ಚಿತ್ರದುರ್ಗದ ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಅತ್ಯಾಚಾರ ಆಗಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರಿಂದ ವರದಿ

| Updated By: ಆಯೇಷಾ ಬಾನು

Updated on: Jan 04, 2023 | 12:50 PM

Murugha seer Pocso case: 1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ.

ಚಿತ್ರದುರ್ಗದ ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಅತ್ಯಾಚಾರ ಆಗಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರಿಂದ ವರದಿ
ಮುರುಘಾ ಶ್ರೀ
Follow us on

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ(Murugha seer) ವಿರುದ್ದ ಪೋಕ್ಸೋ ಕಾಯ್ದೆಯಡಿ(POCSO case) ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದ್ರೆ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ.

1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ. ಯಾವುದೇ ಗಾಯಗಳು ಇಲ್ಲ ಎಂದು ಚಿತ್ರದುರ್ಗ‌ ಜಿಲ್ಲಾಸ್ಪತ್ರೆಯ ವೈದ್ಯರು ಕೋರ್ಟ್​​​ಗೆ ಸಂತ್ರಸ್ತ ಬಾಲಕಿಯರ ಮೆಡಿಕಲ್ ರಿಪೋರ್ಟ್ ಸಲ್ಲಿಸಿದ್ದಾರೆ. ಈಗಾಗಲೇ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್​ನಲ್ಲಿಯೂ ಮೆಡಿಕಲ್ ರಿಪೋರ್ಟ್ ಬಗ್ಗೆ ಉಲ್ಲೇಖಿಸಲಾಗಿತ್ತು. ಸದ್ಯ ಮುರುಘಾಶ್ರೀ ವಿರುದ್ದದ ಫೋಕ್ಸೋ ಕೇಸ್ ಗೆ ಟ್ವಿಸ್ಟ್ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಪಿತೂರಿ ಪ್ರಕರಣ: ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌ಗೆ ಜಾಮೀನು

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಚಿತ್ರದುರ್ಗ‌ ಜಿಲ್ಲಾಸ್ಪತ್ರೆ ವೈದ್ಯರ ವರದಿ ಬಗ್ಗೆ ಮಾಹಿತಿ ಇಲ್ಲ. ಅಂತೆ ಕಂತೆ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮುರುಘಾಶ್ರೀ ಸೇರಿದಂತೆ ಎಲ್ಲರನ್ನೂ ಬಂಧಿಸಲಾಗಿದೆ. ಪ್ರಕರಣದ ತನಿಖೆ ವೇಳೆ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದರು.

ಪ್ರಕರಣದ ಹಿನ್ನೆಲೆ

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ (POCSO case) ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರು.

ಪೋಕ್ಸೋ ಕೇಸ್‌ನಲ್ಲಿ ಪೊಲೀಸರಿಂದ ಮುರುಘಾಶ್ರೀಗಳ ಅರೆಸ್ಟ್‌ ವಿಚಾರಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಪರಶು ಟಿವಿ9 ಜೊತೆ ಮಾತನಾಡಿ, ಮುರುಘಾಶ್ರೀ ಕಾವಿಯೊಳಗಿದ್ದ ಬೆಕ್ಕು. ಸಾಕಷ್ಟು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:31 pm, Wed, 4 January 23