Murugha Mutt Swamiji: ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪೊಲೀಸರ ವಶಕ್ಕೆ; ಆರೋಪಗಳ ಬಗ್ಗೆ ಶ್ರೀಗಳು ಹೇಳಿದ್ದೇನು?
ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಸ್ವಾಮೀಜಿಯವರನ್ನು ವಶಕ್ಕೆ ಪಡೆಯಲಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಶಿವಮೂರ್ತಿ ಸ್ವಾಮೀಜಿಯನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಪೊಲೀಸರು ಚಿತ್ರದುರ್ಗಕ್ಕೆ ಕರೆದೊಯ್ಯುತ್ತಿದ್ದಾರೆ.

ಅಜ್ಞಾತ ಸ್ಥಳಕ್ಕೆ ತೆರಳುತ್ತಿರುವ ಕುರಿತು ಮಾಹಿತಿ ಕಲೆ ಹಾಕಿದ ಪೊಲೀಸರು ಮಹಾರಾಷ್ಟ್ರದಕ್ಕೆ ತೆರಳುತ್ತಿದ್ದ ಸ್ವಾಮೀಜಿಯನ್ನು ಹಾವೇರಿ ಜಿಲ್ಲೆಯ ಬಂಕಾಪುರದ ಹೆದ್ದಾರಿ ಬಳಿ ವಶಕ್ಕೆ ಪಡೆದಿದ್ದರು.
ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಮೂಲಕ ಬಾಲಕಿಯರ ದೂರು ನೀಡಲಾಗಿತ್ತು.
ಮೈಸೂರು ಮಕ್ಕಳರಕ್ಷಣಾ ಘಟಕದ ಅಧಿಕಾರಿಯಿಂದ ದೂರು ನೀಡಲಾಗಿತ್ತು. ಬಾಲಕಿಯರ ಆರೋಪ ಹಿನ್ನೆಲೆಯಲ್ಲಿ ಸ್ವಾಮೀಜಿ ಮೇಲೆ ದೂರು ದಾಖಲಾಗಿತ್ತು.
‘ಯಾವುದೇ ಪಲಾಯನ ವಾದ ಇಲ್ಲ, ಈ ನೆಲದ ಕಾನೂನನ್ನು ಗೌರವಿಸಬೇಕು, ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ಆರೋಪಗಳಿಂದ ಮುಕ್ತನಾಗಿ ಬರುತ್ತೇನೆ, ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಮುರುಘಾ ಮಠದಲ್ಲಿ ಶಿವಮೂರ್ತಿ ಸ್ವಾಮೀಜಿ ’ಹೇಳಿಕೆ ನೀಡಿದ್ದಾರೆ.
‘ಏನೋ ಒಂದು ಅಹಿತಕರ ಸಂದರ್ಭ ಎದುರಾಗಿದೆ, ಭಕ್ತರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಕಷ್ಟದ ಸಂದರ್ಭದಿಂದ ನಾವು ಹೊರಗೆ ಬಂದೇ ಬರುತ್ತೇವೆ’ ಎಂದರು.
Published On - 1:35 pm, Mon, 29 August 22