರಿ ರಥೋತ್ಸವ. ಕ್ವಿಂಟಲ್ ಗಟ್ಟಲೆ ಕೊಬ್ಬರಿ‌ ಸುಟ್ಟು ಹರಕೆ ತೀರಿಸಿದ ಭಕ್ತರು. ಈ ದೃಶ್ಯಗಳು ಕಂಡು ಬಂದಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ.

1 / 8
 15, 16ನೇ ಶತಮಾನದಲ್ಲಿ ಲೋಕ‌ಸಂಚಾರ ಹೊರಟಿದ್ದ ಸಂತ ತಿಪ್ಪೇರುದ್ರಸ್ವಾಮಿ ಕೋಟೆನಾಡಿನ ನಾಯಕನಹಟ್ಟಿಗೆ ಆಗಮಿಸುತ್ತಾರಂತೆ. ಆಗ ಭೀಕರ ಬರಗಾಲದಿಂದ ಈ ಭಾಗದ ಜನ ತತ್ತರಿಸಿರುವುದು ಕಂಡು ಹಲವು ಪರಿಹಾರ ನೀಡುತ್ತಾರೆ.

2 / 8
ಸಂತ ತಿಪ್ಪೇರುದ್ರಸ್ವಾಮಿಯವರು ಏಳು ಕೆರೆಗಳನ್ನು ನಿರ್ಮಿಸಿ ಜನರಿಗೆ ನೆರವಾಗುತ್ತಾರೆ. ಹಲವು ಪವಾಡಗಳನ್ನು ಸೃಷ್ಠಿಸುತ್ತಾರೆ. ಮಾಡಿದಷ್ಟು ನೀಡು‌ ಭೀಕ್ಷೆ ಎಂದು ಸಾರುವ ಮೂಲಕ ಕಾಯಕ ತತ್ವ ಹೇಳುತ್ತಾರೆ.

3 / 8
ಹೀಗೆ ಜನರ ಕಷ್ಟಗಳಿಗೆ ಪರಿಹಾರ ನೀಡಿದ ಸಂತ ತಿಪ್ಪೇರುದ್ರಸ್ವಾಮಿ ದೈವತ್ವಕ್ಕೆ ಏರಿದ್ದಾರೆ. ಅಂತೆಯೇ ನೂರಾರು ವರ್ಷಗಳಿಂದ ಪ್ರತಿ ವರ್ಷ ಅದ್ಧೂರಿ ಜಾತ್ರೆ, ರಥೋತ್ಸವ ನಡೆಯುತ್ತದೆ.

4 / 8
ಮತ್ತೊಂದು ಕಡೆ ದೇಗುಲದ ಬಳಿಯಲ್ಲಿ ಭಕ್ತರು ಕೊಬ್ಬರಿ ಸುಟ್ಟು ಹರಕೆ ತೀರಿಸುತ್ತಾರೆ. ನಾಯಕನಹಟ್ಟಿಗೆ ಸಂತ ತಿಪ್ಪೇರುದ್ರಸ್ವಾಮಿಗಳು ಬರುವ ಸಂದರ್ಭ ರಾತ್ರಿ ಕತ್ತಲು ಆವರಿಸಿರುತ್ತದಂತೆ. ಹೀಗಾಗಿ, ಕೊಬ್ಬರಿ ಸುಟ್ಟು ಕೊಬ್ಬರಿ‌‌ ಬೆಳಕಿನಲ್ಲಿ ಭಕ್ತರು ಕರೆದುಕೊಂಡು ಬರುತ್ತಾರಂತೆ.

5 / 8
ಇನ್ನು ಈ ಜಾತ್ರೆಯಲ್ಲಿ ಲಕ್ಷಾಂತರ ಜನ ಭಕ್ತರು ಭಾಗಿಯಾಗಿ ಕೃತಾರ್ಥರಾಗುತ್ತಾರೆ.‌ ರಥೋತ್ಸವಕ್ಕೂ ಮುನ್ನ ‘ಮುಕ್ತಿ ಬಾವುಟ' ಹರಾಜು ಪ್ರಕ್ರಿಯೆ ನಡೆಯುತ್ತದೆ. ಈ ಸಲ ಮಾಜಿ ಸಚಿವ ಡಿ.ಸುಧಾಕರ್ 55ಲಕ್ಷ ರೂಪಾಯಿಗೆ ಮುಕ್ತಿ ಬಾವುಟ ಪಡೆದರು.

6 / 8
ಇಂದಿಗೂ ಜಾತ್ರೆ ವೇಳೆ ಭಕ್ತರು ಕೊಬ್ಬರಿ ಸುಟ್ಟು ಬೆಳಗುವ ಮೂಲಕ ಹರಕೆ ತೀರಿಸುತ್ತಾರೆ. ಸಂತಾನ ಭಾಗ್ಯ, ಕಂಕಣ ಭಾಗ್ಯ ಸೇರಿ ಇತರೆ ಕಷ್ಟ ಕಾರ್ಪಣ್ಯಗಳಿಗೆ ಸಂತ ಇಂದಿಗೂ ಪರಿಹಾರ ನೀಡುತ್ತಾನೆಂಬುದು ಭಕ್ತರ ನಂಬಿಕೆ.

7 / 8
ಒಟ್ಟಾರೆಯಾಗಿ ಕೋಟೆನಾಡಿನ ನಾಯಕನಹಟ್ಟಿಯಲ್ಲಿ ಸಾಂಪ್ರದಾಯಿಕ ಅದ್ಧೂರಿ ಜಾತ್ರೆ ನಡೆದಿದೆ. ರಾಜ್ಯದ ಮೂಲೆ ಮೂಲೆಯಿಂದ ಮಾತ್ರವಲ್ಲದೆ ಆಂಧ್ರಪ್ರದೇಶದಿಂದಲೂ ಭಕ್ತರು ಆಗಮಿಸಿದ್ದು, ಲಕ್ಷಾಂತರ ಜನರು ರಥೋತ್ಸವದಲ್ಲಿ ಭಾಗಿಯಾಗಿ ಪುಳಕಿತರಾದರು.

8 / 8
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ

‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್

ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ

ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ

ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ

4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ

ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ