ಚಿತ್ರದುರ್ಗ, ಜನವರಿ 21: ಎಲ್ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್ನಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡಿದೆ.
ಸಿಲಿಂಡರ್ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಾಯಚೂರು: ಸಿಂಧನೂರು ಹೊರವಲಯದ ಕೆಎ-36 ಹೆಸರಿನ ದಾಭಾ ಕಂ ರೆಸ್ಟೋರೆಂಟ್ನಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗ್ರಾಹಕರು ಹಾಗೂ ಸಿಬ್ಬಂದಿ ದಾಭಾದಿಂದ ಹೊರಗೆ ಓಡಿ ಬಂದಿದ್ದಾರೆ. ದಾಭಾದಲ್ಲಿನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ