ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!
ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ತಾಂತ್ರಿಕ ಸಮಸ್ಯೆಯಿಂದ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ.
ಚಿತ್ರದುರ್ಗ, (ಡಿಸೆಂಬರ್ 24): ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ (byrathi Suresh) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ತಾಂತ್ರಿಕ ಸಮಸ್ಯೆಯಿಂದ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಬೈರತಿ ಸುರೇಶ್ ಇಂದು(ಡಿಸೆಂಬರ್ 24) ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ. ಇದರಿಂದ ಕೂಡಲೇ ಪೈಲೆಟ್ ಹಿರಿಯೂರು ಬಳಿ ಹೆಲಿಕಾಪ್ಟರ್ರನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.
ಇಂದು ಬೆಳಗ್ಗೆ 10.15 ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಟೇಕಾಫ್ ಆಗಿದ್ದ ಹೆಲಿಕಾಫ್ಟರ್ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಪೈಲೆಟ್ ಹಿರಿಯೂರಿನಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ. ಇದರಿಂದ ಬೈರತಿ ಸುರೇಶ್ ನಿಟ್ಟುಸಿರುಬಿಟ್ಟಿದ್ದಾರೆ. ಇನ್ನು ಅವರು ರಸ್ತೆ ಮಾರ್ಗವಾಗಿ ಗದಗಕ್ಕೆ ತೆರಳಲು ಮುಂದಾಗಿದ್ದಾರೆ.
Published On - 12:20 pm, Sun, 24 December 23