ಬೈಕಿಗೆ ಅಪರಿಚಿತ ವಾಹನ ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲೇ ಸಾವು

| Updated By: Skanda

Updated on: Dec 03, 2020 | 12:43 PM

ಕೊಂಡ್ಲಹಳ್ಳಿ ನಿವಾಸಿ 35 ವರ್ಷದ ನಾಗಭೂಷಣ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಡಿಕ್ಕಿ ಬಳಿಕ ಅಪರಿಚಿತ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್​ ಸವಾರ ನಾಗಭೂಷಣ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ.

ಬೈಕಿಗೆ ಅಪರಿಚಿತ ವಾಹನ ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲೇ ಸಾವು
Follow us on

ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮದಿಂದಾಗಿ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮೊಗಲಹಳ್ಳಿ ಬಳಿ ನಡೆದಿದೆ.

ಕೊಂಡ್ಲಹಳ್ಳಿ ನಿವಾಸಿ 35 ವರ್ಷದ ನಾಗಭೂಷಣ ಸಾವನ್ನಪ್ಪಿದವರು. ಡಿಕ್ಕಿ ಬಳಿಕ ಅಪರಿಚಿತ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್​ ಸವಾರ ನಾಗಭೂಷಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

Published On - 6:59 pm, Mon, 30 November 20