ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ

ನಿಮ್ಮ ಸಹೋದರಿಗೆ ದೆವ್ವ ಮೆಟ್ಟಿದೆ, ದೈಹಿಕ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಅಂತ ಅಪ್ರಾಪ್ತ ಬಾಲಿಕಿ ಮೇಲೆ 6-7 ತಿಂಗಳಿನಿಂದ ಲೈಂಗಿಕ ದೌರ್ಜನ್ಯ ಎಸಗಿದ್ದ ಚಿತ್ರದುರ್ಗ ಮೌಲ್ವಿ ಅಬ್ದುಲ್​ ರಹೆಮಾನ್​​ನನ್ನು ಚಿತ್ರದುರ್ಗ ಮಹಿಳಾ ಪೊಲೀಸ್​ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ.

ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Jun 03, 2024 | 7:59 AM

ಚಿತ್ರದುರ್ಗ, ಜೂನ್​ 03: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಸೀದಿಯ ಮೌಲ್ವಿ (Maulvi) ಅಬ್ದುಲ್ ರಹೆಮಾನ್ ವಿರುದ್ಧ ಚಿತ್ರದುರ್ಗ (Chitradurga) ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ (Pocso) ಪ್ರಕರಣ ದಾಖಲಾಗಿದ್ದು, ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ.

ಬಾಲಕಿ ಕಳೆದ ಮೂರು ವರ್ಷದಿಂದ ಖುರಾನ್ ಓದಲು ಮಸೀದಿಗೆ ಹೋಗುತ್ತಿದ್ದಳು. ಬಾಲಕಿಗೆ ದೆವ್ವ ಹಿಡಿದಿದೆ, ಮನೆಯಲ್ಲೇ ಪರಿಹಾರ ಪೂಜೆ ಮಾಡಬೇಕು ಎಂದು ಮೌಲ್ವಿ ಹೇಳಿದ್ದನು. ಅದರಂತೆ ಮೌಲ್ವಿ 6-7 ತಿಂಗಳುಗಳ ಕಾಲ ವಾರಕೊಮ್ಮೆ ಮನೆಗೆ ಹೋಗಿದ್ದಾನೆ. ಮನೆಗೆ ಹೋದಾಗಲೆಲ್ಲ ಬಾಲಕಿ ಮತ್ತು ಆಕೆಯ ಸಹೋದರನನ್ನು ಕೋಣೆಯೊಳಗೆ ಕರೆದೊಯ್ಯುತ್ತಿದ್ದನು. ಬಾಲಕಿ ತಾಯಿಯನ್ನು ಕೋಣೆಯ ಹೊರಗೆ ಇರುವಂತೆ ಹೇಳುತ್ತಿದ್ದನು. ಬಾಲಕಿ ಸಹೋದರನಿಗೆ “ನಿನ್ನ ಸಹೋದರಿಗೆ ದೆವ್ವ ಮೆಟ್ಟಿದೆ” ಅಂತ ನಂಬಿಸಿದ್ದನು. ದೈಹಿಕ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಎಂದು ಹೇಳಿದ್ದನು.

ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೋ ಕೇಸ್​​: ಮನೆಯಿಂದ ನಾಪತ್ತೆಯಾಗಿದ್ದ ಸಂತ್ರಸ್ತೆ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

ಸಹೋದರಿ ಮೇಲೆ ಅತ್ಯಾಚಾರವೆಸಗುವಂತೆ ಸಹೋದರನಿಗೆ ಪ್ರೇರಣೆ ನೀಡುತ್ತಿದ್ದನು. ಮೌಲ್ವಿಯ ಪ್ರೇರಣೆಯಂತೆ ಸಹೋದರ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಹೋದರಿ ಮೇಲೆ ಸಹೋದರ ಅತ್ಯಾಚಾರ ಎಸಗಿರುವುದನ್ನು ಮೌಲ್ವಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ತಾನೂ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾನೆ.

6-7 ತಿಂಗಳು ಕಾಲ ಇದೇ ರೀತಿ ನಡೆದಿದೆ. ಒಂದು ದಿನ ಬಾಲಕಿ ಹೊಟ್ಟೆ ನೋವು ಅಂತ ಒದ್ದಾಡಿದ್ದಾಳೆ. ಕೂಡಲೆ ಪೋಷಕರು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬಯಲಾಗಿದೆ. ಸಂತ್ರಸ್ತೆಯ ತಾಯಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಮೌಲ್ವಿ, ಸಂತ್ರಸ್ತೆಯ ಸಹೋದರನ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us