ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ (Chitradurga Muruga Mutt) ಶಿವಮೂರ್ತಿ ಶರಣರ ವಿರುದ್ಧ ಷಡ್ಯಂತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್‌ಗೆ ಕೊನೆ ಜಾಮೀನು (Bail)ಸಿಕ್ಕಿದೆ. ಇಂದು(ಡಿಸೆಂಬರ್ 22) ಕರ್ನಾಟಕ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠದಿಂದ ಜಾಮೀನು ದೊರೆತಿದೆ.
ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಸವಪ್ರಭು ಸ್ವಾಮೀಜಿ, ಎಸ್.ಕೆ.ಬಸವರಾಜನ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜನ್‌ಗೆ ಚಿತ್ರದುರ್ಗದ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ಗೆ ಜಾಮೀನಿ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ: ಸೌಭಾಗ್ಯ ಬಸವರಾಜನ್ ಅರೆಸ್ಟ್
ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾ.ಎಸ್.ರಾಚಯ್ಯ ಅವರು ಬಸವರಾಜನ್‌ಗೆ ಜಾಮೀನು ನೀಡಿ ಆದೇಶ ಹೊರಡಿಸಿದರು.
ಗಂಡ-ಹೆಂಡ್ತಿ ಬಂಧನ
ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ ಹಾಗೂ ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪದ ಮೇಲೆ ಬಸವರಾಜನ್ ಹಾಗೂ ಸೌಭಾಗ್ಯ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನ.9 ರಂದು ದೂರು ದಾಖಲಾಗಿದ್ದು, ಮರುದಿನ ಅಂದರೆ ನ.10 ರಂದು ಬಸವರಾಜನ್ ಅವರನ್ನು ಬಂಧಿಸಲಾಗಿತ್ತು. ಆದರೆ, ಸೌಭಾಗ್ಯ ತಲೆ ಮರೆಸಿಕೊಂಡಿದ್ದರು. ಬಳಿಕ ಡಿಸೆಂಬರ್ 16ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸೌಭಾಗ್ಯ ಅವರನ್ನು ದಾವಣಗೆರೆಯಲ್ಲಿ ಬಂಧಿಸಿದ್ದರು.
ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಇವರು ಒಮ್ಮೆ ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ತದನಂತರ 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರ ಪತ್ನಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ