AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಮೈಸೂರಿನಲ್ಲೇ ಸಂತ್ರಸ್ತ ಬಾಲಕಿ, ತಾಯಿಯ ಹೇಳಿಕೆ ದಾಖಲು

ಅವರಿಂದ ವರ್ಷಗಟ್ಟಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಬಾಲಕಿ ಮತ್ತು ಆಕೆಯ ತಾಯಿ ಹೇಳಿಕೆ ದಾಖಲಿಸಿದರು.

ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಮೈಸೂರಿನಲ್ಲೇ ಸಂತ್ರಸ್ತ ಬಾಲಕಿ, ತಾಯಿಯ ಹೇಳಿಕೆ ದಾಖಲು
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
TV9 Web
| Edited By: |

Updated on:Oct 18, 2022 | 12:41 PM

Share

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಬಾಲಕಿ ಮತ್ತು ಆಕೆಯ ತಾಯಿಯ ಹೇಳಿಕೆಯನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸಿಆರ್​ಪಿಸಿ 161ರ ಅಡಿಯಲ್ಲಿ ನಗರದ ಒಡನಾಡಿ ಸಂಸ್ಥೆಯಲ್ಲಿಯೇ ನಿನ್ನೆ (ಅ 17) ಸಂಜೆ ದಾಖಲಿಸಿಕೊಂಡರು. ಕೊವಿಡ್ ಪಿಡುಗು ವ್ಯಾಪಿಸಿಕೊಂಡಿದ್ದ ಸಂದರ್ಭದಲ್ಲಿ ಮುರುಘಾ ಶರಣರು ಲೇಡಿ ವಾರ್ಡನ್ ಮೂಲಕ ತಮ್ಮ ಕೋಣೆಗೆ ಕರೆಸಿಕೊಳ್ಳುತ್ತಿದ್ದರು. ಅವರಿಂದ ವರ್ಷಗಟ್ಟಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಬಾಲಕಿ ಮತ್ತು ಆಕೆಯ ತಾಯಿ ಹೇಳಿಕೆ ದಾಖಲಿಸಿದರು. ಇಬ್ಬರೂ ನೀಡಿರುವ ಹೇಳಿಕೆಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿವೆ ಎಂದು ಪೊಲೀಸ್ ಮೂಲಗಳು ಟಿವಿ9ಗೆ ಮಾಹಿತಿ ನೀಡಿವೆ.

ಚಿತ್ರದುರ್ಗದಿಂದ ಬಂದಿದ್ದ ಮೂವರು ಪೊಲೀಸ್ ಅಧಿಕಾರಿಗಳು ಸಂತ್ರಸ್ತ ಬಾಲಕಿಯರು ಮತ್ತು ಪೋಷಕರಿಂದ ಸೆಕ್ಷನ್ 161ರ ಅಡಿಯಲ್ಲಿ ಹೇಳಿಕೆ ಪಡೆದರು. ಬಾಲಕಿಯ ಆರೋಗ್ಯ ಸಮಸ್ಯೆ, ಭದ್ರತಾ ದೃಷ್ಟಿಯಿಂದ ವಿಚಾರಣೆ ನಡೆಯುತ್ತಿದೆ. 2-3 ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆಯಿದೆ ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್​ಲಿ ಹೇಳಿದರು. ಮಕ್ಕಳ ಹೇಳಿಕೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಮೈಸೂರಿನ ಒಡನಾಡಿ ಸಂಸ್ಥೆಯಿಂದ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆಯಲಾಗಿತ್ತು. ಮಕ್ಕಳು ಪೋಷಕರೊಂದಿಗೆ ಮೈಸೂರಿನಲ್ಲಿ ಇದ್ದಾರೆ.

ಪ್ರಭಾರ ಪೀಠಾಧ್ಯಕ್ಷರಾಗಿ ಬಸವಪ್ರಭುಶ್ರೀ ನೇಮಕ

ಚಿತ್ರದುರ್ಗದ ಮುರುಘಾ ಮಠಕ್ಕೆ ಪ್ರಭಾರ ಪೀಠಾಧ್ಯಕ್ಷರ ನೇಮಕವಾಗಿದೆ. ಹಲವರ ವಿರೋಧದ ನಡುವೆಯೂ ಕಾನೂನು ಪ್ರಕ್ರಿಯೆ ಮೂಲಕ ಅಧಿಕೃತವಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ಅನುಮತಿ ಪಡೆದು ಬಸವಪ್ರಭುಶ್ರೀ ನೇಮಕ ಕುರಿತು ಮುರುಘಾಮಠ ನಿನ್ನೆ (ಅಕ್ಟೋಬರ್ 16) ಅಧಿಕೃತ ಪ್ರಕಟಣೆ ಹೊರಡಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಧಾರ್ಮಿಕ, ಸೇವಾ, ಪೂಜಾ ಕಾರ್ಯಗಳು ಮಠದ ಪರಂಪರೆ ಮುಂದುವರೆಸಿಕೊಂಡು ಹೋಗಲು ಪ್ರಕಟಣೆಯಲ್ಲಿ ತಿಳಿಸಿದೆ.

ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಸವಪ್ರಭು ಶ್ರೀ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪೂಜೆ, ದಾಸೋಹ,‌ ಮಠದ ಕೆಲಸ ನೋಡಿಕೊಳ್ಳಲು ಶಿವಮೂರ್ತಿ ಮುರುಘಾ ಶರಣರಿಂದ ಆದೇಶ ಸಿಕ್ಕಿದೆ. ನಿಷ್ಠೆಯಿಂದ ಭಕ್ತಿಯಿಂದ ಸೇವಾಕಾರ್ಯ ಮಾಡುತ್ತೇನೆ. ಮುರುಘೇಶ, ಗುರು ಬಸವೇಶನ ಸೇವೆ ಮಾಡುತ್ತೇನೆ ಎಂದು ಹೇಳಿದರು. ಮುರುಘಾಶ್ರೀ ಆಶೀರ್ವಾದ, ಮಾರ್ಗದರ್ಶನದಲ್ಲಿ ಎಲ್ಲಾ ಮಠದ ಶ್ರೀಗಳು, ಎಲ್ಲಾ ಭಕ್ತರ ಆಶಯದಂತೆ ಸೇವೆ ಮಾಡುತ್ತೇನೆ. ಭಕ್ತರು ಎಂದಿನಂತೆ ಸಹಕರಿಸಬೇಕೆಂದು ಮನವಿ ಮಾಡಿದರು. ತಾತ್ಕಾಲಿಕ ಆದೇಶ, ಮುಂದಿನ ಆದೇಶದವರೆಗೆ ಬಸವಣ್ಣನ ಆಶೀರ್ವಾದ, ಗುರುವಿನ ಆಶೀರ್ವಾದ, ಮುರುಘಾಶ್ರೀ ಆಶೀರ್ವಾದ ಶಕ್ತಿಯಿಂದ ಜವಬ್ದಾರಿ‌ ನಿರ್ವಹಿಸುತ್ತೇನೆ ಎಂದು ಹೇಳಿದರು.

ನ್ಯಾ.ಎಸ್.ಬಿ.ವಸ್ತ್ರದಮಠ್​​ಗೆ ಪವರ್ ಆಫ್​ ಅಟಾರ್ನಿ

ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿರುವ ಮುರುಘಾ ಶ್ರೀಗಳು ವಿವಿಧ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳುವ ಪವರ್ ಆಫ್​ ಅಟಾರ್ನಿಯನ್ನು ಮುರುಘಾ ಮಠದ ಎಸ್​​​​ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯೂ ಆಗಿರುವ ನಿವೃತ್ತ ನ್ಯಾ.ಎಸ್.ಬಿ.ವಸ್ತ್ರದಮಠ್ ಅವರಿಗೆ ನೀಡಿದ್ದಾರೆ. ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ-ಪೋಕ್ಸೋ ಕೇಸ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಪವರ್ ಆಫ್ ಅಟಾರ್ನಿ ಜಾರಿಗೆ ಹೈಕೋರ್ಟ್ ಅನುಮತಿ ನೀಡಿತ್ತು.

ಅದರಂತೆ ವಸ್ತ್ರದಮಠ್​ ಅವರಿಗೆ ಮುರುಘಾಶ್ರೀ ಪವರ್ ಆಫ್​ ಅಟರ್ನಿ ನೀಡಿದ್ದಾರೆ. ಎಸ್​​​​ಜೆಎಂ ವಿದ್ಯಾಪೀಠದ ಚೆಕ್ ಸಹಿ ಸೇರಿದಂತೆ ವಿವಿಧ ಆಡಳಿತಾತ್ಮಕ ನಿರ್ಧಾರಕ್ಕಾಗಿ ವಸ್ತ್ರದಮಠ್​ಗೆ ಅಧಿಕೃತವಾಗಿ ನೋಟರಿ ಮಾಡಿ ಪವರ್ ಆಫ್​ ಅಟರ್ನಿ ಹಸ್ತಾಂತರ ಮಾಡಿದರು.

ಮುರುಘಾಮಠದ ಎಸ್​ಜೆಎಂ ವಿದ್ಯಾಪೀಠದ ಕಾರ್ಯದರ್ಶಿಗೆ ಪವರ್ ಆಫ್ ಅಟರ್ನಿ ಹಸ್ತಾಂತರ ಹಿನ್ನೆಲೆ ಎಸ್​ಜೆಎಂ ವಿದ್ಯಾಪೀಠದ ಆಡಳಿತ ಅಧಿಕಾರ ಕಾರ್ಯದರ್ಶಿಗೆ ಸಿಗಲಿದೆ. ಮುರುಘಾಶ್ರೀ, ಎಸ್​ಜೆಎಂ ವಿದ್ಯಾಪೀಠದ ಅದ್ಯಕ್ಷರು, ಮಠದ ಪೀಠಾದ್ಯಕ್ಷರು ಆಗಿರುವ ಮುರುಘಾ ಶ್ರೀಗಳು ಫೋಕ್ಸೋ ಪ್ರಕರಣದಲ್ಲಿ ಬಂಧನ ಹಿನ್ನೆಲೆ ಎಸ್ ಜೆ ಎಂ ವಿದ್ಯಾಪೀಠದ ಆಡಳಿತಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆ ಸಂಸ್ಥೆಯ ಸಿಬ್ಬಂದಿಗೆ ಸಂಬಳ ನೀಡುವುದು ತಡವಾಗಿತ್ತು. ಹೈಕೋರ್ಟ್ ಅನುಮತಿ ಪಡೆದು ಜೈಲಿನಲ್ಲೇ ಮುರುಘಾಶ್ರೀ ಸಹಿ ಮಾಡಿದ್ದರು.

Published On - 12:41 pm, Tue, 18 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ