ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ, ಬೈಕ್ ಸವಾರ ಸಾವು
ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಕಾರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮದ್ಯೆ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ, ಸೆ.7: ಕಂದಾಯ ಇಲಾಖೆ (Revenue Department) ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿಯಾಗಿ (Accident) ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಿನ್ನೆ (ಸೆಪ್ಟೆಂಬರ್ 6) ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಕುನಗಲಿ ಗ್ರಾಮದ ಬಸವರಾಜಪ್ಪ (68) ಮೃತ ಬೈಕ್ ಸವಾರ.
ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಕಂದಾಯ ಸಚಿವರ ಜೊತೆ ತೆರಳಿದ್ದು, ಇವರ ಹಿಂದೆ ಕಟಾರಿಯಾ ಅವರ ಕಾರು ಕೂಡ ಬರುತ್ತಿತ್ತು. ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬರುತ್ತಿದ್ದಂತೆ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ನಾಲ್ವರ ಸಾವು
ಘಟನೆಯಲ್ಲಿ ಬೈಕ್ ಸವಾರ ಬಸವರಾಜಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತಾದರೂ ಮಾರ್ಗಮದ್ಯೆ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಬಂಧ ಕಾರು ಚಾಲಕ ಧನುಷ್ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ