AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕೂಡಲೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಸ್ವಸ್ಥ ವಿದ್ಯಾರ್ಥಿಗಳು ಬಹುತೇಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿತ್ರದುರ್ಗ ನಗರ ಠಾಣೆಯ ಸಿಪಿಐ ತಿಪ್ಪೇಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಅಸ್ವಸ್ಥ ವಿದ್ಯಾರ್ಥಿಗಳು
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 12, 2023 | 5:52 PM

ಚಿತ್ರದುರ್ಗ, ಸೆ.12: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿತ್ರದುರ್ಗ (Chitradurga) ದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕೂಡಲೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಸ್ವಸ್ಥ ವಿದ್ಯಾರ್ಥಿಗಳು ಬಹುತೇಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿತ್ರದುರ್ಗ ನಗರ ಠಾಣೆಯ ಸಿಪಿಐ ತಿಪ್ಪೇಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಸಿಯೂಟ ಸೇವನೆ ಬಳಿಕ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಡಿಕೊಂಡಿದ್ದರು. ಇನ್ನು ಮಕ್ಕಳು ಮಧ್ಯಾಹ್ನದ ಬಿಸಿಯೂಟದ ನಂತರ ಸೇಂಗಾ ಚಾಕ್ಲೇಟ್ ಸೇವಿಸಿದ್ದಾರೆ ಎನ್ನಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

ಇಂತಹ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಮಕ್ಕಳ ಮೇಲೆ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ. ಹವದು, ಸೆಪ್ಟಂಬರ್ 06 ರಂದು ದಾವಣಗೆರೆ ತಾಲೂಕಿನ ಮಾಯಕೊಂಡದ ಮೊರಾರ್ಜಿ ಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ್ದ 38ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಕ್ಕೆ ಸೇರಿಸಲಾಗಿತ್ತು. ಬಳಿಕ ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ:ದಾವಣಗೆರೆ: ಮೊರಾರ್ಜಿ ವಸತಿ ನಿಲಯದಲ್ಲಿ ಅಸ್ವಸ್ಥಗೊಂಡಿದ್ದ ಮಕ್ಕಳು ಗುಣಮುಖ; ಎಲ್ಲಾ ಮಕ್ಕಳು ಡಿಸ್ಚಾರ್ಜ್

ಯಾವುದೇ ಪ್ರಾಣಾಪಾಯವಿಲ್ಲದೇ ಡಿಸ್ಚಾರ್ಜ್​ ಆಗಿದ್ದ ಮಕ್ಕಳು

ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದ ಕೆಲವು ಮಕ್ಕಳನ್ನು ಪೋಷಕರೊಂದಿಗೆ ಮನೆಗೆ ಕಳುಹಿಸಲಾಗಿತ್ತು. ಜೊತೆಗೆ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲಾ ಮಕ್ಕಳು ಆರೋಗ್ಯವಾಗಿ ಸ್ಥಿರವಾಗಿದ್ದಾರೆ ಎಂದು ವೈದ್ಯರು ಹೇಳಿದ ಹಿನ್ನೆಲೆಯಲ್ಲಿ ಆ ಮಕ್ಕಳನ್ನು kಊಡ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ ಎಂದು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದರಾಜು ತಿಳಿಸಿದ್ದರು. ಇಂತಹ ಘಟನೆಗಳು ಇನ್ನೂ ಹುಸಿಯಾಗಿರುವಾಗಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Tue, 12 September 23