AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್: ಗುತ್ತಿಗೆ ಆಧಾರಿತ ವೈದ್ಯ ವಜಾ

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್ ವಿಡಿಯೋ ಮಾಡಿಸಿದ್ದ ಗುತ್ತಿಗೆ ಆಧಾರಿತ ವೈದ್ಯ ಅಭಿಷೇಕ್​ ನನ್ನು ಸೇವೆಯಿಂದ ವಜಾ ಮಾಡಿ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್​ರಿಂದ ಆದೇಶ ಹೊರಡಿಸಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಕೆಲಸದಿಂದ​ ವಜಾ ಮಾಡಲಾಗಿದೆ. ಡಿಫರೆಂಟ್ ಮತ್ತು ಯುನೀಕ್ ಆಗಿ ಪ್ರಿವೆಡ್ಡಿಂಗ್ ಶೂಟ್ ಮಾಡಿಸುವ ಭರದಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಗುತ್ತಿಗೆ ಆಧಾರಿತ ವೈದ್ಯ ಡಾ.ಅಭಿಷೇಕ್​​ ಯಡವಟ್ಟು ಮಾಡಿಕೊಂಡಿದ್ದಾರೆ. 

ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್: ಗುತ್ತಿಗೆ ಆಧಾರಿತ ವೈದ್ಯ ವಜಾ
ಪ್ರಿವೆಡ್ಡಿಂಗ್ ಫೋಟೋಶೂಟ್
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Feb 09, 2024 | 10:33 PM

Share

ಚಿತ್ರದುರ್ಗ, ಫೆಬ್ರವರಿ 9: ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್ (Pre Wedding Shoot)​ ಮಾಡಿಸಿದ್ದ ಗುತ್ತಿಗೆ ಆಧಾರಿತ ವೈದ್ಯ ಡಾ.ಜಗದೀಶ್​ನನ್ನು ಸೇವೆಯಿಂದ ವಜಾ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಿವೆಡ್ಡಿಂಗ್ ಶೂಟ್ ವಿಡಿಯೋ ಮಾಡಲಾಗಿತ್ತು. ನಿಯಮ ಬಾಹಿರ ಕೃತ್ಯ, ಕರ್ತವ್ಯ ಲೋಪ ಹಿನ್ನೆಲೆ ಕೆಲಸದಿಂದ ವಜಾ ಮಾಡಲಾಗಿದೆ. ಡಿಫರೆಂಟ್ ಮತ್ತು ಯುನೀಕ್ ಆಗಿ ಪ್ರಿವೆಡ್ಡಿಂಗ್ ಶೂಟ್ ಮಾಡಿಸುವ ಭರದಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಗುತ್ತಿಗೆ ಆಧಾರಿತ ವೈದ್ಯ ಡಾ.ಅಭಿಷೇಕ್​​ ಯಡವಟ್ಟು ಮಾಡಿಕೊಂಡಿದ್ದಾರೆ.

‘ಆಪರೇಷನ್ ನಾಗಪ್ಪ’ ಶೀರ್ಷಿಕೆಯಡಿ ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ಆಪರೇಷನ್ ಥಿಯೇಟರ್​​ನಲ್ಲಿ ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಲಾಗಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ವೈರಲ್​ ಆಗಿದೆ. ಜೊತೆಗೆ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಕಿಡಿಕಾರಲಾಗಿದೆ.

ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ: ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರಲ್ಲಿ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಮಾತನಾಡಿ,​ ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ್ರೀವೆಡ್ಡಿಂಗ್ ಶೂಟ್: ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳ ಉಳಿವಿಗೆ ಪ್ರತಿಜ್ಞೆ ತೊಟ್ಟ ‘ಅನಂತಗಾಯತ್ರಿ’

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ.

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನ ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರು ಗಮನಹರಿಸಬೇಕು ಎಂದು ಹೇಳಿದ್ದಾರೆ.

ಚಿತ್ರದುರ್ಗ ಡಿಹೆಚ್​​ಒ ಡಾ.ರೇಣುಪ್ರಸಾದ್ ಹೇಳಿದ್ದಿಷ್ಟು

ಈ ವಿಚಾರವಾಗಿ ಚಿತ್ರದುರ್ಗ ಡಿಹೆಚ್​​ಒ ಡಾ.ರೇಣುಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ಆಸ್ಪತ್ರೆ ಆಪರೇಷನ್ ಥಿಯೇಟರ್ ದುರ್ಬಳಕೆ ಆಗಿದೆ. ಆಪರೇಷನ್ ಥಿಯೇಟರ್ ಕೆಲ ತಿಂಗಳಿಂದ್ ಸ್ಥಗಿತ ಆಗಿತ್ತು. ಭರಮಸಾಗರ ಆಸ್ಪತ್ರೆ ವೈದ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದೇವೆ.

ಇದನ್ನೂ ಓದಿ: ಚಿತ್ರದುರ್ಗ ಸರ್ಕಾರಿ ಆಪರೇಷನ್ ಥಿಯೇಟರಿನಲ್ಲೇ ಪ್ರಿವೆಡ್ಡಿಂಗ್ ವಿಡಿಯೋ ಶೂಟ್, ಪೇಚಿಗೆ ಸಿಲುಕಿದ ಜೋಡಿ!

ಒಂದು ತಿಂಗಳ ಹಿಂದೆ ಡಾ.ಜಗದೀಶ್ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿ ಆಗಿ ನೇಮಕ ಆಗಿದ್ದರು. ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದರು. ಇದೀಗ ಗುತ್ತಿಗೆ ಆಧಾರಿತ ವೈದ್ಯ ಡಾ.ಜಗದೀಶ್​ನನ್ನು ಸೇವೆಯಿಂದ ವಜಾ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:08 pm, Fri, 9 February 24

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More