ಚಿತ್ರದುರ್ಗ: ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಆರೋಪಿಯ ವಿರುದ್ಧ ಕರ್ನಾಟಕ ಪ್ರಾಣಿ ಬಲಿ ತಡೆ ಕಾಯ್ದೆಯ ಸೆಕ್ಷನ್ 3,4,5 ಮತ್ತು 6, ಐಪಿಸಿ ಸೆಕ್ಷನ್ 34 ಮತ್ತು 429 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಚಿತ್ರದುರ್ಗ: ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ
Follow us
ಸಾಧು ಶ್ರೀನಾಥ್​
|

Updated on: Apr 28, 2023 | 11:43 AM

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕರ ಕಣ್ಣಿಗೆ ಕಾಣುವಂತೆ (Animal Cruelty), ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಭಯ ಭೀತಿಗೊಳಗಾದ ಮೂರು ಮೇಕೆಗಳ ಮುಂದೆ ನಿಂತು ಆರೋಪಿ ಕತ್ತಿಯಂತಹ ಆಯುಧದಿಂದ ಒಂದರ ಹಿಂದೆ ಒಂದರಂತೆ ಮೂರೂ ಮೇಕೆಗಳ ತಲೆ ಕಡಿದಿರುವ (Slaughter) ಘಟನೆಯನ್ನು ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಪೇಟಾ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸುಪ್ರೀಂ ಕೋರ್ಟ್ (Supreme Court) ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಪರವಾನಗಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರ ಪ್ರಾಣಿಗಳನ್ನು ವಧೆ ಮಾಡಬಹುದು ಎಂಬುದನ್ನು PETA ಗಮನಕ್ಕೆ ತಂದಿದೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ಸ್ಲಾಟರ್ ಹೌಸ್) ನಿಯಮಗಳು (Prevention of Cruelty to Animals (PCA) Act), 2001 ಮತ್ತು ಆಹಾರ ಸುರಕ್ಷತಾ ಮಾನದಂಡಗಳು (ಆಹಾರ ವ್ಯಾಪಾರಗಳ ಪರವಾನಗಿ ಮತ್ತು ನೋಂದಣಿ) ನಿಯಮಗಳು, ನಿರ್ದಿಷ್ಟವಾಗಿ ಸೂಕ್ತ ಸಾಧನಗಳನ್ನು ಹೊಂದಿದ ಪರವಾನಗಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರ ಆಹಾರಕ್ಕಾಗಿ ಪ್ರಾಣಿಗಳನ್ನು ವಧೆ ಮಾಡಲು ಅನುಮತಿ ನೀಡುತ್ತದೆ ಪ್ರಕಟಣೆಯಲ್ಲಿ ಹೇಳಿದೆ.

Also read:

ಯುವತಿಯೊಂದಿಗೆ ಶಾಸಕ ಚಾಟ್​ ಮಾಡಿದ್ದೇ ಮಾಡಿದ್ದು, ಆ ಮೇಲೆ ಗೊತ್ತಾಯ್ತು ಆತ ಯುವಕ ಅಂತಾ! ಆದರೆ ಅಷ್ಟೊತ್ತಿಗೆ..

ಆರೋಪಿಯ ವಿರುದ್ಧ ಕರ್ನಾಟಕ ಪ್ರಾಣಿ ಬಲಿ ತಡೆ ಕಾಯ್ದೆಯ ಸೆಕ್ಷನ್ 3,4,5 ಮತ್ತು 6, ಐಪಿಸಿ ಸೆಕ್ಷನ್ 34 ಮತ್ತು 429 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್