AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಶ್ರೀ ವಿರುದ್ಧ ಪಿತೂರಿ ಪ್ರಕರಣ: ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌ಗೆ ಜಾಮೀನು

ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಗೆ ಜಾಮೀನು ಸಿಕ್ಕಿದೆ.

ಮುರುಘಾ ಶ್ರೀ ವಿರುದ್ಧ ಪಿತೂರಿ ಪ್ರಕರಣ:  ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌ಗೆ ಜಾಮೀನು
ಮುರುಘಾ ಶ್ರೀ ಮತ್ತು ಎಸ್.ಕೆ.ಬಸವರಾಜನ್‌
TV9 Web
| Edited By: |

Updated on: Dec 22, 2022 | 6:37 PM

Share

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ (Chitradurga Muruga Mutt) ಶಿವಮೂರ್ತಿ ಶರಣರ ವಿರುದ್ಧ ಷಡ್ಯಂತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್‌ಗೆ ಕೊನೆ ಜಾಮೀನು (Bail)ಸಿಕ್ಕಿದೆ. ಇಂದು(ಡಿಸೆಂಬರ್ 22) ಕರ್ನಾಟಕ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠದಿಂದ ಜಾಮೀನು ದೊರೆತಿದೆ.

ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಸವಪ್ರಭು ಸ್ವಾಮೀಜಿ, ಎಸ್.ಕೆ.ಬಸವರಾಜನ್‌ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜನ್​ಗೆ ಚಿತ್ರದುರ್ಗದ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್​ಗೆ ಜಾಮೀನಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ: ಸೌಭಾಗ್ಯ ಬಸವರಾಜನ್ ಅರೆಸ್ಟ್

ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠದ ನ್ಯಾ.ಎಸ್.ರಾಚಯ್ಯ ಅವರು ಬಸವರಾಜನ್​ಗೆ ಜಾಮೀನು ನೀಡಿ ಆದೇಶ ಹೊರಡಿಸಿದರು.

ಗಂಡ-ಹೆಂಡ್ತಿ ಬಂಧನ

ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ ಹಾಗೂ ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪದ ಮೇಲೆ  ಬಸವರಾಜನ್‌ ಹಾಗೂ ಸೌಭಾಗ್ಯ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನ.9 ರಂದು ದೂರು ದಾಖಲಾಗಿದ್ದು, ಮರುದಿನ ಅಂದರೆ ನ.10 ರಂದು ಬಸವರಾಜನ್‌ ಅವರನ್ನು ಬಂಧಿಸಲಾಗಿತ್ತು. ಆದರೆ, ಸೌಭಾಗ್ಯ ತಲೆ ಮರೆಸಿಕೊಂಡಿದ್ದರು. ಬಳಿಕ ಡಿಸೆಂಬರ್ 16ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸೌಭಾಗ್ಯ ಅವರನ್ನು ದಾವಣಗೆರೆಯಲ್ಲಿ ಬಂಧಿಸಿದ್ದರು.

ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಇವರು ಒಮ್ಮೆ ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ತದನಂತರ 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಇವರ ಪತ್ನಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
TV9 Web
TV9 Web

TV9 Kannada

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!