ಜೈಲಿನಿಂದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ​ಆದೇಶ

ಚಿತ್ರದುರ್ಗದ ಮುರುಘಾ ಮಠದಶ್ರೀಗಳ ಪೋಕ್ಸೋ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದರು. ಇದೀಗ, ಪ್ರಕರಣದ ಸಾಕ್ಷಿಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್​ ಆದೇಶ ನೀಡಿದೆ.

ಜೈಲಿನಿಂದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ​ಆದೇಶ
ಮುರುಘಾ ಶ್ರೀ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ವಿವೇಕ ಬಿರಾದಾರ

Updated on:Oct 07, 2024 | 2:36 PM

ಚಿತ್ರದುರ್ಗ, ಅಕ್ಟೋಬರ್​​​ 07: ಪೋಕ್ಸೋ (Pocso) ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ (Chitradurga Murugha Shri) ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಜಾರ್ಜ್​ಶೀಟ್ ಸಲ್ಲಿಸಿದ ಪೊಲೀಸರು: 12 ಮತ್ತು 14 ವರ್ಷದ ಸಂತ್ರಸ್ತೆಯರ ಹೇಳಿಕೆ ಇಲ್ಲಿದೆ

ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ತಲುಪಿದ ಬಳಿಕ ಬಿಡುಗಡೆ ಮುರುಘಾಶ್ರೀ ಜೈಲಿನಿಂದ ಹೊರಗೆ ಬರಲಿದ್ದಾರೆ. ಹೊರಬಂದ ಬಳಿಕ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳಲಿದ್ದಾರೆ.

ಫೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ರದ್ದು ಕೋರಿ ಸಂತ್ರಸ್ತೆ ಪರವಾಗಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮುರುಘಾಶ್ರೀ ಅವರ ಜಾಮೀನು ರದ್ದುಗೊಳಿಸಿತ್ತು. ಸಾಕ್ಷಗಳ ವಿಚಾರಣೆ ಮುಗಿಯುವವರೆಗೆ ಮುರುಘಾಶ್ರೀ ಬಂಧನದಲ್ಲಿರಲು ಸುಪ್ರೀಂಕೋರ್ಟ್​ ಸೂಚಿಸಿತ್ತು. ಇಂದಿಗೆ 13 ಮುಖ್ಯ ಸಾಕ್ಷಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಅವರ ಬಿಡುಗಡೆಗೆ ನ್ಯಾಯಾಲಯ ಆದೇಶ ನೀಡಿದೆ ಎಂದು ಮುರುಘಾಶ್ರೀ ಪರ ವಕೀಲ ಕೆ. ವಿಶ್ವನಾಥಯ್ಯ ಹೇಳಿದರು.

ಚಿತ್ರದುರ್ಗ ಜೈಲಿಗೆ ಕೋರ್ಟ್​ನಿಂದ ಬಿಡುಗಡೆ ಆದೇಶ ಬಂದಿದೆ. ಹೈಕೋರ್ಟ್ ನೀಡಿದ ಷರತ್ತುಬದ್ಧ ಜಾಮೀನಿನ್ವಯ ಮಧ್ಯಾಹ್ನ 4ಗಂಟೆ ವೇಳೆಗೆ ಮುರುಘಾಶ್ರೀ ಬಿಡುಗಡೆಯಾಗುತ್ತಾರೆ. ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮುರುಘಾಶ್ರೀ ಇರುವಂತಿಲ್ಲ. ಹೀಗಾಗಿ ಮುರುಘಾಶ್ರೀಗಳು ಬಿಡುಗಡೆ ಬಳಿಕ ದಾವಣಗೆರೆಗೆ ತೆರಳುತ್ತಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:55 pm, Mon, 7 October 24

ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ