ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರದ ಟಿಕೆಟ್​ನ್ನು ಗೋವಿಂದ ಕಾರಜೋಳ ಅವರಿಗೆ ನೀಡಲಾಗಿದ್ದು, ಈ ಹಿನ್ನಲೆ ಟಿಕೆಟ್​ ಆಕಾಂಕ್ಷಿಯಾಗಿದ್ದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ರಘುಚಂದನ್‌ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಂಡಾಯವೆದ್ದಿದ್ದು, ಈ ಮಧ್ಯೆ ಇಂದು(ಮಾ.29) ಕೋಟೆನಾಡಿಗೆ ಗೋವಿಂದ ಕಾರಜೋಳ ಅವರು ಎಂಟ್ರಿ ಕೊಟ್ಟಿದ್ದು, ರಘುಚಂದನ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆಯೇ ಗೋವಿಂದ ಕಾರಜೋಳ ವಿರುದ್ಧ ಪ್ರತಿಭಟನೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 29, 2024 | 8:13 PM

ಚಿತ್ರದುರ್ಗ, ಮಾ.29:  ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು. ಈ ನಡುವೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕಟ್​ ಆಕಾಂಕ್ಷಿಯಾಗಿದ್ದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ರಘುಚಂದನ್​ಗೆ ಟಿಕೆಟ್​ ಕೈತಪ್ಪಿದ್ದು, ಗೋವಿಂದ್​ ಕಾರಜೋಳ(Govind Karjol) ಅವರಿಗೆ ಟಿಕೆಟ್​ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ವಿರೋಧದ ನಡುವೆ ಇಂದು(ಮಾ.29) ಕೋಟೆನಾಡಿಗೆ ಗೋವಿಂದ ಕಾರಜೋಳ ಅವರು ಎಂಟ್ರಿ ಕೊಟ್ಟಿದ್ದು, ರಘುಚಂದನ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಗೋಬ್ಯಾಕ್ ಕಾರಜೋಳ ಘೋಷಣೆ ಕೂಗಿ ಆಕ್ರೋಶ

ಈ ಹಿನ್ನಲೆ ಚಿತ್ರದುರ್ಗ ನಗರ ಪ್ರವೇಶಕ್ಕೂ ಮೊದಲೇ ಚಳ್ಳಕೆರೆ ಗೇಟ್ ಬಳಿ ಕಾರು ಅಡ್ಡಗಟ್ಟಿ ಕಾರಜೋಳ್ ವಿರುದ್ಧ ಕಿಡಿಕಾರಿದ್ದು, ಗೋಬ್ಯಾಕ್ ಕಾರಜೋಳ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕುನುಗ್ಗಲಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಚಿತ್ರದುರ್ಗ ಬಿಜೆಪಿ ಟಿಕೆಟ್ ಮಿಸ್: ಯಡಿಯೂರಪ್ಪ-ವಿಜಯೇಂದ್ರ ವಿರುದ್ಧ ಬಂಡಾಯವೆದ್ದ ತಂದೆ-ಮಗ

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ

ಇನ್ನು ಚಿತ್ರದುರ್ಗದಲ್ಲಿ ಬೆಂಬಲಿಗರ ಸಭೆ ಬಳಿಕ ಮಾತನಾಡಿದ್ದ ಎಂ.ಚಂದ್ರಪ್ಪ, ‘ಏಪ್ರಿಲ್‌ 3ರಂದು ರಘುಚಂದನ್ ನಾಮಪತ್ರ ಸಲ್ಲಿಕೆಗೆ ಚಿಂತನೆ ಮಾಡಲಾಗಿದೆ. 8 ಕ್ಷೇತ್ರದಲ್ಲಿರುವ ಬೆಂಬಲಿಗರು ನನ್ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದರು. ಇನ್ನೂ ಕಾಲ‌ ಮಿಂಚಿಲ್ಲ, ಬಿಜೆಪಿ ಟಿಕೆಟ್ ಕೇಳುತ್ತಿದ್ದೇವೆ. ನಮ್ಮ ನೋವು ಪಕ್ಷದ ವರಿಷ್ಠರಿಗೆ ಅರ್ಥ ಆಗಿದೆ ಎಂದು ಭಾವಿಸಿದ್ದೇವೆ. ಪುತ್ರನನ್ನು ಚುನಾವಣೆಗೆ ನಿಲ್ಲಿಸುವಂತೆ ಈ ಹಿಂದೆ ಕಾರಜೋಳ ಕೂಡ ಹೇಳಿದ್ದರು. ಈಗ ಗೋವಿಂದ ಕಾರಜೋಳ ಬಂದಿರುವುದು ಸರಿಯೇ ಎಂದು ಕೇಳಿದ್ದೇನೆ ಎನ್ನುವ ಮೂಲಕ ಸ್ವ-ಪಕ್ಷದ ವಿರುದ್ದವೇ ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Fri, 29 March 24

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us