ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಶ್ರೀಗಳ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಜಿಲ್ಲಾ 2ನೇ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನನ್ನು ಸ್ವೀಕರಿಸಿ ಅರ್ಜಿ ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿದೆ.
ಘಟನೆ ಹಿನ್ನಲೆ
ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪೊಲೀಸರ ವಶಕ್ಕೆ
ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಸ್ವಾಮೀಜಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಶಿವಮೂರ್ತಿ ಸ್ವಾಮೀಜಿಯನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದು ಪೊಲೀಸರು ಚಿತ್ರದುರ್ಗಕ್ಕೆ ಕರೆತಂದಿದ್ದಾರೆ. ಅಜ್ಞಾತ ಸ್ಥಳಕ್ಕೆ ತೆರಳುತ್ತಿರುವ ಕುರಿತು ಮಾಹಿತಿ ಕಲೆ ಹಾಕಿದ ಪೊಲೀಸರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಸ್ವಾಮೀಜಿಯನ್ನು ಹಾವೇರಿ ಜಿಲ್ಲೆಯ ಬಂಕಾಪುರದ ಹೆದ್ದಾರಿ ಬಳಿ ವಶಕ್ಕೆ ಪಡೆದಿದ್ದರು.
ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮೈಸೂರಿನ ಒಡನಾಡಿ ಸಂಸ್ಥೆ ಮೂಲಕ ಬಾಲಕಿಯರ ಪರವಾಗಿ ಮೈಸೂರು ಮಕ್ಕಳರಕ್ಷಣಾ ಘಟಕದ ಅಧಿಕಾರಿಯಿಂದ ದೂರು ನೀಡಲಾಗಿತ್ತು. ಬಾಲಕಿಯರ ಆರೋಪ ಹಿನ್ನೆಲೆಯಲ್ಲಿ ಸ್ವಾಮೀಜಿ ಮೇಲೆ ದೂರು ದಾಖಲಾಗಿತ್ತು.
‘ಯಾವುದೇ ಪಲಾಯನ ವಾದ ಇಲ್ಲ, ಈ ನೆಲದ ಕಾನೂನನ್ನು ಗೌರವಿಸಬೇಕು, ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ, ಎಲ್ಲಾ ಆರೋಪಗಳಿಂದ ಮುಕ್ತನಾಗಿ ಬರುತ್ತೇನೆ, ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಮುರುಘಾ ಮಠದಲ್ಲಿ ಶಿವಮೂರ್ತಿ ಸ್ವಾಮೀಜಿ ’ಹೇಳಿಕೆ ನೀಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:03 pm, Mon, 29 August 22