Murugha Shree: ಮುರುಘಾ ಮಠದ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ವಿಸ್ತರಣೆ
ಮುರುಘಾ ಸ್ವಾಮೀಜಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿಯ (Shivamurthy Murugha Sharana Swamiji) ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಮುರುಘಾ ಸ್ವಾಮೀಜಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಇದೇ ಕೇಸ್ನಲ್ಲಿ ಎ2 ಲೇಡಿ ವಾರ್ಡನ್ ನ್ಯಾಯಾಂಗ ಬಂಧನ ಅವಧಿ ಕೂಡ ವಿಸ್ತರಣೆ ಮಾಡಲಾಗಿದ್ದು ಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಸದ್ಯ ಕೋರ್ಟ್ನಿಂದ ಕರೆದೊಯ್ದು ಪೊಲೀಸರು ಶ್ರೀಗಳನ್ನ ಜೈಲಿಗೆ ಬಿಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಶ್ರೀಗಳನ್ನ ಶಿಫ್ಟ್ ಮಾಡಲಾಗಿದೆ.
ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ (POCSO case) ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:17 pm, Wed, 14 September 22