Murugha Shree Arrest: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 02, 2022 | 6:35 AM

ಪೋಕ್ಸೋ ಕಾಯ್ದೆಯಡಿ ಮುರುಘಾಮಠದಲ್ಲಿ ವಾಸ್ತವ್ಯ ಹೂಡಿದ್ದ A-1 ಮುರುಘಾ ಶ್ರೀ ಅವರನ್ನು ಗುರುವಾರ ರಾತ್ರಿ ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

Murugha Shree Arrest: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ
ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್​
Follow us on

ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ (POCSO case) ಚಿತ್ರದುರ್ಗ ಪೊಲೀಸರು ಇದೀಗತಾನೆ (ಗುರುವಾರ ರಾತ್ರಿ) ಬಂಧಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌,  ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಯತ್ತ ಕರೆದೊಯ್ಯಲಿದ್ದಾರೆ. ಅದಕ್ಕೂ ಮುನ್ನ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಆದರೆ ಮತ್ತೊಂದು ಮಾಹಿತಿ ಪ್ರಕಾರ ಶ್ರೀಗಳನ್ನು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿರುವ ಮಾಹಿತಿಯಿದೆ.

ಚಿತ್ರದುರ್ಗದ ಮುರುಘಾ ಮಠದ (Sri Murugha Matha) ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ (POCSO case) ಪ್ರಕರಣ ದಾಖಲಾಗಿ, ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್ ಜಾರಿ ಮಾಡಿದ್ದರ ಬೆನ್ನಿಗೆ ಮುರುಘಾ ಮಠದ ಲೈಂಗಿಕ ಪ್ರಕರಣಗಳ ಹಿನ್ನೆಲೆಯಲ್ಲಿ ಮುರುಘಾ ಶ್ರೀಯನ್ನು (Murugha Shree) ಗುರುವಾರ ರಾತ್ರಿ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಪೋಕ್ಸೋ ಕೇಸ್‌ನಲ್ಲಿ ಪೊಲೀಸರಿಂದ ಮುರುಘಾಶ್ರೀಗಳ ಅರೆಸ್ಟ್‌ ವಿಚಾರಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಪರಶು ಟಿವಿ9 ಜೊತೆ ಮಾತನಾಡಿದ್ದು, ಮುರುಘಾಶ್ರೀ ಕಾವಿಯೊಳಗಿದ್ದ ಬೆಕ್ಕು. ಸಾಕಷ್ಟು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದಿದ್ದಾರೆ.

ಏನಿದು ಪ್ರಕರಣದ ವೃತ್ತಾಂತ:

ಆಗಸ್ಟ್‌ 26 ಶುಕ್ರವಾರ ಮುರುಘಾಶ್ರೀಗಳ ವಿರುದ್ಧ ಮೈಸೂರಿನ ನಜರ್‌ಬಾದ್‌ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆ ನೆರವು ಪಡೆದು ಕೇಸ್ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ ಆಗಿತ್ತು.

ಮುರುಘಾಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್ ಸಹ ದಾಖಲಾಗಿದೆ:

ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಒಂದು ಕೇಸ್ ಜೊತೆಗೆ, ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಮತ್ತೊಂದು ಕೇಸ್ ದಾಖಲಾಗಿದೆ. ಓರ್ವ ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವರು. ಹೀಗಾಗಿ ಮುರುಘಾಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್ ಸಹ ದಾಖಲಾಗಿದೆ.

ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ.

A-3 ಮಠದ ಉತ್ತರಾಧಿಕಾರಿ (ಬಸವಾದಿತ್ಯ) , A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ

ಮುರುಘಾಮಠದಲ್ಲೇ ವಾಸ್ತವ್ಯ ಹೂಡಿದ್ದ A-1 ಮುರುಘಾ ಶ್ರೀ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ.

A- 2 ಲೇಡಿ ವಾರ್ಡನ್ ಪೊಲೀಸರ ವಶದಲ್ಲಿದ್ದು,  ಪ್ರಸ್ತುತ ಸಾಂತ್ವನ ಕೇಂದ್ರದಲ್ಲಿದ್ದಾರೆ.

Published On - 10:10 pm, Thu, 1 September 22