AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಸನ ಕೆರೆಗೆ ಸೇರುತ್ತಿದೆ ಕೊಳಚೆ ನೀರು; ಜಲಮೂಲಗಳು ಕಲುಷಿತವಾಗದಂತೆ ತಡೆಯಲು ಜನರಿಂದ ಆಗ್ರಹ

ಈಗಾಗಲೇ ಸುಮಾರು ವರ್ಷಗಳಿಂದ ನಗರದ ಕೊಳಚೆ ನೀರನ್ನು ಮಲ್ಲಾಪುರ ಗ್ರಾಮ ಬಳಿಯ ಕೆರೆಗೆ ಬಿಟ್ಟು ಮಲೀನಗೊಳಿಸಲಾಗಿದೆ. ಇದೀಗ ಅರಸನ ಕೆರೆಯನ್ನೂ ಕಲುಷಿತಗೊಳಿಸುವ ಕೆಲಸ ನಡೆಯುತ್ತಿದೆ.

ಅರಸನ ಕೆರೆಗೆ ಸೇರುತ್ತಿದೆ ಕೊಳಚೆ ನೀರು; ಜಲಮೂಲಗಳು ಕಲುಷಿತವಾಗದಂತೆ ತಡೆಯಲು ಜನರಿಂದ ಆಗ್ರಹ
ಅರಸನ ಕೆರೆ
Follow us
TV9 Web
| Updated By: preethi shettigar

Updated on: Aug 30, 2021 | 10:39 AM

ಚಿತ್ರದುರ್ಗ: ಜಲ ಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ‌ ಹೊಣೆ ಆಗಿದೆ. ಆದರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಜಲಮೂಲಗಳು ಕಸದ ತೊಟ್ಟಿಯಂತಾಗುತ್ತಿವೆ. ಆದರಲ್ಲೂ ಜಿಲ್ಲೆಯ ಅತ್ಯಂತ ಸುಂದರ ಕೆರೆ ಅರಸನ ಕೆರೆ ಕಲುಷಿತಗೊಳ್ಳುತ್ತಿದೆ. ಇಷ್ಟಾದರೂ ಯಾವುದೇ ಅಧಿಕಾರಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ಇದು ಸಹಜವಾಗಿಯೇ ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮುರುಘಾಮಠದ ಮುಂಭಾಗದಲ್ಲಿರುವ ಸುಂದರ ಕೆರೆಯೇ ಈ ಅರಸನ ಕೆರೆ. ಹೆಸರಿಗೆ ತಕ್ಕಂತೆ ಅದ್ಭುತ ಪರಿಸರದಲ್ಲಿದೆ. ಆದರೆ ಈ ಕೆರೆಗೆ ಸದ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಯಲಕ್ಷ್ಮಿ ಲೇಔಟ್, ನಗರ ಬಳಿಯ ಗಾರೇಹಟ್ಟಿ ಸೇರಿದಂತೆ ವಿವಿಧೆಡೆಯಿಂದ ಕೊಳಚೆ ನೀರು ಮತ್ತು ತ್ಯಾಜ್ಯ ಬಿಡುಗಡೆಯಾಗುತ್ತಿದೆ.

ಈಗಾಗಲೇ ಸುಮಾರು ವರ್ಷಗಳಿಂದ ನಗರದ ಕೊಳಚೆ ನೀರನ್ನು ಮಲ್ಲಾಪುರ ಗ್ರಾಮ ಬಳಿಯ ಕೆರೆಗೆ ಬಿಟ್ಟು ಮಲೀನಗೊಳಿಸಲಾಗಿದೆ. ಇದೀಗ ಅರಸನ ಕೆರೆಯನ್ನೂ ಕಲುಷಿತಗೊಳಿಸುವ ಕೆಲಸ ನಡೆಯುತ್ತಿದೆ. ಈಗಾಗಲೇ ಅನೇಕ ಸಲ ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಲಾಗುತ್ತಿದೆ. ಪರಿಣಾಮ ಅರಸನ ಕೆರೆ ಗಬ್ಬೆದ್ದು ನಾರುತ್ತಿದ್ದು, ರೋಗ ರುಜಿನ ಹರಡುವ ಕೇಂದ್ರ ಆಗುತ್ತಿದೆ ಎಂದು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ್ಯ ಬಿ.ಟಿ.ಜಗದೀಶ ಆರೋಪಿಸಿದ್ದಾರೆ.

ಅರಸನ ಕೆರೆಯಲ್ಲಿನ ಜಲಚರಗಳು, ಮೀನುಗಳು ಕಲುಷಿತ‌ ನೀರಿನಿಂದ ಸಾವಿಗೀಡಾಗುತ್ತಿವೆ. ಅಲ್ಲದೆ ನಾನಾ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಸೃಷ್ಟಿಯಾಗಿದೆ. ಕೊವಿಡ್ ಸಂದರ್ಭದಲ್ಲಿ ಒಳಚರಂಡಿ ನೀರು ಕೆರೆಗೆ ಬಿಟ್ಟು ಉತ್ತಮ ಕೆರೆಯನ್ನು ಕಲುಷಿತಗೊಳಿಸುತ್ತಿರುವುದು ಸರಿಯಲ್ಲ. ಅರಸನ ಕೆರೆ ನಮ್ಮ ವ್ಯಾಪ್ತಿಗೆ ಸೇರಿದೆ. ಆದರೆ, ಕೊಳಚೆ ನೀರು ಬಿಡುತ್ತಿರುವ ಜಯಲಕ್ಷ್ಮಿ ಬಡಾವಣೆ ಚೇಳಗಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿದೆ. ಹೀಗಾಗಿ, ಮಠದ ಕುರುಬರಹಟ್ಟಿ ಗ್ರಾಮ ಪಂಚಾಯತಿ ಮೂಲಕ ಸಂಬಂಧಿತ ಅಧಿಕಾರಿಗಳಿಗೆ ಪತ್ರ ಬರೆದು ಕ್ರಮಕ್ಕೆ ಸೂಚಿಸಲಾಗುವುದು ಎಂದು ಗ್ರಾಮ ಪಂಚಾಯತಿ ಸದಸ್ಯ ಮಲ್ಲಿಕಾರ್ಜುನ ಹೇಳಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸುಂದರ ಕೆರೆಗಳು ಕಲುಷಿತಗೊಳ್ಳುತ್ತಿವೆ. ಹೀಗಾಗಿ, ಜಿಲ್ಲಾಡಳಿತ ಮತ್ತು ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಕೆರೆಗಳನ್ನು ಹಾಳುಗೆಡವಿ ರೋಗ ಹರಡುವ ಕೇಂದ್ರಗಳನ್ನಾಗಿಸುತ್ತಿರುವ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಕೆರೆಗಳನ್ನು ಸಂರಕ್ಷಿಸಬೇಕಿದೆ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.

ವರದಿ: ಬಸವರಾಜ ಮುದನೂರ್

ಇದನ್ನೂ ಓದಿ: ಬಾಗಲಕೋಟೆ: ಹಿಂದಿ ಸಿನಿಮಾ ಗುರು ಚಿತ್ರೀಕರಣ ನಡೆದಿದ್ದ ಐತಿಹಾಸಿಕ ಕೆರೆಗೆ ಸಿಗಲಿದೆ ಮತ್ತಷ್ಟು ಮೆರುಗು

ಕುಡಿಯಲು ಕಲುಷಿತ ಕಾಳಿ ನದಿ ನೀರು; ಬೃಹತ್ ವೆಚ್ಚದ ಯೋಜನೆಗೆ ಸಾರ್ವಜನಿಕರ ವಿರೋಧ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ