POCSO Case: ಚಿತ್ರದುರ್ಗ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಣೆ; ಸೆಂಟ್ರಲ್ ಜೈಲಿಗೆ ಕರೆದೊಯ್ದ ಪೊಲೀಸರು

ವಿದ್ಯಾರ್ಥಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಶರಣರಿಗೆ ಮತ್ತೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

POCSO Case: ಚಿತ್ರದುರ್ಗ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಣೆ; ಸೆಂಟ್ರಲ್ ಜೈಲಿಗೆ ಕರೆದೊಯ್ದ ಪೊಲೀಸರು
ಚಿತ್ರದುರ್ಗದ ಡಾ ಶಿವಮೂರ್ತಿ ಮುರುಘಾ ಶರಣರು
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 27, 2022 | 3:28 PM

ಚಿತ್ರದುರ್ಗ: ವಿದ್ಯಾರ್ಥಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಶರಣರಿಗೆ ಮತ್ತೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಅ.10ರವರೆಗೆ ನ್ಯಾಯಾಂಗ ವಿಧಿಸಿ ಚಿತ್ರದುರ್ಗದ 2ನೇ ಜಿಲ್ಲಾ ಹೆಚ್ಚುವರಿ ಸೆಷನ್ಸ್​​ ನ್ಯಾಯಾಲಯ ಇಂದು(ಮಂಗಳವಾರ) ಆದೇಶ ಹೊರಡಿಸಿದೆ. ಆರೋಪಿ ನಂಬರ್​ 2 ಲೇಡಿ ವಾರ್ಡನ್​​ಗೂ 14ದಿನ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಹಿನ್ನೆಲೆ ಪೊಲೀಸರು ಚಿತ್ರದುರ್ಗದ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.

ಹಿನ್ನಲೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿಯ ನ್ಯಾಯಾಂಗ ಬಂಧನ ಸೆಪ್ಟೆಂಬರ್ 14ರಿಂದ ವಿಸ್ತರಣೆಯಾಗಿತ್ತು. ಮುರುಘಾ ಸ್ವಾಮೀಜಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Tue, 27 September 22

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!