POCSO Case: ಪೀಠ ತ್ಯಾಗಕ್ಕೆ ಶಿವಮೂರ್ತಿ ಮುರುಘಾಶ್ರೀ ನಕಾರ: ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ
ಪೀಠ ತ್ಯಾಗ ಮಾಡದ ಹಿನ್ನೆಲೆ, ಮಾಜಿ ಸಚಿವ H. ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ ನಡೆಯಲಿದೆ.
ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ (POCSO Case) ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಪೀಠ ತ್ಯಾಗ ಮಾಡದ ಹಿನ್ನೆಲೆ, ಮಾಜಿ ಸಚಿವ H. ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ ನಡೆಯಲಿದೆ. ಮಠದ ಪರಂಪರೆ, ಸಂಪ್ರದಾಯ ನಿರ್ವಹಣೆ ಕುರಿತು, ಮುಂದಿನ ನಡೆ ಬಗ್ಗೆ ಚರ್ಚಿಸಲು ಮುಖಂಡರು ಸಭೆ ಕರೆದಿದ್ದಾರೆ. ಶ್ರೀಗಳ ಪೀಠ ತ್ಯಾಗಕ್ಕೆ ಆಗ್ರಹಿಸಿ ಹೋರಾಟದ ರೂಪುರೇಷೆ ಬಗ್ಗೆ ಚರ್ಚೆ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಮಠದ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದು, ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿದ್ದಾರೆ.
ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್ ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು. ಮುರುಘಾ ಮಠದಿಂದ ನಡೆಸಲಾಗುತ್ತಿರುವ ಎಸ್.ಜೆ.ಎಂ ವಿದ್ಯಾಪೀಠದ ಸುಮಾರು 5000 ನೌಕರರಿಗೆ ವೇತನ ನೀಡಲು ಚೆಕ್ಗೆ ಅಧ್ಯಕ್ಷರಾದ ಶಿವಮೂರ್ತಿ ಶರಣರ ಸಹಿ ಅಗತ್ಯವಾಗಿದೆ ಎಂದು ವಕೀಲರು ವಾದ ಮಂಡಿಸಿದ್ದರು.
ನಿಮ್ಮ ಸಮಸ್ಯೆಯಿಂದ ಯಾವುದೇ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು
ಚೆಕ್ ಹಾಗೂ ಇತರ ದಾಖಲೆಗಳಿಗೆ ಸಹಿ ಹಾಕಲು ಅವಕಾಶ ನೀಡಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆರಂಭಿಸಿದೆ. ಮಠದ ಸಿಬ್ಬಂದಿ ಮತ್ತು ಶಿಕ್ಷಣ ಸಂಸ್ಥೆಯ ಸಿಬ್ಬಂದಿಗೆ ವೇತನ ಪಾವತಿ ಹಾಗೂ ಇತರ ಖರ್ಚುಗಳಿಗಾಗಿ ಪ್ರತಿತಿಂಗಳು 200ಕ್ಕೂ ಚೆಕ್ಗಳಿಗೆ ಮುರುಘಾ ಶರಣರು ಸಹಿ ಹಾಕಬೇಕಿದೆ. ಇಲ್ಲದಿದ್ದರೆ ವೇತನ ಪಾವತಿ ಸಾಧ್ಯವಾಗುವುದಿಲ್ಲ ಎಂದು ಮುರುಘಾ ಶರಣರ ಪರ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದ್ದಾರೆ. ವಾದ ಆಲಿಸಿದ ಹೈಕೋರ್ಟ್, ‘ನಿಮ್ಮ ಸಮಸ್ಯೆಯಿಂದ ಯಾವುದೇ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು. ಬಂಧನಕ್ಕೆ ಮೊದಲು ಹೇಗೆ ಸಂಬಳ ನೀಡಲಾಗುತ್ತಿತ್ತು ಎನ್ನುವ ಬಗ್ಗೆ ವಿವರವಾದ ಮಾಹಿತಿ ಇರುವ ಮೆಮೊ ಸಲ್ಲಿಸಿ’ ಎಂದು ಮುರುಘಾ ಶರಣರ ಪರ ವಕೀಲರಿಗೆ ಸೂಚನೆ ನೀಡಿತು.
ಹೈಕೋರ್ಟ್ ಮೆಟ್ಟಿಲೇರುವ ಮೊದಲು ಜೈಲಿನಿಂದಲೇ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣರ ಪರ ವಕೀಲರು ಚಿತ್ರದುರ್ಗದ ಸೆಷನ್ ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್, ಸೆ 20ರಂದು ಅನುಮತಿ ನಿರಾಕರಿಸಿ ಆದೇಶ ಹೊರಡಿಸಿತ್ತು. ಮುರುಘಾ ಮಠದಿಂದ ನಡೆಸಲಾಗುತ್ತಿರುವ ಎಸ್ಜೆಎಂ ವಿದ್ಯಾಪೀಠದ ಸುಮಾರು 5000 ನೌಕರರಿಗೆ ವೇತನ ನೀಡಲು ಚೆಕ್ಗೆ ಅಧ್ಯಕ್ಷರಾದ ಶಿವಮೂರ್ತಿ ಶರಣರ ಸಹಿ ಅಗತ್ಯವಾಗಿದೆ ಎಂಬ ಸ್ವಾಮೀಜಿ ವಕೀಲರ ವಾದವನ್ನು ಸೆಷನ್ ಕೋರ್ಟ್ ಒಪ್ಪಿರಲಿಲ್ಲ.
ಮುರುಘಾ ಶರಣರ ಪರ ವಕೀಲರ ವಾದವನ್ನು ವಿರೋಧಿಸಿದ್ದ ಸರ್ಕಾರಿ ವಕೀಲರು, ಕಾರಾಗೃಹದಲ್ಲಿವವರಿಗೆ ಸಹಿ ಮಾಡುವ ಅಧಿಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಶ್ರೀಮಠದ ಆಸ್ತಿ-ಪಾಸ್ತಿಗಳಿಗೆ ತೊಂದರೆಗಳಾಗುವ ಸಾಧ್ಯತೆ ಇರುತ್ತದೆ. ಈಗಾಗಲೇ ಮಠಕ್ಕೆ ಪ್ರಭಾರ ಸ್ವಾಮೀಜಿ ಹಾಗೂ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಹೀಗಾಗಿ ಮುರುಘಾ ಶರಣರಿಗೆ ಸಹಿ ಹಾಕುವ ಅಧಿಕಾರ ಕೊಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಸರ್ಕಾರಿ ವಕೀಲರ ವಾದ ಒಪ್ಪಿದ್ದ ಕೋರ್ಟ್ ಚೆಕ್ಗೆ ಸಹಿ ಮಾಡಲು ಶ್ರಿಗಳಿಗೆ ಅವಕಾಶ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಮುರುಘಾ ಶರಣರು ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.