Ganesha Chaturthi 2023: ಚಿತ್ರದುರ್ಗದ ಹಲವೆಡೆ ಪಿಓಪಿ ಗಣೇಶನ ಮೇಲೆ ದಾಳಿ, 12 ಮೂರ್ತಿಗಳು ಜಪ್ತಿ

ಚಿತ್ರದುರ್ಗ ಜಿಲ್ಲೆಯ ವಿವಿದೆಡೆ ಅಧಿಕಾರಿಗಳು ದಾಳಿ ನಡೆಸಿದ್ದು ಚಿತ್ರದುರ್ಗ ಮತ್ತು ಹೊಸದುರ್ಗ ಸೇರಿ ಒಟ್ಟು 12 ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದಲ್ಲಿ 8, ಹೊಸದುರ್ಗದಲ್ಲಿ 4 ಪಿಓಪಿ ಗಣೇಶ ಮೂರ್ತಿ ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ರೇಣುಕಾ, ಪರಿಸರ ಇಲಾಖೆ ಅಧಿಕಾರಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಸಾಗಣೆ ಹಾಗೂ ಮಾರಾಟ ಮಾಡುತ್ತಿದ್ದ ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.

Ganesha Chaturthi 2023: ಚಿತ್ರದುರ್ಗದ ಹಲವೆಡೆ ಪಿಓಪಿ ಗಣೇಶನ ಮೇಲೆ ದಾಳಿ, 12 ಮೂರ್ತಿಗಳು ಜಪ್ತಿ
ಪಿಓಪಿ ಗಣೇಶ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಆಯೇಷಾ ಬಾನು

Updated on: Sep 14, 2023 | 9:34 AM

ಚಿತ್ರದುರ್ಗ, ಸೆ.14: ಗಣೇಶ ಹಬ್ಬಕ್ಕೆ(Ganesha Chaturthi)ಕೆಲವೇ ದಿನಗಳು ಬಾಕಿ ಉಳಿದಿವೆ. ದೇಶದ ಅನೇಕ ಕಡೆ ಗಣೇಶ ಮೂರ್ತಿ ತಯಾರಕರು ದೊಡ್ಡ ಪ್ರಮಾಣದಲ್ಲಿ ಗಣೇಶ ಮೂರ್ತಿಗಳನ್ನು ಸಿದ್ದಗೊಳಿಸುತ್ತಿದ್ದಾರೆ. ಇನ್ನು ಮತ್ತೊಂದೆಡೆ ನಿಷೇಧದ ನಡುವೆಯೂ ಅನೇಕ ಕಡೆಗಳಲ್ಲಿ ಪಿಓಪಿ ಗಣೇಶ ಮೂರ್ತಿಗಳನ್ನು(POP Ganesha) ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದವರಿಗೆ ಚಿತ್ರದುರ್ಗ, ಹೊಸದುರ್ಗದಲ್ಲಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ವಿವಿದೆಡೆ ಅಧಿಕಾರಿಗಳು ದಾಳಿ ನಡೆಸಿದ್ದು ಚಿತ್ರದುರ್ಗ ಮತ್ತು ಹೊಸದುರ್ಗ ಸೇರಿ ಒಟ್ಟು 12 ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದಲ್ಲಿ 8, ಹೊಸದುರ್ಗದಲ್ಲಿ 4 ಪಿಓಪಿ ಗಣೇಶ ಮೂರ್ತಿ ವಶಕ್ಕೆ ಪಡೆಯಲಾಗಿದೆ.

ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ರೇಣುಕಾ, ಪರಿಸರ ಇಲಾಖೆ ಅಧಿಕಾರಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಸಾಗಣೆ ಹಾಗೂ ಮಾರಾಟ ಮಾಡುತ್ತಿದ್ದ ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ಪಿಓಪಿ ಗಣೇಶ ವಿಗ್ರಹ ಮಾರಾಟಕ್ಕೆ ಅಧಿಕಾರಿಗಳು ಬ್ರೇಕ್ ಹಾಕಿದ್ದು ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಪರಿಸರಕ್ಕೆ ಮಾರಕವಾದ ಪಿಓಪಿ ಗಣೇಶ ಬಳಸದಂತೆ ಎಚ್ವರಿಕೆ ನೀಡಿದ್ದಾರೆ.

officials raid and seized PoP Ganesh idols in chitradurga and hosadurga

ಪಿಓಪಿ ಗಣೇಶ

ಕಲಬುರಗಿಯಲ್ಲೂ ಪಿಓಪಿ ಗಣೇಶ ಸೀಜ್

ಕಲಬುರಗಿ ನಗರದಲ್ಲಿ ಗಣೇಶ ಮೂರ್ತಿ ತಯಾರಕರ ಅಡ್ಡೆಗಳಿಗೆ ಪರಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಮಹಾನಗರ ಪಾಲಿಕೆಯ ಅಧಿಕಾರಿಗಳು ದಿಡೀರನೆ ಎಂಟ್ರಿ ಕೊಟ್ಟಿದ್ದರು. ಅಧಿಕಾರಿಗಳ ಎಂಟ್ರಿ ಗಣೇಶ ಮೂರ್ತಿ ತಯಾರಕರಿಗೆ ಶಾಕ್ ನೀಡಿತ್ತು. ಕಲಬುರಗಿ ನಗರದ ಹೀರಾಪುರ ಕ್ರಾಸ್, ಬಿದ್ದಾಪುರ ಕಾಲೋನಿ ಸೇರಿದಂತೆ ಹತ್ತಕ್ಕೂ ಅಧಿಕ ಕಡೆ, ಕಳೆದ ಅನೇಕ ತಿಂಗಳಿಂದ ರಾಜಸ್ಥಾನದಿಂದ ಬಂದಿರೋ ಅನೇಕ ಕುಟುಂಬಗಳು ಗಣೇಶ ಮೂರ್ತಿಗಳನ್ನು ತಯಾರು ಮಾಡುತ್ತಿವೆ. ಆದರೆ ಪಿಓಪಿಯಿಂದ ಮಾಡಿರೋ ಗಣೇಶ್ ಮೂರ್ತಿಗಳನ್ನು ತಯಾರು ಮಾಡುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. 2016 ರಲ್ಲಿಯೇ ಸರ್ಕಾರ ಪಿಓಪಿ ಗಣೇಶ ಮೂರ್ತಿಗಳನ್ನು ತಯಾರು ಮಾಡಬಾರದು ಅಂತ ಆದೇಶ ಮಾಡಿದೆ. ಆದರೂ ಕೂಡಾ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ಪಿಓಪಿ ಗಣೇಶ ಮೂರ್ತಿಗಳನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಸ್ಥಳಗಳಿಗೆ ಎಂಟ್ರಿಕೊಟ್ಟಿದ್ದ ಅಧಿಕಾರಿಗಳು ಗಣೇಶ ಮೂರ್ತಿಗಳನ್ನು ಜಪ್ತಿ ಮಾಡಿದ್ರು.

ಇದನ್ನೂ ಓದಿ: Mysuru Dasara 2023: ರಿಲ್ಯಾಕ್ಸ್ ಮೂಡ್‌ನಲ್ಲಿ ದಸರಾ ಗಜಪಡೆ, ಭೀಮನಿಗೆ ಸ್ನಾನ ಮಾಡಿಸಿದ ಮುದ್ದು ಕಂದ

ಪಾಲಿಕೆಯ ಅಧಿಕಾರಿಗಳು, ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ದಾಳಿ ಮಾಡಿ, ಐನೂರಕ್ಕೂ ಹೆಚ್ಚು ಗಣೇಶನ ಮೂರ್ತಿಗಳನ್ನು ಜಪ್ತಿ ಮಾಡಿದ್ದಾರೆ. ಆದ್ರೆ ಜಪ್ತಿ ಮಾಡಲು ಮುಂದಾಗಿದ್ದ ಅಧಿಕಾರಿಗಳ ವಿರುದ್ದ ಗಣೇಶ ಮೂರ್ತಿ ತಯಾರಕರು ಆಕ್ರೋಶ ವ್ಯಕ್ತಪಡಿಸಿದ್ರು. ಸೀಜ್ ಮಾಡಲು ಅಡ್ಡಿ ಕೂಡಾ ವ್ಯಕ್ತಪಡಿಸಿದ್ರು. ತಾವು ಕಳೆದ ಅನೇಕ ವರ್ಷಗಳಿಂದ ಮೂರ್ತಿ ತಯಾರು ಮಾಡುತ್ತಿದ್ದೇವೆ. ತಾವು ಪಿಓಪಿ ಗಣೇಶ ಮೂರ್ತಿಗಳನ್ನು ತಯಾರು ಮಾಡುತ್ತಿದ್ದದ್ದು ಎಲ್ಲರಿಗೂ ಗೊತ್ತಿದ್ರು ಕೂಡಾ ಆವಾಗ ಯಾವುದೇ ಅಧಿಕಾರಿಗಳು ಬಂದು ತಮಗೆ ಮಾಹಿತಿ ನೀಡಿಲ್ಲಾ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೂರ್ತಿಗಳನ್ನು ತಯಾರು ಮಾಡಿದ್ದೇವೆ. ಇದೀಗ ಜಪ್ತಿ ಮಾಡೋದಾದ್ರೆ ಮೂರ್ತಿ ತಯಾರಿಕೆಗೆ ಖರ್ಚಾದ ಹಣವನ್ನು ನೀಡಲಿ ಅಂತ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?