ಚಿತ್ರದುರ್ಗದ ಮಾದಾರ ಚನ್ನಯ್ಯ ಮಠಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಂದು ಚಿತ್ರದುರ್ಗದ ಶಿವಶರಣರ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.
ಚಿತ್ರದುರ್ಗ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಂದು ಚಿತ್ರದುರ್ಗದ ಶಿವಶರಣರ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ಶಿವಶರಣ ಮಾದಾರ ಚನ್ನಯ್ಯ ಮಠದಲ್ಲಿ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ ವಿವಿಧ ಮಠಾಧೀಶರ ಭೇಟಿಯಾಗಲಿದ್ದಾರೆ.
ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದ ಶ್ರೀಗಳ ಭೇಟಿಯಾಗಿ, ಜುಲೈ 12ರಂದು ಮಧ್ಯಾಹ್ನ ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ.
2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಆರ್‌ಎಸ್‌ಎಸ್‌ನ ಚಿಂತನ ಮಂಥನ ಸಭೆಗೂ ಮುನ್ನ ಜುಲೈ 11 ರಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಮೋಹತ್ ಭಾಗವತ್ ಅವರ ಜೊತೆಗಿರಲಿದ್ದಾರೆ. ಮಾದಾರ ಚನ್ನಯ್ಯ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ದಲಿತ ಧಾರ್ಮಿಕ ಮುಖಂಡರೊಂದಿಗೆ ಅವರು ಗುರುಪೀಠದಲ್ಲಿ ವಾಪಸಾಗುವ ಸಾಧ್ಯತೆಯಿದೆ. ಚುನಾವಣೆ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಎಡ ಸಮುದಾಯವನ್ನು ಸೆಳೆಯುವುದು ಈ ಭೇಟಿಯ ಕಾರ್ಯತಂತ್ರವಾಗಿದೆ ಎಂದು ಮೂಲಗಳು ತಿಳಿಸಿವೆ