ಚಿತ್ರದುರ್ಗ: ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ 55 ವರ್ಷ ಯಶೋಧಮ್ಮ ಎಂಬುವರು ಲೋ ಬಿಪಿಯಿಂದ ಕುಸಿದು ಬಿದ್ದರು. ಕೂಡಲೆ ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ದಾರಿ ಮಧ್ಯೆ ನಿಧನರಾದರು. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿತ್ರದುರ್ಗ: ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು
ಮೃತ ಮಹಿಳಾ ಚುನಾವಣಾ ಅಧಿಕಾರಿ ಯಶೋಧಮ್ಮ
Follow us
TV9 Web
| Updated By: ವಿವೇಕ ಬಿರಾದಾರ

Updated on: Apr 26, 2024 | 1:31 PM

ಚಿತ್ರದುರ್ಗ, ಏಪ್ರಿಲ್​ 26: ಚಳ್ಳಕೆರೆ (Challakere) ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ (Polling Booth) ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ (Low BP) ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ದಾರಿ ಮಧ್ಯೆ ಮೃತಪಟ್ಟರು. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತಗಟ್ಟೆ ಬಳಿ ಮಹಿಳೆಗೆ ಹೃದಯ ಸ್ತಂಭನ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡನೇ ಹಂತದ ನಡೆಯುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಈವರೆಗೆ 19.2 ರಷ್ಟು ಮತದಾನವಾಗಿದೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ ಮಹಿಳೆಯ ಹೃದಯ ಸ್ತಂಭನವಾಗಿದ್ದು, ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದ ವೈದ್ಯ ಜೀವ ಉಳಿಸಿದ್ದಾರೆ.

ಇದನ್ನೂ ಓದಿ: 32ನೇ ಬಾರಿಗೆ ಮೊದಲಿಗನಾಗಿ ಮತ ಚಲಾಯಿಸಿದ 82ರ ವಿಶೇಷ ಚೇತನ ಮಿಟ್ಟು ಚಂಗಪ್ಪ

ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಹಿಳೆ ಮತದಾನ ಮಾಡಲು ಬಂದಿದ್ದರು. ಈ ವಳೇ ಮಹಿಳೆಯ ಹೃದಯ ಸ್ತಂಭನವಾಗಿದೆ. ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಜೀವ ಉಳಿಸಿದರು.

ಈ ಸಂಬಂಧ ವೈದ್ಯ ಗಣೇಶ್​ ಶ್ರೀನಿವಾಸ್​ ಪ್ರಸಾದ್​ ಮಾತನಾಡಿ, 50 ಆಸುಪಾಸಿನ ಮಹಿಳೆಯೊಬ್ಬರು ಕ್ಯಾನ್‌ನಲ್ಲಿ ನೀರು ಕುಡಿಯಲು ಬಂದಿದ್ದರು. ನಾನು ಅವರ ನಾಡಿಮಿಡಿತವನ್ನು ಪರಿಶೀಲಿಸಿದೆ. ನಾಡಿಮಿಡಿತ ತುಂಬಾ ಕಡಿಮೆಯಾಗಿದೆ ಅಂತ ಕಂಡುಬಂತು. ಕಣ್ಣುಗಳು ಮೇಲಕ್ಕೆತ್ತಿ ಧಿಡೀರನೆ ಕುಸಿದರು. ಅವರ ದೇಹದಲ್ಲಿ ಚಲನವಲ ಇರಲಿಲ್ಲ. ಅವರು ಉಸಿರುಗಟ್ಟುತ್ತಿದ್ದರು. ನಾನು ತಕ್ಷಣ ಸಿಪಿಆರ್ ಮಾಡಿದೆ. ಸ್ವಲ್ಪ ಗುಣಮುಖರಾದರು. ಅವರ ಸ್ಥಿತಿ ಸುಧಾರಿಸಿತು. ಬಳಿಕ ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದರು. ಆಂಬ್ಯುಲೆನ್ಸ್​ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. 5 ನಿಮಿಷ ವಿಳಂಬವಾಗಿದ್ದರೂ ನಾವು ಅವರನ್ನು ಕಳೆದುಕೊಳ್ಳುತ್ತಿದ್ದೇವು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು