Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಮಠದ SJM ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿ ನಾಮ ನಿರ್ದೇಶನ: ಬಿಜೆಪಿ MLC ಕೆ.ಎಸ್.ನವೀನ್ ನೇಮಕ

ಚಿತ್ರದುರ್ಗದ ಮುರುಘಾಮಠದ ಅಧೀನದಲ್ಲಿರುವ ಎಸ್​​ಜೆಎಂ ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಬಿಜೆಪಿ ಎಂಎಲ್​ಸಿ ಕೆ.ಎಸ್.ನವೀನ್​ ನಾಮ ನಿರ್ದೇಶನಗೊಂಡಿದ್ದಾರೆ.

ಮುರುಘಾಮಠದ SJM ವಿಶ್ವವಿದ್ಯಾಲಯಕ್ಕೆ ಸರ್ಕಾರದ ಪ್ರತಿನಿಧಿ ನಾಮ ನಿರ್ದೇಶನ: ಬಿಜೆಪಿ MLC ಕೆ.ಎಸ್.ನವೀನ್ ನೇಮಕ
SJM College
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 05, 2022 | 6:54 PM

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದ (murugha mutt) ಅಧೀನದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯಕ್ಕೆ (SJM) ಸರ್ಕಾರದ ಬೋರ್ಡ್ ಆಫ್ ಗವರ್ನರ್ಸ್ ಆಗಿ ಬಿಜೆಪಿಯ ವಿಧಾನಪರಿಷತ್ ಕೆ.ಎಸ್.ನವೀನ್​ ನಾಮ ನಿರ್ದೇಶನಗೊಂಡಿದ್ದಾರೆ. ಸರ್ಕಾರದ ಅಧೀನ ಕಾರ್ಯದರ್ಶಿ ನಂದಕುಮಾರ್ ಆದೇಶ ಹೊರಡಿಸಿದ್ದಾರೆ.

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ನ್ಯಾಯ ಕೊಡಿಸಿ ಇಲ್ಲಾ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಮತ್ತೊಂದು ಪತ್ರ ಬರೆದ ಬಾಲಕಿಯರ ತಾಯಿ

ಮೈಸೂರು: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರಿಗೆ ಬಾಲಕಿಯರ ತಾಯಿ ಪತ್ರ ಬರೆದಿದ್ದಾರೆ. ‘ನ್ಯಾಯ ಕೊಡಿಸಿ ಇಲ್ಲಾ ದಯಾಮರಣ ನೀಡಿ, ತಳಮಟ್ಟದ ಸಮುದಾಯಗಳ ಮಹಿಳಾ ಪ್ರತಿನಿಧಿ ನೀವಾಗಿದ್ದೀರಿ, ನಮ್ಮಂತವರ ತಾಯಿ ಸ್ಥಾನದಲ್ಲಿರುವ ನೀವು ನಮಗೆ ನ್ಯಾಯ ಕೊಡಿಸಿ ಎಂದು ಬರೆದಿದ್ದಾರೆ.

ಸ್ವಾಮಿಜಿಯಿಂದ ಯಾವ ಕೆಟ್ಟ ಕೃತ್ಯ ನಡೆದಿಲ್ಲ. ಎಲ್ಲ ನಿಮ್ಮ ಹಾಗೂ ನಿಮ್ಮ ಮಕ್ಕಳ ಷಡ್ಯಂತ್ರ ಕೆಲವು ಅಧಿಕಾರಿಗಳು ಈ ರೀತಿ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಕರಣ ದಾಖಲಾದ ನಂತರ ನಾನು ನನ್ನ ಮಕ್ಕಳು ಆಶ್ರಯ ಕಳೆದುಕೊಂಡಿದ್ದೇವೆ. ಊಟ ಆಶ್ರಯ ಇಲ್ಲದಂತಾಗಿದೆ. ಆಶ್ರಯ ಕೊಡುವವರನ್ನು ಅನುಮಾನದಿಂದ ನೋಡಲಾಗುತ್ತಿದೆ. ‘ಭೇಟಿ ಪಡಾವೋ ಭೇಟಿ ಬಚಾವೋ’ ನಗೆಪಾಟಲಿಗೀಡಾಗುತ್ತಿದೆ. ನಮಗೆ ನ್ಯಾಯ ಕೊಡಿಸಿ ಎಂದು ಬಾಲಕಿಯರ ತಾಯಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಜಿಲ್ಲೆಯ ಪ್ರಸಿದ್ಧ ಮಠವಾಗಿದ್ದ ಮುರುಘಾ ಮಠದಲ್ಲಿ ನಡೆಯಬಾರದ ಅನಾಚಾರ ನಡೆದಿದೆ. ಮುರುಘಾಶ್ರೀ ವಿರುದ್ಧ ಎರಡು ಫೋಕ್ಸೋ ಪ್ರಕರಣಗಳು ದಾಖಲಾಗಿದ್ದು ಕಾವಿಧಾರಿಯ ಕಾಮರಾಕ್ಷಸತನವನ್ನ ಕಂಡು ಇಡೀ ರಾಜ್ಯ ಬೆಚ್ಚಿಬಿದ್ದಿದೆ. ಇಡೀ ಕಾವಿ ಕುಲವನ್ನೇ ಅನುಮಾನದಿಂದ ನೋಡುವಂತೆ ಮಾಡಿದೆ. ಎಲ್ಲ ಕಳೆದುಕೊಂಡು ತಮ್ಮ ಆಶ್ರಯಕ್ಕೆ ಬಂದಿದ್ದ ಮಕ್ಕಳನ್ನು ತಂದೆಯಂತೆ ಪೊರೆಯಬೇಕಿದ್ದ ವ್ಯಕ್ತಿಯೇ ಕಾಮಪಿಪಾಸೆ ತಣಿಸಿಕೊಳ್ಳಲು ಬಳಸಿಕೊಂಡು ಕ್ರೌರ್ಯ ಮೆರೆದಿದ್ದಾರೆ. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರು ಇಂದು ಸೆರೆಮನೆ ವಾಸದಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Mon, 5 December 22

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!