ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕರ ಕಣ್ಣಿಗೆ ಕಾಣುವಂತೆ (Animal Cruelty), ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಭಯ ಭೀತಿಗೊಳಗಾದ ಮೂರು ಮೇಕೆಗಳ ಮುಂದೆ ನಿಂತು ಆರೋಪಿ ಕತ್ತಿಯಂತಹ ಆಯುಧದಿಂದ ಒಂದರ ಹಿಂದೆ ಒಂದರಂತೆ ಮೂರೂ ಮೇಕೆಗಳ ತಲೆ ಕಡಿದಿರುವ (Slaughter) ಘಟನೆಯನ್ನು ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಪೇಟಾ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸುಪ್ರೀಂ ಕೋರ್ಟ್ (Supreme Court) ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಪರವಾನಗಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರ ಪ್ರಾಣಿಗಳನ್ನು ವಧೆ ಮಾಡಬಹುದು ಎಂಬುದನ್ನು PETA ಗಮನಕ್ಕೆ ತಂದಿದೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ಸ್ಲಾಟರ್ ಹೌಸ್) ನಿಯಮಗಳು (Prevention of Cruelty to Animals (PCA) Act), 2001 ಮತ್ತು ಆಹಾರ ಸುರಕ್ಷತಾ ಮಾನದಂಡಗಳು (ಆಹಾರ ವ್ಯಾಪಾರಗಳ ಪರವಾನಗಿ ಮತ್ತು ನೋಂದಣಿ) ನಿಯಮಗಳು, ನಿರ್ದಿಷ್ಟವಾಗಿ ಸೂಕ್ತ ಸಾಧನಗಳನ್ನು ಹೊಂದಿದ ಪರವಾನಗಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರ ಆಹಾರಕ್ಕಾಗಿ ಪ್ರಾಣಿಗಳನ್ನು ವಧೆ ಮಾಡಲು ಅನುಮತಿ ನೀಡುತ್ತದೆ ಪ್ರಕಟಣೆಯಲ್ಲಿ ಹೇಳಿದೆ.
Also read:
ಆರೋಪಿಯ ವಿರುದ್ಧ ಕರ್ನಾಟಕ ಪ್ರಾಣಿ ಬಲಿ ತಡೆ ಕಾಯ್ದೆಯ ಸೆಕ್ಷನ್ 3,4,5 ಮತ್ತು 6, ಐಪಿಸಿ ಸೆಕ್ಷನ್ 34 ಮತ್ತು 429 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ