AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಉಚಿತ ಬುಕ್ ಯೋಜನೆಗೆ ಗ್ರಹಣ: ಶೈಕ್ಷಣಿಕ ವರ್ಷ ಮುಗಿಯುತ್ತ ಬಂದ್ರೂ ವಿದ್ಯಾರ್ಥಿಗಳಿಗೆ ಸಿಗದ ಪಠ್ಯಪುಸ್ತಕ!

ಚಿತ್ರದುರ್ಗದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಘೋಷಿಸಿದ್ದ ಉಚಿತ ಪಠ್ಯಪುಸ್ತಕಗಳು ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರೂ ಇನ್ನೂ ಕೈಸೇರಿಲ್ಲ. ರಸಾಯನ ಶಾಸ್ತ್ರ, ಗಣಿತ, ಜೀವಶಾಸ್ತ್ರ ಸೇರಿ ಹಲವು ಪುಸ್ತಕಗಳು ಲಭ್ಯವಿಲ್ಲ. ಪರೀಕ್ಷೆಗೆ ಸಿದ್ಧಗೊಳ್ಳಲು ಪರದಾಡುತ್ತಿರುವ ವಿದ್ಯಾರ್ಥಿಗಳು ಖಾಸಗಿ ಮಾರುಕಟ್ಟೆಯಲ್ಲೂ ಪುಸ್ತಕ ಸಿಗದೆ ಕಂಗಾಲಾಗಿದ್ದಾರೆ.

ಸರ್ಕಾರದ ಉಚಿತ ಬುಕ್ ಯೋಜನೆಗೆ ಗ್ರಹಣ: ಶೈಕ್ಷಣಿಕ ವರ್ಷ ಮುಗಿಯುತ್ತ ಬಂದ್ರೂ ವಿದ್ಯಾರ್ಥಿಗಳಿಗೆ ಸಿಗದ ಪಠ್ಯಪುಸ್ತಕ!
ಉಚಿತ ಬಕ್ಸ್​ ಇಲ್ಲದೆ ಪರದಾಟ
ಬಸವರಾಜ ಮುದನೂರ್
| Edited By: |

Updated on: Nov 19, 2026 | 6:55 PM

Share

ಚಿತ್ರದುರ್ಗ, ನವೆಂಬರ್​​ 19: ಈ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕಗಳ ವಿತರಣೆ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಆದರೆ ಶೈಕ್ಷಣಿಕ ವರ್ಷವೇ ಮುಗಿಯುತ್ತಾ ಬಂದರೂ ಅನೇಕ ವಿದ್ಯಾರ್ಥಿಗಳಿಗೆ ಇನ್ನೂ ಅಗತ್ಯ ಪುಸ್ತಕಗಳೇ ಕೈಸೇರಿಲ್ಲ. ಹೀಗಾಗಿ, ಪರೀಕ್ಷೆಗೆ ತಯಾರಿ ನಡೆಸಿರುವ ವಿದ್ಯಾರ್ಥಿಗಳು ಹಿಡಿಶಾಪ ಹಾಕುವಂತಾಗಿದೆ.

ಪಿಯುಸಿ ವಿದ್ಯಾರ್ಥಿಗಳ ಸಂಕಷ್ಟ!

ರಾಜ್ಯ ಸರ್ಕಾರ ಈ ಸಾಲಿನಿಂದ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯ ಪುಸ್ತಕ ವಿತರಿಸುವ ಯೋಜನೆ ರೂಪಿಸಿದೆ. ಆದರೆ ಚಿತ್ರದುರ್ಗದಲ್ಲಿ ಮಾತ್ರ ಈವರೆಗೆ ಪಿಯುಸಿ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯ ಪುಸ್ತಕಗಳು ಸಿಕ್ಕಿಲ್ಲ. ಪ್ರಥಮ ಪಿಯುಸಿಯ ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ, ದ್ವಿತೀಯ ಪಿಯುಸಿ ಗಣಿತ ಶಾಸ್ತ್ರ, ಜೀವಶಾಸ್ತ್ರ, ಕನ್ನಡ, ಇಂಗ್ಲಿಷ್ ಹಾಗೂ ಕಾಮರ್ಸ್​ನ ವ್ಯವಹಾರ ಅಧ್ಯಯನ ಪುಸ್ತಕಗಳು ಈವರೆಗೆ ವಿದ್ಯಾರ್ಥಿಗಳ ಕೈಸೇರಿಲ್ಲ.

ಇದನ್ನೂ ಓದಿ: ಪದವಿ ಮಾಡದಿದ್ದರೂ ಸಿಗುತ್ತೆ ಸರ್ಕಾರಿ ಕೆಲಸ! PUC ಪಾಸಾದವರಿಗೆ ಇರುವ ಉದ್ಯೋಗಾವಕಾಶಗಳಿವು

ಪರೀಕ್ಷೆಗಳೇ ಸಮೀಪಿಸಿದರು ಸಹ ಸರ್ಕಾರ ಪಠ್ಯ ಪುಸ್ತಕ ವಿತರಿಸದಿರುವುದು ವಿದ್ಯಾರ್ಥಿಗಳ ಹಿಡಿಶಾಪಕ್ಕೆ ಗುರಿ ಆಗಿದೆ. ಒಂದು ಕಡೆ ಸರ್ಕಾರ ಉಚಿತವಾಗಿ ನೀಡುವ ಪುಸ್ತಕಗಳು ಸಿಕ್ಕಿಲ್ಲ. ಮತ್ತೊಂದು ಕಡೆ ಹಣ ಕೊಟ್ಟು ಖರೀದಿಸಲು ಕೂಡ ಖಾಸಗಿ ಬುಕ್ ಸ್ಟಾಲ್​ಗಳಲ್ಲಿ ಪಠ್ಯಪುಸ್ತಕಗಳು ಲಭ್ಯವಿಲ್ಲದಂತಾಗಿದೆ. ಹೀಗಾಗಿ, ವಿದ್ಯಾರ್ಥಿಗಳು ಅಡ್ಡ ಕತ್ತರಿಯಲ್ಲಿ ಸಿಲುಕಿದ್ದು, ಸರ್ಕಾರದ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.

LIVE TV

ಚಿತ್ರದುರ್ಗ ಪಿಯು ಡಿಡಿ ಅಶೋಲ್ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಚಿತ್ರದುರ್ಗ ಪಿಯು ಡಿಡಿ ಅಶೋಲ್​​​ ಪ್ರತಿಕ್ರಿಯಿಸಿದ್ದು, ‘ನಾವು ಮೇ ತಿಂಗಳಲ್ಲೇ ಬೇಡಿಕೆಯನ್ವಯ ಬುಕ್ಸ್​ಗಳಿಗೆ ಸೂಚಿಸಿದ್ದೇವೆ. ಆದರೆ ಕೆಲ ಬುಕ್ ಪ್ರಿಂಟಿಂಗ್ ವಿಳಂಬ ಆಗಿದೆ. ಈ ಬಗ್ಗೆ ಗಮನಹರಿಸಿ ಶೀಘ್ರಗತಿಯಲ್ಲಿ ಬುಕ್ಸ್ ತರಿಸಿ ಎಲ್ಲರಿಗೂ ವಿತರಣೆ ಮಾಡಲು ಪ್ರಯತ್ನಿಸುತ್ತೇವೆ. ಆದರೆ ಯಾವಾಗ ಬುಕ್ಸ್ ಲಭ್ಯವಾಗಲಿವೆ ಎಂಬುದನ್ನು ಈಗಲೇ ಹೇಳಲಾಗದು’ ಎಂದು ಸಮಜಾಯಿಷಿ ನೀಡಿದ್ದಾರೆ.

ಇದನ್ನೂ ಓದಿ: ಹಿರಿಯ ಡಿಡಿಪಿಐ ಹುದ್ದೆಗಳು ಖಾಲಿ-ಖಾಲಿ: ಶಿಕ್ಷಣ ಇಲಾಖೆಯ ಆಡಳಿತಕ್ಕೆ ಭಾರಿ ಹಿನ್ನಡೆ, ಶಿಕ್ಷಣದ ಮೇಲೂ ಪರಿಣಾಮದ ಆತಂಕ

ಒಟ್ಟಾರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲೇ ಅನೇಕ ಪಿಯುಸಿ ವಿದ್ಯಾರ್ಥಿಗಳಿಗೆ ಇನ್ನೂ ಅಗತ್ಯ ಪುಸ್ತಕಗಳು ಕೈಸೇರಿಲ್ಲ. ಹೀಗಾಗಿ, ಪರೀಕ್ಷೆ ಸಮಯದಲ್ಲಿ ಓದಿಕೊಳ್ಳುವುದು ಹೇಗೆ, ಪರೀಕ್ಷೆಗೆ ಸಿದ್ಧಗೊಳ್ಳುವುದು ಹೇಗೆ ಎಂಬ ಚಿಂತೆಯಲ್ಲಿ ವಿದ್ಯಾರ್ಥಿಗಳು ಮುಳುಗಿದ್ದಾರೆ. ಹೀಗಾಗಿ, ಇನ್ನಾದ್ರೂ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಈ ಬಗ್ಗೆ ಗಮನಹರಿಸಿ ಶೀಘ್ರ ಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ ಮುದನೂರ್
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಕಾಡಾನೆ ದಾಳಿಗೆ ರೈತ ಬಲಿ ಬೆನ್ನಲ್ಲೇ ಎನ್‌.ಆರ್‌.ಪುರ ಪಟ್ಟಣ ಸ್ತಬ್ಧ
ಕಾಡಾನೆ ದಾಳಿಗೆ ರೈತ ಬಲಿ ಬೆನ್ನಲ್ಲೇ ಎನ್‌.ಆರ್‌.ಪುರ ಪಟ್ಟಣ ಸ್ತಬ್ಧ
ಆರತಕ್ಷತೆ ದಿನವೇ ಮದುವೆಗೆ ನಿರಾಕರಿಸಿ ಮಾತ್ರೆ ನುಂಗಿದ ವರ; ಮುಂದೇನಾಯ್ತು
ಆರತಕ್ಷತೆ ದಿನವೇ ಮದುವೆಗೆ ನಿರಾಕರಿಸಿ ಮಾತ್ರೆ ನುಂಗಿದ ವರ; ಮುಂದೇನಾಯ್ತು