ಮುರುಘಾ ಶ್ರೀ ವಿರುದ್ಧ ಧಾರ್ಮಿಕ ಸ್ಥಳ ದುರುಪಯೋಗ, ಪರಿಶಿಷ್ಟ ಕಾಯಿದೆ ದಾಖಲು: ಚಾರ್ಜ್​ಶೀಟ್​ ಸಲ್ಲಿಕೆ, ವಿವರ ಇಲ್ಲಿದೆ

ಚಿತ್ರದುರ್ಗದ ಮುರುಘಾಮಠದ ಮುರುಘಾ ಶರಣರು ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಪೊಲೀಸರು 694 ಪುಟಗಳ ಚಾರ್ಜ್​ಶೀಟ್​​ನ್ನು ನ್ಯಾಯಾಲಯಕ್ಕೆ ​ಸಲ್ಲಿಸಿದ್ದಾರೆ.

ಮುರುಘಾ ಶ್ರೀ ವಿರುದ್ಧ ಧಾರ್ಮಿಕ ಸ್ಥಳ ದುರುಪಯೋಗ, ಪರಿಶಿಷ್ಟ ಕಾಯಿದೆ ದಾಖಲು: ಚಾರ್ಜ್​ಶೀಟ್​ ಸಲ್ಲಿಕೆ, ವಿವರ ಇಲ್ಲಿದೆ
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 09, 2022 | 7:10 PM

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದ ಮುರುಘಾ ಶರಣರು (Muruga shree) ಪೋಕ್ಸೋ ಪ್ರಕರಣದಲ್ಲಿ (Pocso case) ಜೈಲುಪಾಲಾಗಿದ್ದು, ಪೊಲೀಸರು 694 ಪುಟಗಳ ಚಾರ್ಜ್​ಶೀಟ್​​ನ್ನು ಅಕ್ಟೋಬರ್ 27ರಂದು ಚಿತ್ರದುರ್ಗ ನ್ಯಾಯಾಲಯಕ್ಕೆ ​ಸಲ್ಲಿಸಿದ್ದಾರೆ. ಪ್ರಕರಣದ ಇಬ್ಬರು ಬಾಲಕಿಯರಿಂದ ಪ್ರತ್ಯೇಕ ಹೇಳಿಕೆ ಪಡೆಯಲಾಗಿತ್ತು. ಹೀಗಾಗಿ 347 ಪುಟಗಳ ಎ, ಬಿ ಎಂದು 2 ಭಾಗಗಳಾಗಿ ಚಾರ್ಜ್​ಶೀಟ್ ಸಲ್ಲಿಸಿಕೆಯಾಗಿದೆ. ಚಿತ್ರದುರ್ಗದ ಡಿವೈಎಸ್​ಪಿ ಅನಿಲ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆದಿದೆ. ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬರು ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯಾಗಿದ್ದು, ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯ ಕಲಂ ಅಳವಡಿಕೆಯಾಗಿದೆ.

ಇಷ್ಟೇ ಅಲ್ಲದೇ ವೈಯಕ್ತಿ ಇಚ್ಛೆಗಾಗಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಂಡಿದ್ದಾರೆಂದು ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988 ಅಡಿ ಕೇಸ್​ ದಾಖಲಿಸಲಾಗಿದೆ. ಅಲ್ಲದೇ ಬಾಲಪರಾಧಿ ನ್ಯಾಯ ರಕ್ಷಣೆ ಕಲಂ 75 , ಮಕ್ಕಳ ರಕ್ಷಣೆ ಕಾಯ್ದೆ 2015 ಅಡಿ ಕೂಡ ಪೊಲೀಸರು ಕೇಸ್​ ದಾಖಲಿಸಿದ್ದಾರೆ.

ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಸೇರಿ ಮೂವರ ವಿರುದ್ಧ ಆರೋಪ ದೃಢಪಟ್ಟಿದೆ -ಚಿತ್ರದುರ್ಗ ಎಸ್​ಪಿ

ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶರಣರ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್​ಶೀಟ್​ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್​ ಹೇಳಿದ್ದರು. ಅಕ್ಟೋಬರ್​ 27ರಂದೇ ತನಿಖಾಧಿಕಾರಿ ಅನಿಲ್ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಸಿದ್ದರು. ಚಾರ್ಜ್​ಶೀಟ್​ನ ಸಿಸಿ ನಂಬರ್​ ಬರುವುದು ಬಾಕಿಯಿದೆ. ಈ ಮಧ್ಯೆ, ಎ1 ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ವಾರ್ಡನ್​ ರಶ್ಮಿ ಮತ್ತು ಎ4 ಪರಮಶಿವಯ್ಯ ವಿರುದ್ಧ ಆರೋಪಗಳು ದೃಢಪಟ್ಟಿವೆ ಎಂದು ಚಿತ್ರದುರ್ಗ ಎಸ್​ಪಿ  ಹೇಳಿದ್ದರು.

ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ – ಇವರಿಬ್ಬರ ವಿರುದ್ಧ ಆರೋಪಗಳಿಗೆ ಈವರೆಗೆ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಸಾಕ್ಷ್ಯಾಧಾರ ಸಂಗ್ರಹಿಸಿ ಅಂತಿಮ ಚಾರ್ಜ್​​ಶೀಟ್​ ಸಲ್ಲಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದರು.

2ನೇ ಫೊಕ್ಸೋ ಪ್ರಕರಣ ತನಿಖೆ ನಡೆದಿದೆ:

ತನಿಖಾಧಿಕಾರಿ ಡಿವೈಎಸ್ಪಿ ಅನಿಲ್ 27/10/2022ರಂದು 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2ನೇ ಫೊಕ್ಸೋ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತರ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತರ ಪೋಷಕರ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ಎ1 ಮುರುಘಾಶ್ರೀ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಸಂತ್ರಸ್ತರ ಹೇಳಿಕೆ ಆಧರಿಸಿ ಕೆಲವು ಬಾಲಕಿಯರ ಹೇಳಿಕೆ ಪಡೆದಿದ್ದೇವೆ ಎಂದು ಅವರು ಹೇಳಿದ್ದರು.

ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:

ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ದಾಖಲಾಗಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರನ್ನು ಕರೆಸಿ ಮಾಹಿತಿ ಕೇಳಿದ್ದೇವೆ. ಸಂತ್ರಸ್ತರ ಮಾಹಿತಿ ನೀಡಿದರೆ ತನಿಖೆ ನಡೆಸುತ್ತೇವೆಂದು ತಿಳಿಸಿದ್ದೇವೆ. ಒಡನಾಡಿ ಸಂಸ್ಥೆ, ಮಕ್ಕಳ ಕಲ್ಯಾಣ ಸಮಿತಿ ಸಹಯೋಗದಲ್ಲಿ ತನಿಖೆ ನಡೆಸುವುದಾಗಿ ಮನವಿ ಮಾಡಿದ್ದೇವೆ. ಕೆಲ ಮಾಹಿತಿಯನ್ನು ಒಡನಾಡಿ ಸಂಸ್ಥೆಯವರು ನೀಡಿದ್ದಾರೆ. ಮಾಹಿತಿ ಆಧಾರದ ಮೇಲೆ ನಾವು ತನಿಖೆಗೆ ತೆರಳಿದ್ದೆವು. ಆದರೆ ಸಂತ್ರಸ್ತ ಬಾಲಕಿ ಆ ಸ್ಥಳದಲ್ಲಿ ಸಿಕ್ಕಿಲ್ಲ. ಒಡನಾಡಿ ಸಂಸ್ಥೆಯವರಿಗೂ ಈ ಬಗ್ಗೆ ತಿಳಿಸಿದ್ದೇವೆ. ಸಂತ್ರಸ್ತೆಯರ ಮಾಹಿತಿ ಸಿಕ್ಕರೆ ಖಂಡಿತ ತನಿಖೆ ನಡೆಸುತ್ತೇವೆ ಎಂದು ದುರ್ಗದ ಎಸ್​ಪಿ ಹೇಳಿದ್ದರು.

ಮೊದಲ ಪ್ರಕರಣದ ಸಂತ್ರಸ್ತರು ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಆಗಿದೆ ಎಂದಿದ್ದರು. ಆದರೆ ಆಂಧ್ರ ವ್ಯಾಪ್ತಿಯಲ್ಲಿ ಆಕಸ್ಮಿಕ ಸಾವು ಘಟಿಸಿದ್ದು ತಿಳಿದಿದೆ. ರೈಲಿನಿಂದ ಬಿದ್ದು ಸಾವನ್ನಪ್ಪಿರುವ ವರದಿ ಆಗಿದೆ. ಇನ್ನು, ಮಠದಲ್ಲಿ ಡ್ರಗ್ಸ್ ಬಳಕೆ ಆರೋಪ ವಿಚಾರ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ, ಎಲ್ಲಾ ಮಾಹಿತಿ ಹೇಳಲಾಗದು. ವೈದ್ಯಕೀಯ ಪರೀಕ್ಷೆಯ ಕೆಲ ವರದಿ ಇನ್ನೂ ಬರಬೇಕಿದೆ ಎಂದು ಅವರು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಈದಲು ಇಲ್ಲಿ ಕ್ಲಿಕ್ ಮಾಡಿ 

Published On - 7:07 pm, Wed, 9 November 22

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ