Chitradurga News: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣು

ಸಿಬ್ಬಂದಿಯು ಕಾರಾಗೃಹದಲ್ಲಿ ವಾಕಿಂಗ್ ಮಾಡಲು ಅವಕಾಶ ಇಲ್ಲ ಎಂದು ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತಿಳಿಸಿದರು.

Chitradurga News: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣು
ಚಿತ್ರದುರ್ಗದ ಡಾ ಶಿವಮೂರ್ತಿ ಮುರುಘಾ ಶರಣರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 06, 2022 | 11:33 AM

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶರಣರು (Shivamurthy Murugha Sharanaru) ಪ್ರಸ್ತುತ ಜೈಲಿನಲ್ಲಿದ್ದಾರೆ. ಈ ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ (ಸೆ 6) ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಯುತ್ತಿದೆ. ಪ್ರಕರಣದ 3ನೇ ಆರೋಪಿಯಾಗಿರುವ ಮಠದ ಉತ್ತರಾಧಿಕಾರಿ ಮತ್ತು 4ನೇ ಆರೋಪಿ ಪರಮಶಿವಯ್ಯ ಈವರೆಗೆ ಪೊಲೀಸರಿಗೆ ಸಿಕ್ಕಿಲ್ಲ. ಅವರ ಬಂಧನಕ್ಕಾಗಿ ಹುಡುಕಾಟ ಮುಂದುವರಿದಿದೆ.

ಲೇಡಿ ವಾರ್ಡನ್ ಕಸ್ಟಡಿ ಕೋರಿಕೆ

ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿಯನ್ನು ವಿಚಾರಣೆಗಾಗಿ ತಮ್ಮ 7 ದಿನ ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಕೇಳಿದ್ದಾರೆ. ಸದ್ಯ ಈಕೆ ಶಿವಮೊಗ್ಗ ಕಾರಾಗೃಹದಲ್ಲಿ ನ್ಯಾಯಾಂಗ‌ ಬಂಧನದಲ್ಲಿದ್ದಾರೆ. ಇಂದು ಈ ಸಂಬಂಧ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಿಂದ ಪೊಲೀಸರಿಗೆ ಸೂಚನೆ ಸಿಗುವ ಸಾಧ್ಯತೆಯಿದೆ. ಡಿವೈಎಸ್​ ಅನಿಲ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಕಾರಾಗೃಹದಲ್ಲಿ ವಾಕಿಂಗ್​ಗೆ ಅವಕಾಶ ಕೋರಿದ ಸ್ವಾಮೀಜಿ

ಫೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯವು ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿ ಮುರುಘಾಶ್ರೀ ಇಂದು ಬೆಳಿಗ್ಗೆ 6ಕ್ಕೆ ಎದ್ದು ಕುಳಿತರು. ಪ್ರತಿದಿನ ಬೆಳಗ್ಗೆ 6ಕ್ಕೆ ವಾಕಿಂಗ್ ಮಾಡುತ್ತಿದ್ದೆ. ಅದೇ ರೂಢಿಯ ಮೇಲೆ ಎದ್ದಿದ್ದೇನೆ ಎಂದು ಕಾರಾಗೃಹ ಸಿಬ್ಬಂದಿಗೆ ತಿಳಿಸಿದರು. ಈ ವೇಳೆ ಸಿಬ್ಬಂದಿಯು ಕಾರಾಗೃಹದಲ್ಲಿ ವಾಕಿಂಗ್ ಮಾಡಲು ಅವಕಾಶ ಇಲ್ಲ ಎಂದು ತಿಳಿಸಿದರು. ನಿನ್ನೆ ಮಧ್ಯಾಹ್ನ 12 ಗಂಟೆಯಿಂದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಜೈಲಿನಲ್ಲಿದ್ದಾರೆ.

Published On - 11:31 am, Tue, 6 September 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್