ಚಿತ್ರದುರ್ಗ: ವಿದ್ಯಾರ್ಥಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಶರಣರಿಗೆ ಮತ್ತೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಅ.10ರವರೆಗೆ ನ್ಯಾಯಾಂಗ ವಿಧಿಸಿ ಚಿತ್ರದುರ್ಗದ 2ನೇ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಂದು(ಮಂಗಳವಾರ) ಆದೇಶ ಹೊರಡಿಸಿದೆ. ಆರೋಪಿ ನಂಬರ್ 2 ಲೇಡಿ ವಾರ್ಡನ್ಗೂ 14ದಿನ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ ಹಿನ್ನೆಲೆ ಪೊಲೀಸರು ಚಿತ್ರದುರ್ಗದ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.
ಹಿನ್ನಲೆ
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿಯ ನ್ಯಾಯಾಂಗ ಬಂಧನ ಸೆಪ್ಟೆಂಬರ್ 14ರಿಂದ ವಿಸ್ತರಣೆಯಾಗಿತ್ತು. ಮುರುಘಾ ಸ್ವಾಮೀಜಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:21 pm, Tue, 27 September 22