ಸರ್ಕಾರದ ಕಮಿಷನ್ ಬಗ್ಗೆ ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರ ಎಂದ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ

ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರವಾದದ್ದು. ಸರ್ಕಾರ, ಜನಪ್ರತಿನಿಧಿ, ಅಧಿಕಾರಿಗಳು ಪರ್ಸೆಂಟೇಜ್ ಕೇಳಿಲ್ಲ ಎಂದು ಕಾಗಿನೆಲೆ ಮಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪರ್ಸೆಂಟೇಜ್ ಕೊಟ್ಟು ಅನುದಾನ ಪಡೆಯುವ ಸ್ಥಿತಿಯಿಲ್ಲ.

ಸರ್ಕಾರದ ಕಮಿಷನ್ ಬಗ್ಗೆ ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರ ಎಂದ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ
ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಸುದ್ದಿಗೋಷ್ಠಿ
Follow us
TV9 Web
| Updated By: ಆಯೇಷಾ ಬಾನು

Updated on: Apr 20, 2022 | 2:37 PM

ಚಿತ್ರದುರ್ಗ: ಮಠಗಳ ಅನುದಾನದಲ್ಲಿ ಸರ್ಕಾರ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಸುದ್ದಿಗೋಷ್ಠಿ ನಡೆಸಲಾಗಿದೆ. ಚಿತ್ರದುರ್ಗದ ಬೋವಿ ಮಠದಲ್ಲಿ ಶ್ರೀಗಳಿಂದ ಸುದ್ದಿಗೋಷ್ಠಿ ನಡೆದಿದ್ದು ಒಕ್ಕೂಟದ ಅಧ್ಯಕ್ಷ ಕಾಗಿನೆಲೆ ಮಠದ ನಿರಂಜನಾನಂದಪುರಿ ಶ್ರೀ, ಪ್ರ.ಕಾರ್ಯದರ್ಶಿ ಶಿವಶರಣ ಮಾದಾರ ಚನ್ನಯ್ಯ, ಮಠದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ, ಬೋವಿ ಮಠದ ಇಮ್ಮಡಿ‌ಸಿದ್ಧರಾಮೇಶ್ವರ ಶ್ರೀ, ಕುಂಚಿಟಿಗ ಮಠದ ಶಾಂತವೀರ ಶ್ರೀ, ಭಗೀರಥ ಮಠದ ಪುರುಷೋತ್ತಮಾನಂದಪುರಿ ಶ್ರೀ, ಮಾಚಿದೇವ ಮಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ, ಗಾಣಿಗ ಮಠದ ಬಸವಕುಮಾರ್ ಶ್ರೀ ಸೇರಿ ವಿವಿಧ‌ ಮಠಾಧೀಶರು ಭಾಗಿಯಾಗಿದ್ದರು.

ಮಠಗಳಿಗೆ ಸರ್ಕಾರ ನೀಡಿದ ಅನುದಾನದಲ್ಲಿ ಪರ್ಸೆಂಟೇಜ್ ಆರೋಪಕ್ಕೆ ಸಂಬಂಧಿಸಿ ದಿಂಗಾಲೇಶ್ವರ ಶ್ರೀಗಳ ಹೇಳಿಕೆ ಬಗ್ಗೆ ಒಕ್ಕೂಟ ಪ್ರತಿಕ್ರಿಯೆ ನೀಡಿದೆ. ಸಮುದಾಯದ ಪ್ರಗತಿಗೆ ಸರ್ಕಾರದಿಂದ ಅನುದಾನ ಪಡೆದಿದ್ದೇವೆ. ಬಿಎಸ್ವೈ ಸರ್ಕಾರದಿಂದ ಈವರೆಗೂ ಅನುದಾನ ಪಡೆದಿದ್ದೇವೆ. ಆದ್ರೆ ನಾವು ಯಾರಿಗೂ ಪರ್ಸೆಂಟೇಜ್ ನೀಡಿಲ್ಲ. ಸರ್ಕಾರ, ಅಧಿಕಾರಿಗಳು ಯಾರೂ ಸಹ ಪರ್ಸೆಂಟೇಜ್ ಬೇಡಿಕೆಯಿಟ್ಟಲ್ಲ. ಸರ್ಕಾರದ ಅನುದಾನ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಿದೆ ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ತಿಳಿಸಿದ್ದಾರೆ.

ದಿಂಗಾಲೇಶ್ವರ ಶ್ರೀಗಳ ಆರೋಪ ಸತ್ಯಕ್ಕೆ ದೂರವಾದದ್ದು. ಸರ್ಕಾರ, ಜನಪ್ರತಿನಿಧಿ, ಅಧಿಕಾರಿಗಳು ಪರ್ಸೆಂಟೇಜ್ ಕೇಳಿಲ್ಲ ಎಂದು ಕಾಗಿನೆಲೆ ಮಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಪರ್ಸೆಂಟೇಜ್ ಕೊಟ್ಟು ಅನುದಾನ ಪಡೆಯುವ ಸ್ಥಿತಿಯಿಲ್ಲ. ಅಂತಹ ಪರಿಸ್ಥಿತಿ ಬಂದರೆ ನಮಗೆ ಅದರ ಅಗತ್ಯವೂ ಇಲ್ಲ. ಭಕ್ತರು ನೀಡಿದ ಕಾಣಿಕೆಯಲ್ಲೇ ಮಠ, ಸಮಾಜದ ಅಭಿವೃದ್ಧಿಯಾಗುತ್ತೆ ಎಂದರು.

ಇದನ್ನೂ ಓದಿ: ಕೊವಿಡ್: ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ₹500 ದಂಡ

Jet Airways: ಮತ್ತೆ ಹಾರಾಟ ನಡೆಸಲು ರೆಕ್ಕೆ ಬಿಚ್ಚುವುದಕ್ಕೆ ಸಜ್ಜಾಗಿದೆ ಜೆಟ್​ ಏರ್​ವೇಸ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ