ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ

ಅದು ರಾಜ್ಯದಲ್ಲೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲೊಂದು. ಆದ್ರೆ, ಈ ವರ್ಷ ಬರಗಾಲದಿಂದಾಗಿ ಈರುಳ್ಳಿ ಬೆಳೆ ಬಿತ್ತನೆ ಕುಂಠಿತ ಆಗಿದೆ. ಇದೇ ವೇಳೆ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ರೈತರು ಕೈಕೈ ಹಿಚುಕಿಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. 

ಬರಕ್ಕೆ ಈರುಳ್ಳಿ ಬೆಳೆ ಕುಂಠಿತ; ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆ, ರೈತನ ಪಾಲಿಗೂ ಕಣ್ಣೀರುಳ್ಳಿ
ಬೆಲೆ ಏರಿಕೆ ಕಂಡ ಸಮಯದಲ್ಲಿ ಕುಂಠಿತವಾದ ಈರುಳ್ಳಿ ಬೆಲೆ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 27, 2023 | 9:05 PM

ಚಿತ್ರದುರ್ಗ, ಅ.27: ಭೀಕರ ಬರಗಾಲದ ಪರಿಣಾಮ ಈರುಳ್ಳಿ ಬೆಳೆ(Onion Crop)  ಹಾಳಾಗಿದ್ದರೆ, ಇನ್ನೊಂದೆಡೆ ಬೆಲೆ ಗಗನಕ್ಕೇರಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಹೌದು, ಕೋಟೆನಾಡು ಚಿತ್ರದುರ್ಗ(Chitradurga) ಜಿಲ್ಲೆಯಲ್ಲಿ ಸುಮಾರು 40ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗುತ್ತದೆ. ಬರಗಾಲದ ಪರಿಣಾಮ ಈ ವರ್ಷ 18.220 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಆಗಿದೆ. ಆದ್ರೆ, ಬರದ ಪರಿಣಾಮ ಈರುಳ್ಳಿ ವಿಫಲವಾಗಿದೆ. ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಟ್ಟರೂ ಸಹ ಲೋಡ್ ಶೆಡ್ಡಿಂಗ್​ನಿಂದಾಗಿ ಈರುಳ್ಳಿ ಬೆಳೆ ಬಹುತೇಕ ವಿಫಲವಾಗಿದೆ.

ಗಗನಕ್ಕೇರಿದ ಈರುಳ್ಳಿ ಬೆಲೆ

ಇದೇ ಸಂದರ್ಭದಲ್ಲಿ ಕೆ.ಜಿಗೆ 20 ರಿಂದ 30 ರೂಪಾಯಿಯಿದ್ದ ಈರುಳ್ಳಿ ಬೆಲೆ ಈಗ 50 ರಿಂದ 60ರೂಪಾಯಿಗೆ ಏರಿಕೆ ಆಗಿದೆ. ಹೀಗಾಗಿ, ಒಂದು ಕಡೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಮತ್ತೊಂದು ಕಡೆ ಬೆಳೆ ಹಾನಿಯಾದ ವೇಳೆಯೇ ಬೆಲೆ ಏರಿಕೆ ಆಗಿದ್ದು, ರೈತರು ಕೈಕೈ ಹಿಚುಕಿಕೊಳ್ಳುವಂತಾಗಿದೆ. ಇನ್ನು ಈರುಳ್ಳಿ ಬಂಪರ್ ಬೆಳೆ ತೆಗೆದು ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ ರೈತರಿಗೆ ಶಾಕ್ ಆಗಿದೆ. ಈರುಳ್ಳಿ ಬೆಳೆಯನ್ನೇ ಪ್ರಧಾನವಾಗಿ ಬೆಳೆಯುವ ಚಿತ್ರದುರ್ಗ ಜಿಲ್ಲೆಯ ರೈತರು ಧರ್ಮ ಸಂಕಟಕ್ಕೆ ಸಿಲುಕುವಂತಾಗಿದೆ.

ಇದನ್ನೂ ಓದಿ:ಮಂಗಗಳ ದಾಳಿಗೆ ಈರುಳ್ಳಿ ಬೆಳೆ ನಾಶ: ಬರಗಾಲದಲ್ಲಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಈಗಿನ ಈರುಳ್ಳಿ ಬೆಲೆಯ ಆಧಾರದ ಮೇಲೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರಕ್ಕಾಗಿ ಆಗ್ರಹ

ಹೀಗಾಗಿ, ಈಗಿನ ಈರುಳ್ಳಿ ಬೆಲೆಯ ಆಧಾರದ ಮೇಲೆ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕೆಂಬುದು ರೈತ ಮುಖಂಡರ ಆಗ್ರಹಿಸಿದ್ದು, vo-3: ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಈರುಳ್ಳಿ ಬೆಳೆಗಾರರು ಕಂಗಾಲಾಗಿದ್ದಾರೆ. ಬೆಳೆ ಹಾನಿಯಾದ ಸಂದರ್ಭದಲ್ಲಿ ಈರುಳ್ಳಿಗೆ ಭಾರೀ ಬೇಡಿಕೆ ಬಂದಿರುವುದು ರೈತರನ್ನು ಮತ್ತಷ್ಟು ಕುಗ್ಗುವಂತಾಗಿಸಿದೆ. ಹೀಗಾಗಿ, ಸರ್ಕಾರ ಈರುಳ್ಳಿ ಬೆಳೆಗಾರರತ್ತ ಗಮನಹರಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂಬುದು ರೈತರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ