ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 2ನೇ ಆರೋಪಿ ಮಹಿಳಾ ವಾರ್ಡನ್​ ​ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದಡಿ ಮುರುಘಾ ಮಠದ ಶ್ರೀಗಳು ​ಜೈಲುಪಾಲಾಗಿದ್ದು, ಪ್ರಕರಣದ 2ನೇ ಆರೋಪಿ ಮಹಿಳಾ ವಾರ್ಡನ್​ಳನ್ನು​ ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 2ನೇ ಆರೋಪಿ ಮಹಿಳಾ ವಾರ್ಡನ್​ ​ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಚಿತ್ರದುರ್ಗದ ಡಾ ಶಿವಮೂರ್ತಿ ಮುರುಘಾ ಶರಣರು
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 06, 2022 | 6:46 PM

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಪ್ರಕರಣದಡಿ ಮುರುಘಾ ಮಠದ ಶ್ರೀಗಳು (Murugha muth swamyji) ​ಜೈಲುಪಾಲಾಗಿದ್ದು, ಪ್ರಕರಣದ 2ನೇ ಆರೋಪಿ ಮಹಿಳಾ ವಾರ್ಡನ್​ಳನ್ನು (Lady warden)​ ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗ ಜೈಲಿನಲ್ಲಿದ್ದ ಮಹಿಳಾ ವಾರ್ಡನ್​ಳನ್ನು ಚಿತ್ರದುರ್ಗ ಪೊಲೀಸರು ​ಏಳು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಪೊಲೀಸರು ಮಹಿಳಾ ವಾರ್ಡನ್​ಳನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆ ನಡೆಸಲಿದ್ದಾರೆ.

 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣು

ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪ್ರಸ್ತುತ ಜೈಲಿನಲ್ಲಿದ್ದಾರೆ. ಈ ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ (ಸೆ 6) ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಸಿ, ತನಿಖಾಧಿಕಾರಿ ಸೂಚಿಸಿದಾಗ ಬರಲು ಸೂಚನೆ ನೀಡಿದ್ದಾರೆ.

ಕಾರಾಗೃಹದಲ್ಲಿ ವಾಕಿಂಗ್​ಗೆ ಅವಕಾಶ ಕೋರಿದ ಸ್ವಾಮೀಜಿ

ಫೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯವು ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿ ಮುರುಘಾಶ್ರೀ ಇಂದು ಬೆಳಿಗ್ಗೆ 6ಕ್ಕೆ ಎದ್ದು ಕುಳಿತರು. ಪ್ರತಿದಿನ ಬೆಳಗ್ಗೆ 6ಕ್ಕೆ ವಾಕಿಂಗ್ ಮಾಡುತ್ತಿದ್ದೆ. ಅದೇ ರೂಢಿಯ ಮೇಲೆ ಎದ್ದಿದ್ದೇನೆ ಎಂದು ಕಾರಾಗೃಹ ಸಿಬ್ಬಂದಿಗೆ ತಿಳಿಸಿದರು. ಈ ವೇಳೆ ಸಿಬ್ಬಂದಿಯು ಕಾರಾಗೃಹದಲ್ಲಿ ವಾಕಿಂಗ್ ಮಾಡಲು ಅವಕಾಶ ಇಲ್ಲ ಎಂದು ತಿಳಿಸಿದರು. ನಿನ್ನೆ ಮಧ್ಯಾಹ್ನ 12 ಗಂಟೆಯಿಂದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಜೈಲಿನಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Tue, 6 September 22

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ