ಚಿತ್ರದುರ್ಗ: ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ

ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ: ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ
ಬೆಂಕಿ ಕೆನ್ನಾಲಿಗೆ ಸುಟ್ಟು ಕರಕಲಾದ ಹೋಟೆಲ್​​
Follow us
| Updated By: ವಿವೇಕ ಬಿರಾದಾರ

Updated on: Jan 21, 2024 | 8:02 PM

ಚಿತ್ರದುರ್ಗ, ಜನವರಿ 21: ಎಲ್​​ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್​​ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್​​ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್​​ನಲ್ಲಿದ್ದ ಸಿಲಿಂಡರ್​ ಸ್ಪೋಟಗೊಂಡಿದೆ.

ಸಿಲಿಂಡರ್​ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ದಾಭಾ

ರಾಯಚೂರು: ಸಿಂಧನೂರು ಹೊರವಲಯದ ಕೆಎ-36 ಹೆಸರಿನ ದಾಭಾ ಕಂ ರೆಸ್ಟೋರೆಂಟ್​ನಲ್ಲಿ ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗ್ರಾಹಕರು ಹಾಗೂ ಸಿಬ್ಬಂದಿ ದಾಭಾದಿಂದ ಹೊರಗೆ ಓಡಿ ಬಂದಿದ್ದಾರೆ. ದಾಭಾದಲ್ಲಿನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ