ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ: ನಾಲ್ವರು ಶಂಕಿತ ಆರೋಪಿಗಳ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ದತೆ

ಇದೇ ಜುಲೈ 11ರಂದು ಚಿತ್ರದುರ್ಗದ ಮುರುಘಾಮಠ(Murugha Matha)ದಲ್ಲಿದ್ದ ಮುರುಘಾಶ್ರೀ ಬೆಳ್ಳಿ ಪುತ್ಥಳಿ ಕಳ್ಳತನವಾಗಿತ್ತು. ಬಳಿಕ ಕಾಣೆಯಾಗಿದ್ದ ಬೆಳ್ಳಿ ಪುತ್ಥಳಿ ಜುಲೈ 15 ರಂದು ಮಠದ ಆವರಣದಲ್ಲಿ ಪುನಃ ಪತ್ತೆಯಾಗಿತ್ತು. ಈ ಕುರಿತು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದ ಪೊಲೀಸರು, ಇದೀಗ ನಾಲ್ವರ ಮೇಲೆ ಅನುಮಾನಗೊಂಡು ಪಾಲಿಗ್ರಫಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ: ನಾಲ್ವರು ಶಂಕಿತ ಆರೋಪಿಗಳ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ದತೆ
ಕಳ್ಳತನವಾಗಿದ್ದ ಮುರುಘಾಶ್ರೀ ಪುತ್ಥಳಿ ಪತ್ತೆ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 16, 2024 | 7:53 PM

ಚಿತ್ರದುರ್ಗ, ಜು.16: ಕೋಟೆನಾಡು ಚಿತ್ರದುರ್ಗದ ಮುರುಘಾಮಠ(Murugha Matha)ದಲ್ಲಿ ಬೆಳ್ಳಿ ಪುತ್ಥಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಜು. 11ರಂದು ಈ ಕುರಿತು ಕೇಸ್ ದಾಖಲು ಮಾಡಲಾಗಿತ್ತು. ಬಳಿಕ ಜುಲೈ 15 ರಂದು ಮಠದ ಆವರಣದಲ್ಲಿ ಬೆಳ್ಳಿ ಪುತ್ಥಳಿ ಪತ್ತೆಯಾಗಿತ್ತು. ಹೀಗಿರುವಾಗ ಬೆಳ್ಳಿ ಕದ್ದವರು ಯಾರು, ವಾಪಸ್ ತಂದವರು ಯಾರು? ಎಂಬ ಪ್ರಶ್ನೆ ಮೂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ನಡುವೆ ನಾಲ್ವರು ಶಂಕಿತ ಆರೋಪಿಗಳ ಮೇಲೆ ಪೊಲೀಸರ ಕಣ್ಣು ಬಿದ್ದಿದೆ.

ನಾಲ್ವರ ಪಾಲಿಗ್ರಫಿ ಪರೀಕ್ಷೆಗೆ ಪೊಲೀಸರ ಸಿದ್ಧತೆ

ಇನ್ನು ಕಳ್ಳರಿಗೋಸ್ಕರ ತೀವ್ರ ತಲೆಕೆಡಿಸಿಕೊಂಡಿದ್ದ ಪೊಲೀಸರು, ಇದೀಗ ಮಠದ ನೌಕರರಾದ ಗೋಪಿ, ಬಸನಗೌಡ, ರೆಡ್ಡಿ ಹಾಗೂ ಮಹಾಲಿಂಗ ಎಂಬ ನಾಲ್ವರು ಮೇಲೆ ಶಂಕೆ ವ್ಯಕ್ತಪಡಿಸಿದ ಪೊಲೀಸರು, ಕೋರ್ಟ್ ಅನುಮತಿ ಪಡೆದು ನಾಲ್ವರನ್ನು ಪಾಲಿಗ್ರಫಿ ಪರೀಕ್ಷೆಗೆ ಒಳಪಡಿಸಲು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗ: ಮುರುಘಾಮಠದಲ್ಲಿದ್ದ ಮುರುಘಾ ಶ್ರೀ ಬೆಳ್ಳಿ ಪುತ್ಥಳಿ ಕಳ್ಳತನ

ಈ ನಾಲ್ವರ ಚಲನವಲನ ಬಗ್ಗೆ ಪೊಲೀಸರಿಗೆ ಶಂಕೆ

ಹೌದು, ಮಠದ ಈ ನಾಲ್ವರ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ. ಜೂನ್ 26ರಂದು ಬಸನಗೌಡ ಸಿಸಿಟಿವಿ ಆಫ್ ಮಾಡಿದ್ದ. ನಂತರ ಜುಲೈ 10 ರಂದು ಮಹಾಲಿಂಗ ಎಂಬಾತ ಸಿಸಿಟಿವಿ ಆನ್ ಮಾಡಲು ಯತ್ನಿಸಿದ್ದ. ಹೀಗಾಗಿ ಬಸನಗೌಡ, ಮಹಾಲಿಂಗ, ಗೋಪಿ, ರೆಡ್ಡಿ ಚಲನವಲನ ಬಗ್ಗೆ ಪೊಲೀಸರಿಗೆ ಶಂಕೆ ವ್ಯಕ್ತವಾಗಿದ್ದು, ಪಾಲಿಗ್ರಫಿ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಪಾಲಿಗ್ರಫಿ ಪರೀಕ್ಷೆ ಎಂದರೇನು?

ಈ ಪಾಲಿಗ್ರಫಿ ಪರೀಕ್ಷೆಯನ್ನು ವ್ಯಕ್ತಿಯೋರ್ವ ಸುಳ್ಳನ್ನು ಹೇಳಿದಾಗ ಪತ್ತೆಹಚ್ಚುವ ಸಾಧನವಾಗಿದೆ. ಈ ಉಪಕರಣವನ್ನು ಅನೇಕ ದೇಶಗಳಲ್ಲಿ ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಭಾರತದಲ್ಲಂತೂ ಇದನ್ನು ಪೊಲೀಸ್ ಅಧಿಕಾರಿಗಳು, ಸಿಬಿಐ, ಎಫ್ ಎಸ್ ಎಲ್ ಆರೋಪಿಗಳ ವಿಚಾರಣೆಗೆ ಬಳಸುತ್ತಾರೆ. ಮತ್ತು ಅನೇಕ ಪ್ರಕರಣಗಳನ್ನು ಪರಿಹರಿಸುವಲ್ಲಿ ಇದು ಉತ್ತಮ ಸಾಧನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ