ಗಣೇಶೋತ್ಸವ ಆಚರಣೆ ನಮ್ಮ ಸಂಸ್ಕೃತಿ ಅಲ್ಲ-ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ

Edited By: ಕಿರಣ್ ಹನುಮಂತ್​ ಮಾದಾರ್

Updated on: Nov 03, 2023 | 4:14 PM

ಗುರುವಾರ((ನ.2) ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಆರ್ಶೀವಚನ ನೀಡಿದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಅವರು ‘ಗ್ರಾಮದಲ್ಲಿ ಶುಭ ಕಾರ್ಯ ವೇಳೆ ಗಣೇಶ ಪೂಜೆ, ಪ್ರಾರ್ಥನೆಯಿಂದ ಆರಂಭಿಸುತ್ತೀರಿ. ನಮ್ಮ ಗುರುಗಳು ಪ್ರಾರ್ಥನೆ ಅಂದರೆ ವಚನ ಎಂಬ ಪದ್ಧತಿ ಜಾರಿಗೆ ತಂದರು ಎಂದರು.

ಚಿತ್ರದುರ್ಗ, ನ.03: ಗಣೇಶೋತ್ಸವ ಆಚರಣೆ ನಮ್ಮ ಸಂಸ್ಕೃತಿ ಅಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ(Panditharadhya Shivacharya) ಶ್ರೀ ಅವರು ಹೇಳಿದ್ದಾರೆ. ಗುರುವಾರ((ನ.2) ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಆರ್ಶೀವಚನ ನೀಡಿದರು. ಈ ವೇಳೆ ಮಾತನಾಡಿದ ಅವರು ‘ಗ್ರಾಮದಲ್ಲಿ ಶುಭ ಕಾರ್ಯ ವೇಳೆ ಗಣೇಶ ಪೂಜೆ, ಪ್ರಾರ್ಥನೆಯಿಂದ ಆರಂಭಿಸುತ್ತೀರಿ. ನಮ್ಮ ಗುರುಗಳು ಪ್ರಾರ್ಥನೆ ಅಂದರೆ ವಚನ ಎಂಬ ಪದ್ಧತಿ ಜಾರಿಗೆ ತಂದರು ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 03, 2023 04:12 PM
Follow Us
ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More