ಬೆಸ್ಕಾಂ ಕಚೇರಿ ಎದುರೇ ಡಿವೈಡರ್ ವಿದ್ಯುತ್ ಕಂಬಕ್ಕೆ ಟ್ರಕ್ ಡಿಕ್ಕಿ

ಚಳ್ಳಕೆರೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೆಸ್ಕಾಂ ಕಚೇರಿ ಬಳಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಬಳಿಯಿದ್ದ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಸ್ಕಾಂ ಕಚೇರಿ ಎದುರೇ ಡಿವೈಡರ್ ವಿದ್ಯುತ್ ಕಂಬಕ್ಕೆ ಟ್ರಕ್ ಡಿಕ್ಕಿ
ಸಾಧು ಶ್ರೀನಾಥ್​

Updated on: Feb 01, 2020 | 10:58 AM

ಚಳ್ಳಕೆರೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೆಸ್ಕಾಂ ಕಚೇರಿ ಬಳಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಬಳಿಯಿದ್ದ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.

ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us